ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Belagavi News: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

Army officer Death: ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್‌ ಆವರಣದಲ್ಲಿ ಘಟನೆ ನಡೆದಿದೆ. ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜುವಾಗ ಅಧಿಕಾರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಬೆಳಗಾವಿಯಲ್ಲಿ ಈಜುವಾಗ ಹೃದಯಾಘಾತವಾಗಿ ಸೇನಾಧಿಕಾರಿ ಸಾವು

ಮೃತ ಸೇನಾಧಿಕಾರಿ ಅಮಿತ್‌ಸಿಂಗ್. -

Prabhakara R
Prabhakara R Mar 22, 2026 4:09 PM

ಬೆಳಗಾವಿ: ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜುವಾಗಲೇ ಹೃದಯಾಘಾತವಾಗಿ ಸೇನಾಧಿಕಾರಿ ಮೃತಪಟ್ಟಿರುವ ಘಟನೆ (Army officer Death) ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್‌ ಆವರಣದಲ್ಲಿ ನಡೆದಿದೆ. ಹರಿಯಾಣ ಮೂಲದ ಲೆಫ್ಟಿನೆಂಟ್ ‌ಅಮಿತ್‌ಸಿಂಗ್ ಮೃತರು. ಇವರು ಬೆಳಗಾವಿಯ ಎಂಎಲ್ಐಆರ್‌ಸಿ ಕಮಾಂಡೋ ವಿಂಗ್‌‌ನಲ್ಲಿ ಟ್ರೇನಿಂಗ್‌ನಲ್ಲಿ ಅಧಿಕಾರಿಯಾಗಿದ್ದರು ಎಂದು ತಿಳಿದುಬಂದಿದೆ.

ಈಜುವಾಗ ಅಧಿಕಾರಿಗೆ ಹೃದಯಾಘಾತವಾಗಿದೆ. ಅವರನ್ನು ನೀರಿನಿಂದ ಮೇಲಕ್ಕೆ ತಂದು ಲೈಫ್ ಗಾರ್ಡ್ ಪ್ರದೀಪ್ ಕುಮಾರ್ ಪ್ರಥಮ ಚಿಕಿತ್ಸೆ ನೀಡಿದ್ದಾರೆ‌. ಬಳಿಕ ಆಂಬ್ಯುಲೆನ್ಸ್ ಮೂಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯದಲ್ಲೇ ಅಧಿಕಾರಿ ಮೃತಪಟ್ಟಿದ್ದಾರೆ. ಟಿಳಕವಾಡಿ ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತಲೆ ನೋವಿಗೆಂದು ಔಷಧ ಸೇವಿಸಿದ ಬಾಲಕ ಸಾವು

ಮಂಗಳೂರು: ತಲೆನೋವಿಗೆಂದು ಮನೆಯಲ್ಲಿದ್ದ ಔಷಧ ಸೇವಿಸಿದ್ದ ಬಾಲಕ ಮೃತಪಟ್ಟಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕೊಂಡ್ಯಾಡಿ ಎಂಬಲ್ಲಿ ಮಾ. 18ರಂದು ಸಂಜೆ ನಡೆದಿದೆ.

ಕೊಂಡ್ಯಾಡಿ ನಿವಾಸಿ ಸಂಜೀವ ಪೂಜಾರಿ ಅವರ ಪುತ್ರ ರಾಮಕುಂಜದ ಖಾಸಗಿ ಶಾಲಾ 5ನೇ ತರಗತಿ ವಿದ್ಯಾರ್ಥಿ ಚಿರಾಗ್‌ ಎಸ್‌. (10) ಮೃತ ಬಾಲಕ. ಬಾಲಕನಿಗೆ ಪದೇ ಪದೆ ತಲೆನೋವು ಕಾಣಿಸಿಕೊಳ್ಳುತ್ತಿದ್ದು, ಮಾ. 18 ರಂದು ಸಂಜೆ ತಲೆನೋವಿಗೆಂದು ಮನೆಯಲ್ಲಿದ್ದ ಔಷಧ ಕುಡಿದಿದ್ದ. ಬಳಿಕ ಮನೆಯಲ್ಲಿ ಬಾಲಕ ಹೊರಳಾಡುತ್ತಿರುವುದನ್ನು ಕಂಡ ಬಾಲಕನ ತಾಯಿ ಕೂಡಲೇ ತನ್ನ ಪತಿಗೆ ತಿಳಿಸಿದ್ದಾರೆ.

ಕಾಶಿಗೆ ತೆರಳುತ್ತಿದ್ದವರು ಮಸಣಕ್ಕೆ; ಲಾರಿ- ಟಿಟಿ ನಡುವೆ ಡಿಕ್ಕಿ, ಮೂವರು ಸ್ಥಳದಲ್ಲಿಯೇ ಸಾವು

ಮಗನನ್ನು ಸ್ಥಳೀಯವಾಗಿ ವೈದ್ಯರಲ್ಲಿ ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಅಲ್ಲಿನ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಸಂಜೀವ ಪೂಜಾರಿ ನೀಡಿದ ದೂರಿನಂತೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.