ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Belagavi news: ಬೆಳಗಾವಿಯಲ್ಲಿ ಘೋರ ದುರಂತ, ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳೆಯರ ತಲೆ ಕಟ್‌

ಕಬ್ಬಿನ ಗದ್ದೆಗೆ ಕೂಲಿ ಕೆಲಸಕ್ಕೆ ಎಂದು ಇಬ್ಬರು ಮಹಿಳೆಯರು ಬಂದಿದ್ದರು. ಚಾಲಕನ ನಿರ್ಲಕ್ಷ್ಯದಿಂದ ಕೂಲಿಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಟಾವು ವೇಳೆ ಹಿಂದೆ ಮುಂದೆ ನೋಡದೆ ಡ್ರೈವರ್ ವಾಹನ ಚಲಾಯಿಸಿದ್ದಾನೆ. ಇಬ್ಬರೂ ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.

ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳಾ ಕಾರ್ಮಿಕರ ತಲೆ ಕಟ್‌

ಮೃತ ಬಾರವ್ವ ಕೋಬಡಿ, ಲಕ್ಷ್ಮೀಬಾಯಿ ರುದ್ರಗೌಡರ -

ಹರೀಶ್‌ ಕೇರ
ಹರೀಶ್‌ ಕೇರ Dec 18, 2025 9:36 AM

ಬೆಳಗಾವಿ, ಡಿ.18 : ಬೆಳಗಾವಿಯಲ್ಲಿ (Belagavi news) ಘೋರ ದುರಂತವೊಂದು (tragedy) ಸಂಭವಿಸಿದ್ದು, ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಇಬ್ಬರು ಮಹಿಳಾ ಕಾರ್ಮಿಕರು (labour death) ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯರು ಬಾರವ್ವ ಕೋಬಡಿ (60) ಹಾಗೂ ಲಕ್ಷ್ಮೀಬಾಯಿ ರುದ್ರಗೌಡರ (65) ಎಂದು ತಿಳಿದುಬಂದಿದೆ.

ಕಬ್ಬಿನ ಗದ್ದೆಗೆ ಕೂಲಿ ಕೆಲಸಕ್ಕೆ ಎಂದು ಇಬ್ಬರು ಮಹಿಳೆಯರು ಬಂದಿದ್ದರು. ಚಾಲಕನ ನಿರ್ಲಕ್ಷ್ಯದಿಂದ ಕೂಲಿಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಟಾವು ವೇಳೆ ಹಿಂದೆ ಮುಂದೆ ನೋಡದೆ ಡ್ರೈವರ್ ವಾಹನ ಚಲಾಯಿಸಿದ್ದಾನೆ. ಇಬ್ಬರೂ ಮಹಿಳೆಯರ ತಲೆ ಯಂತ್ರದಲ್ಲಿ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಾರ್ಖಾನೆಯಲ್ಲಿ ಬೆಂಕಿ ಅವಘಡ, ಕೋಟ್ಯಂತರ ಮೌಲ್ಯದ ಸ್ವತ್ತು ಭಸ್ಮ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಜೂಪಿಟರ್ ಟೆಕ್ನಾಲಜಿಸ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಬೆಂಗಳೂರಿನ ಆನೇಕಲ್‌ನ ಜಿಗಣಿ ಕೈಗಾರಿಕಾ ಪ್ರದೇಶದ ಜೂಪಿಟರ್ ಟೆಕ್ನಾಲಜಿಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಬೈಕ್‌ಗೆ ಬೊಲೆರೋ ಡಿಕ್ಕಿ, ಮೂವರು ಯುವಕರ ದಾರುಣ ಸಾವು

ಮುಂಜಾನೆ 4 ಗಂಟೆಗೆ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದ ಮಗು ಸಾವು

ಉಡುಪಿ: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ನಡೆದಿದೆ. ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಜಾರಿ ಮಗು ಬಾವಿಯೊಳಗೆ ಬಿದ್ದಿದೆ. ಆಯತಪ್ಪಿ ಬಿದ್ದ ಮಗುವಿನ ರಕ್ಷಣೆಗೆ ತಕ್ಷಣವೇ ತಾಯಿ ಬಾವಿಗಿಳಿದಿದ್ದಾರೆ.

ಲಿಫ್ಟ್‌ನಲ್ಲಿ ಸಿಲುಕಿ KGF ಸಹ - ನಿರ್ದೇಶಕ ಕೀರ್ತನ್ ನಾಡಗೌಡ ಮಗ ಸಾವು ; ಪವನ್‌ ಕಲ್ಯಾಣ್‌ ಟ್ವೀಟ್‌

ತಾಯಿ ನಯನ ಹಗ್ಗದ ಸಹಾಯದಿಂದ ಬಾವಿಗಿಳಿದಿದ್ದಾರೆ. ಆದರೆ ಅಷ್ಟುಹೊತ್ತಿಗಾಗಲೇ ಮಗು ಕೊನೆಯುಸಿರೆಳೆದಿತ್ತು. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.