ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Lakshmi Hebbalkar: ರಾಜ್ಯದ ಸಮಸ್ಯೆಗಳ ಚರ್ಚೆ ಬಿಟ್ಟು ಬಿಜೆಪಿ ರಾಜಕಾರಣ ಮಾಡುತ್ತಿದೆ: ಲಕ್ಷ್ಮೀ ಹೆಬ್ಬಾಳಕರ್

ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುವ ಮೂಲಕ ಬಿಜೆಪಿ ನಾಯಕರು ಸದನ ಹಾಳು ಮಾಡಿದರು. ರಾಜಿನಾಮೆ ನೀಡಿದ ನಂತರವೂ ರಾಜಕಾರಣ ಮಾಡುತ್ತಿದ್ದಾರೆ. ಇದು ಸರಿ ಯಲ್ಲ. ರಾಜ್ಯದ ಬರಗಾಲ, ಜನರ ಸಮಸ್ಯೆಗಳು, ಅಭಿವೃದ್ಧಿ ಹಾಗೂ ಉದ್ಯೋಗ ದಂತಹ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಬದಲು ರಾಜೀನಾಮೆ ವಿಚಾರವನ್ನೇ ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು

ರಾಜ್ಯದ ಸಮಸ್ಯೆಗಳ ಚರ್ಚೆ ಬಿಟ್ಟು ಬಿಜೆಪಿ ರಾಜಕಾರಣ ಮಾಡುತ್ತಿದೆ

-

Profile
Ashok Nayak Sep 5, 2026 7:22 PM

ಬೆಳಗಾವಿ: ರಾಜ್ಯದ ಸಮಸ್ಯೆಗಳು ಹಾಗೂ ಜನರ ಸಮಸ್ಯೆಗಳ ಬಗ್ಗೆ ವಿಧಾನಮಂಡಲದಲ್ಲಿ ಚರ್ಚೆಯಾಗಬೇಕೇ ಹೊರತು, ರಾಜಕಾರಣ ಮಾಡುವುದಕ್ಕಾಗಿಯೇ ಸದನವನ್ನು ಬಳಸಿಕೊಳ್ಳ ಬಾರದು ಎಂದು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್( Lakshmi Hebbalkar) ಹೇಳಿದರು.

ನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಜನತಾ ದರ್ಶನ(Janatha Darshan) ನಡೆಸಿದ ಬಳಿಕ ಮಾಧ್ಯಮ ಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಾಗಿದೆ. ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಾ ಗಿದೆ. ಆದರೆ ಬಿಜೆಪಿಯವರಿಗೆ ಚರ್ಚೆಗಿಂತ ರಾಜಕಾರಣ ಮಾಡುವುದೇ ಮುಖ್ಯವಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Belagavi News: ಬೈಲಹೊಂಗಲದಲ್ಲಿ ಕಾಮಗಾರಿ ವೇಳೆ ಪುರಾತನ ಕಾಲದ ಚಿನ್ನದ ನಾಣ್ಯಗಳು ಪತ್ತೆ!

ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುವ ಮೂಲಕ ಬಿಜೆಪಿ ನಾಯಕರು ಸದನ ಹಾಳು ಮಾಡಿದರು. ರಾಜಿನಾಮೆ ನೀಡಿದ ನಂತರವೂ ರಾಜಕಾರಣ ಮಾಡುತ್ತಿದ್ದಾರೆ. ಇದು ಸರಿ ಯಲ್ಲ. ರಾಜ್ಯದ ಬರಗಾಲ, ಜನರ ಸಮಸ್ಯೆಗಳು, ಅಭಿವೃದ್ಧಿ ಹಾಗೂ ಉದ್ಯೋಗದಂತಹ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಬದಲು ರಾಜೀನಾಮೆ ವಿಚಾರವನ್ನೇ ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

ಕರ್ನಾಟಕ ರಾಜ್ಯದಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಯಾಗಬೇಕಿದೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೆಲಸ ಮಾಡಬೇಕಾಗಿದೆ. ಜನರ ಹಿತಕ್ಕಾಗಿ ಕೈಗೊಳ್ಳುವ ಕ್ರಮಗಳಿಗೆ ಅಡ್ಡಿಪಡಿಸುವ ಬದಲು, ಅವುಗಳ ಬಗ್ಗೆ ಸದನದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹೆಬ್ಬಾಳಕರ್ ಹೇಳಿದರು.

ವಿಧಾನಮಂಡಲದ ಅಧಿವೇಶನದ ಕಲಾಪವನ್ನು ಬಿಜೆಪಿ ಸದಸ್ಯರು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ. ಸದನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ ಬಿಜೆಪಿ ಸದಸ್ಯರು ಬೇರೆ ವಿಚಾರಗಳನ್ನು ಮುಂದಿಟ್ಟುಕೊಂಡು ಕಲಾಪಕ್ಕೆ ಅಡ್ಡಿಪಡಿಸಿದರು ಎಂದು ದೂರಿದರು.

ರಾಜ್ಯದ ಹಿತದೃಷ್ಟಿಯಿಂದ ಈ ಕುರಿತು ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ. ಈಗ ಕರೆದಿರುವ ವಿಶೇಷ ಅಧಿವೇಶನವನ್ನೂ ಹಾಳು ಮಾಡಿದರೆ ಜನ ಅವರನ್ನು ಕ್ಷಮಿಸುವುದಿಲ್ಲ ಎಂದು ಅವರು ಹೇಳಿದರು.