Nippani BJP: ನಿಪ್ಪಾಣಿ ಕ್ಷೇತ್ರದಲ್ಲಿ ಬಿಜೆಪಿ ಬಲವರ್ಧನೆ: 50ಕ್ಕೂ ಹೆಚ್ಚು ಕಾರ್ಯಕರ್ತರ ಸೇರ್ಪಡೆ
ಮಲ್ಲಪ್ಪಾ ಚೌಗಲೆ, ಆನಂದ ಆವಟೆ, ವಿಳಾಸ ಜಳನೆ, ಚಂದ್ರಕಾಂತ ಬೀಳಗೆ, ರಾಜು ಮುಲ್ಲಾ, ರಾಜು ಬೀಳಗೆ, ವಿಕಾಸ ಹೋಗಾಡೇ, ಸಚಿನ್ ಇಂಗರೊಳೆ, ವಿಠ್ಠಲ್ ಬೀಳಗೆ ಸೇರಿದಂತೆ ಅನೇಕರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದರು. ಈ ಮೂಲಕ ಸ್ಥಳೀಯ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಲಭಿಸಿದೆ.
-
ನಿಪ್ಪಾಣಿ: ಕಾಂಗ್ರೆಸ್(Congress) ಹಾಗೂ ರಾಷ್ಟ್ರವಾದಿ ಕಾಂಗ್ರೆಸ್ (National Congress) ಪಕ್ಷದ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ನಿಪ್ಪಾಣಿ ಕ್ಷೇತ್ರದಲ್ಲಿ ಪಕ್ಷ ಇನ್ನಷ್ಟು ಬಲಿಷ್ಠ ವಾಗಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ( MLA Shashikala Jolle) ತಿಳಿಸಿದರು.
ತಾಲೂಕಿನ ಮಾಂಗೂರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ 50ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳಿಂದ ಪ್ರೇರಿತರಾಗಿ ಕಾರ್ಯಕರ್ತರು ಪಕ್ಷ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: BJP Karnataka: ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ
ಮಲ್ಲಪ್ಪಾ ಚೌಗಲೆ, ಆನಂದ ಆವಟೆ, ವಿಳಾಸ ಜಳನೆ, ಚಂದ್ರಕಾಂತ ಬೀಳಗೆ, ರಾಜು ಮುಲ್ಲಾ, ರಾಜು ಬೀಳಗೆ, ವಿಕಾಸ ಹೋಗಾಡೇ, ಸಚಿನ್ ಇಂಗರೊಳೆ, ವಿಠ್ಠಲ್ ಬೀಳಗೆ ಸೇರಿದಂತೆ ಅನೇಕರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದರು. ಈ ಮೂಲಕ ಸ್ಥಳೀಯ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ಲಭಿಸಿದೆ.
ಈ ಸಂದರ್ಭದಲ್ಲಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ(Former MP Annasaheb Jolle) ಉಪಸ್ಥಿತರಿದ್ದು, ಹೊಸದಾಗಿ ಸೇರ್ಪಡೆಯಾದ ಕಾರ್ಯಕರ್ತರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಿಜೆಪಿ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಂತೆ ಕರೆ ನೀಡಿದರು.