ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Belagavi Murder: ಬೆಳಗಾವಿಯಲ್ಲಿ ಆಸ್ತಿಗಾಗಿ ಅತ್ತೆ, ಅಳಿಯನ ಬರ್ಬರ ಕೊಲೆ; ಸಹೋದರಿಯರ ಮಕ್ಕಳಿಂದಲೇ ಕೃತ್ಯ!

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ಕೊಲೆ ಪ್ರಕರಣ ನಡೆದಿದೆ. 10 ಎಕರೆ ಆಸ್ತಿ ಹಂಚಿಕೆ ವಿಚಾರವಾಗಿ ಅಣ್ಣ-ತಮ್ಮಂದಿರು ಮತ್ತು ಅಕ್ಕ-ತಂಗಿಯರ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಕೊಡಲಿಯಿಂದ ಹೊಡೆದು ಬಸವ್ವ ಮತ್ತು ಆಕೆಯ ಆಲಿಯನನ್ನು ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಬೆಳಗಾವಿಯಲ್ಲಿ ಆಸ್ತಿಗಾಗಿ ಅತ್ತೆ, ಅಳಿಯನ ಬರ್ಬರ ಕೊಲೆ!

-

Prabhakara R
Prabhakara R Nov 27, 2026 4:32 PM

ಬೆಳಗಾವಿ: ಆಸ್ತಿಗಾಗಿ ಅತ್ತೆ ಮತ್ತು ಅಳಿಯನನ್ನು ಬರ್ಬರವಾಗಿ ಕೊಲೆ ಮಾಡಿರುವುದು ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ನಡೆದಿದೆ. ಬಸವ್ವ ನಾಯ್ಕರ್(60) ಹಾಗೂ ತಮ್ಮನ ಮಗ ರಮೇಶ್ ನಾಯ್ಕರ್(26) ಕೊಲೆಯಾದವರು. ರವಿ ಮತ್ತು ಪುಂಡಲೀಕ ಕೊಲೆಗೈದ ಆರೋಪಿಗಳಾಗಿದ್ದಾರೆ.

10 ಎಕರೆ ಆಸ್ತಿ ಹಂಚಿಕೆ ವಿಚಾರವಾಗಿ ಅಣ್ಣ-ತಮ್ಮಂದಿರು ಮತ್ತು ಅಕ್ಕ-ತಂಗಿಯರ ನಡುವೆ ಆಗಾಗ ಜಗಳವಾಗುತ್ತಿತ್ತು. ಬಸವ್ವ ಅವರ ಸಹೋದರಿಯರ ಮಕ್ಕಳಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಕೊಡಲಿಯಿಂದ ಹೊಡೆದು ಹತ್ಯೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ ಸೇರಿ ಸ್ಥಳೀಯ ಪೊಲೀಸರು ಹಾಗೂ ಸುಕೋ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನು ಘಟನೆ ಕುರಿತು ಎಸ್ಪಿ ಕೆ.ರಾಮರಾಜನ್ ಪ್ರತಿಕ್ರಿಯಿಸಿ, ನಿನ್ನೆ ಆಸ್ತಿಗಾಗಿ ಸಹೋದರಿಯರ ಮಕ್ಕಳಿಂದಲೇ ಕೊಲೆಯಾಗಿದೆ. ರವಿ ಮತ್ತು ಪುಂಡಲೀಕ ಎಂಬವರು ಕೊಲೆ ಮಾಡಿದ್ದಾರೆಂಬ ಮಾಹಿತಿ ಇದೆ. ಸ್ಥಳ ಪರಿಶೀಲನೆ ಮಾಡಿ ಮಾರ್ಗದರ್ಶನ ಮಾಡಿದ್ದೇನೆ. ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕುಟುಂಬದಲ್ಲಿ ಆಸ್ತಿ ವಿವಾದ ಸಾಕಷ್ಟು ವರ್ಷಗಳಿಂದ ಇತ್ತು. ಮಾರ್ಚ್ ತಿಂಗಳಲ್ಲಿ ರವಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಎಷ್ಟು ಜನ ಸೇರಿ ಕೊಲೆ ಮಾಡಿದ್ದಾರೆ ಎಂಬ ತನಿಖೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.