Kaka Patil: "ಕಾಕಾ ಪಾಟೀಲ್ ನಿಂಗೂ ಫ್ರೀ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದ ಮಾಜಿ ಶಾಸಕ ಇನ್ನಿಲ್ಲ
ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾ ಪಾಟೀಲ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ 70ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ.


ಬೆಳಗಾವಿ: ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾ ಪಾಟೀಲ್ ( Kaka Patil) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ 70ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ. ರಾಜ್ಯ ಕಾಂಗ್ರೆಸ್ನ ಹಿರಿಯ ರಾಜಕಾರಣಿ ಕಾಕಾ ಸಾಹೇಬ್ ಪಾಟೀಲ್ ನಿಧನ (Passes Away) ಸುದ್ದಿ ಕೇಳಿ ಕಾರ್ಯಕರ್ತರು ಆಘಾತಗೊಂಡಿದ್ದಾರೆ.
1999ರಿಂದ 2013 ರವರೆಗೆ ಸತತ ಮೂರು ಬಾರಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನ ಸಭಾ ಕ್ಷೇತ್ರದಿಂದ ಕಾಕಾಸಾಹೇಬ್ ಪಾಟೀಲ್ ಶಾಸಕರಾಗಿದ್ದರು. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬೆಂಬಲಿಗರನ್ನು ಕಾಕಾಸಾಹೇಬ್ ಪಾಟೀಲ್ ಅಗಲಿದ್ದು, ನಿಪ್ಪಾಣಿಯಲ್ಲಿ ಇಂದು ಅಂತ್ಯಕ್ರಿಯೆ ಜರುಗಲಿದೆ. ಕಾಕಾ ಪಾಟೀಲ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಗ್ಯಾಂರಂಟಿ ಡೈಗಾಲ್‌ನಿಂದ ಫೇಮಸ್
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕ್ಕಾರಕ್ಕೇರಲು ಗ್ಯಾಂರಂಟಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಪ್ರಚಾರದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಮಹಾದೇವಪ್ಪ ನಿಂಗೂ ಫ್ರೀ .. ಕಾಕಾ ಪಾಟೀಲ್ ನಿಂಗೂ ಫ್ರೀ ಎಂದು ಹೇಳಿದ್ದರು. ಇದು ವೇದಿಕೆ ಮೇಲಿದ್ದವರನ್ನು ನಗೆಗಡಲಿನಲ್ಲಿ ತೇಲಿಸಿತ್ತು. ಚುನಾವಣಾ ಸಂದರ್ಭದಲ್ಲಿ ಪಾಟೀಲ್ ಅವರು ನಿರಂತರವಾಗಿ ಕೆಲಸ ಮಾಡಿದ್ದರು.
ಈ ಸುದ್ದಿಯನ್ನೂ ಓದಿ: Sunjay Kapur Death: ಪೋಲೋ ಆಡುತ್ತಿದ್ದಾಗಲೇ ಹೃದಯಾಘಾತ- ಕರಿಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ನಿಧನ
ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲವು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಕಾಕಾಪಾಟೀಲ ಆರೋಗ್ಯ ವಿಚಾರಿಸಿದ್ದರು. ವೈದ್ಯರೊಂದಿಗೆ ಮತ್ತು ಕುಟುಂಬಸ್ಥರೊಂದಿಗೆ ಚರ್ಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಕಾಕಾ ಪಾಟೀಲ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದರು.