ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್; ಬೃಹತ್ ಅಕ್ರಮ ಜಾಲ ಬಯಲು
ಚಿನ್ನದಂತೆ ಗಲ್ಫ್ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್ ಸ್ಮಗ್ಲಿಂಗ್ ಮಾಡ್ತಿದ್ದ ಅಕ್ರಮ ಜಾಲವೊಂದು ಇದೀಗ ಸಿಕ್ಕಿ ಬಿದ್ದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಈ ಜಾಲವನ್ನು ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ.
ಸಂಗ್ರಹ ಚಿತ್ರ -
ಬೆಳಗಾವಿ: ಚಿನ್ನದಂತೆ ಗಲ್ಫ್ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್ ಸ್ಮಗ್ಲಿಂಗ್ (Diesel Smuggling) ಮಾಡ್ತಿದ್ದ ಅಕ್ರಮ ಜಾಲವೊಂದು ಇದೀಗ ಸಿಕ್ಕಿ ಬಿದ್ದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಈ ಜಾಲವನ್ನು ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ಮೇಲೆ ಮಾಳಮಾರುತಿ ಠಾಣೆ ಪೊಲೀಸರು ದಾಳಿ ನಡೆಸಿದ್ದಾಗ ಡೀಸೆಲ್ ಕಳ್ಳಸಾಗಣೆ ಬೆಳಕಿಗೆ ಬಂದಿದೆ.
ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಟ್ಯಾಂಕರ್‌ನಲ್ಲಿ ತೈಲ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಾಳಮಾರುತಿನಗರ ಪೊಲೀಸರ ತಂಡ, ಇನ್ಸ್‌ಪೆಕ್ಟರ್ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆಸಿದೆ. ದಾಳಿ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಪೆಟ್ರೋಲಿಯಂ ಉತ್ಪನ್ನಗಳು ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ. ಕೂಡಲೇ 17 ಲಕ್ಷ ರೂ. ಮೌಲ್ಯದ 17,000 ಲೀಟರ್ ಡೀಸೆಲ್ ಮತ್ತು ಟ್ಯಾಂಕರ್ ಅನ್ನು ಜಪ್ತಿ ಮಾಡಲಾಗಿದೆ.
ಗಲ್ಫ್ ದೇಶಗಳಿಂದ ಅಕ್ರಮವಾಗಿ ತೈಲ ಉತ್ಪನ್ನಗಳನ್ನು ಭಾರತಕ್ಕೆ ತರಲಾಗುತ್ತಿದ್ದು, ಈ ಜಾಲದಲ್ಲಿ ಮಹಾರಾಷ್ಟ್ರ ಹಾಗೂ ರಾಜಸ್ಥಾನದ ಖದೀಮರು ಕೂಡ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಅಕ್ರಮವಾಗಿ ತರಲಾಗುತ್ತಿರುವ ಈ ಡೀಸೆಲ್ ಅನ್ನು ಕಾಳಸಂತೆಯಲ್ಲಿ ಅರ್ಧ ದರಕ್ಕೆ ಮಾರಾಟ ಮಾಡಲಾಗುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ವಿವಿಧ ಡೀಸೆಲ್ ಬಂಕ್‌ಗಳಿಗೆ ಸರಬರಾಜು ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.
ತುಮಕೂರು ಮೂಲದ ಟ್ಯಾಂಕರ್ ಮಾಲೀಕ ಅರಿಹಂತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಲ್ಫ್ ರಾಷ್ಟ್ರಗಳಿಂದ ಅಕ್ರಮವಾಗಿ ತೈಲ ಸಾಗಾಟ ಮಾಡುತ್ತಿದ್ದದ್ದು ಗೊತ್ತಾಗಿದೆ. ಸದ್ಯ ಪೊಲೀಸರು ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಜೆಡಿಎಸ್ ಶಾಸಕಿ ಮನೆಗೆ ನುಗ್ಗಿ ಧಮ್ಕಿ
ಅಕ್ರಮ ಮರಳು ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಮನೆಗೆ ನುಗ್ಗಿ ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದೆ. ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪೊಲಿಸರಿಗೆ ಶಾಸಕಿ ಕರೆಮ್ಮ ಸೂಚನೆ ನೀಡಿದ್ದರು. ಈ ಸೂಚನೆ ಮೇರೆಗೆ ಪೊಲೀಸರು, ಅಕ್ರಮ ಮರಳು ದಂಧೆ ಮೇಲೆ ದಾಳಿ ಮಾಡಿದ್ದು, ಜೆಸಿಬಿ,ಟಿಪ್ಪರ್, ಟ್ರಾಕ್ಟರ್ ಗಳು ಸೇರಿದಂತೆ ಏಳು ವಾಹನಗಳನ್ನು ಜಪ್ತಿ ಮಾಡಿ ಕೇಸ್ ದಾಖಲಿಸಿದ್ದರು. ಇದರಿಂದ ಆಕ್ರೋಶಗೊಂಡ ದಂಧೆಕೋರರು ಶಾಸಕಿ ಕರೆಮ್ಮ ನಿವಾಸಕ್ಕೆ ನುಗ್ಗಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕದಂತೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಸ್ವತಃ ಶಾಸಕಿ ಕರೆಮ್ಮ ಆರೋಪಿಸಿದ್ದು, ಈ ಸಂಬಂಧ ದೇವದುರ್ಗ ಠಾಣೆಯಲ್ಲಿ ಸುಮಾರು 60ಕ್ಕೂ ಹೆಚ್ಚು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.