ಸಚಿವ ಸತೀಶ್ ಜಾರಕಿಕೊಳಿ ಭಾವ ವೈ. ಮಂಜುನಾಥ್ ಮನೆ ಮೇಲೆ ಇಡಿ ದಾಳಿ
ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಗೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸ ಸೇರಿದಂತೆ 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ವೈ.ಮಂಜುನಾಥ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿದ್ದು, ಅಬಕಾರಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.
ಸಂಗ್ರಹ ಚಿತ್ರ -
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಗೆ ಇಡಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸ ಸೇರಿದಂತೆ 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ದೂರದರ್ಶನ ಕೇಂದ್ರದ ಸಮೀಪದ ಮನೆಗೆ ಗೋವಾ ಹಾಗೂ ಬೆಂಗಳೂರು ಮೂಲದ ಇಡಿ ಅಧಿಕಾರಿಗಳ ತಂಡ ಭೇಟಿ ನೀಡಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ವೈ.ಮಂಜುನಾಥ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿದ್ದು, ಅಬಕಾರಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಗೋವಾ ಮತ್ತು ಬೆಂಗಳೂರಿನ ಜಾರಿ ನಿರ್ದೇಶನಾಲಯದ ಜಂಟಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯನ್ನು ಕೈಗೊಂಡಿದೆ. 10 ಕ್ಕೂ ಅಧಿಕ ಅರೆಸೇನಾ ಪಡೆ ಭದ್ರತೆಯಲ್ಲಿ ಈ ದಾಳಿ ನಡೆದಿದೆ. ಅಬಕಾರಿ ಹೆಚ್ಚುವರಿ ಆಯುಕ್ತ ವೈ ಮಂಜುನಾಥ್ ಅವರಿಗೆ ಸಂಬಂಧಿಸಿದಂತೆ ಬೆಳಗಾವಿ, ಮೈಸೂರು, ಬೆಂಗಳೂರು, ಅರಿಸಿಕೇರೆ ಸೇರಿ ಆರು ಕಡೆ ದಾಳಿ ನಡೆದಿದೆ. ಬೆಂಗಳೂರಲ್ಲಿರುವ ಅಪಾರ್ಟ್‌ಮೆಂಟ್, ಹಾಸನ ಜಿಲ್ಲೆಯ ಅರಿಸೀಕರೆಯಲ್ಲಿ ಆಪ್ತನ ಮನೆ ಮೇಲೆಯೂ ದಾಳಿ ನಡೆದಿರುವ ಮಾಹಿತಿ ಲಭ್ಯವಾಗಿದೆ.
ಐನಾಪುರ ಗ್ರಾಮದಲ್ಲಿರುವ ವೈ ಮಂಜುನಾಥ ಸ್ನೇಹಿತನ ಮನೆ ಮೇಲೆ ದಾಳಿ ನಡೆದಿದೆ. ವೈ. ಮಂಜುನಾಥ್ ಅವರು ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ ಪುತ್ರರಾಗಿದ್ದು, ಬೇನಾಮಿ ಹೆಸರಲ್ಲಿ ಜಮೀನು, ಬಾರ್, ರೆಸ್ಟೋರೆಂಟ್ ಸೇರಿದಂತೆ ಅಕ್ರಮ ಆಸ್ತಿ ಸಂಪಾದನೆಯ ಆರೋಪವನ್ನು ಎದುರಿಸುತ್ತಿದ್ದಾರೆ.
ಕೇರಳದಾದ್ಯಂತ ಹಲವು ಆಸ್ಪತ್ರೆ, ನಿವಾಸಗಳ ಮೇಲೆ ED ದಾಳಿ
ನಕಲಿ ದಾಖಲೆಗಳನ್ನು ಬಳಸಿ ಅಕ್ರಮ ಅಂಗಾಂಗ ದಾನಕ್ಕೆ ನೆರವಾಗುತ್ತಿದ್ದ ಜಾಲಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ED) ಗುರುವಾರ ಕೇರಳದಾದ್ಯಂತ ಹಲವು ಆಸ್ಪತ್ರೆಗಳು ಮತ್ತು ನಿವಾಸಗಳಲ್ಲಿ ದಾಳಿ ನಡೆಸಿದೆ. ಕೊಚ್ಚಿ, ತಿರುವನಂತಪುರಂ ಮತ್ತು ಕೊಟ್ಟಾಯಂ ಜಿಲ್ಲೆಗಳ ಐದು ಸ್ಥಳಗಳಲ್ಲಿ ಇಂದು ಬೆಳಗಿನ ಜಾವ ಇಡಿ ದಾಳಿ ನಡೆಸಿ, ತೀವ್ರ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ED Raid: ಸೀಟು ಬ್ಲಾಕಿಂಗ್ ದಂಧೆ, ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ಇಡಿ ದಾಳಿ
ಕಳೆದ ಕೆಲವು ವರ್ಷಗಳಿಂದ ಅಕ್ರಮ ಅಂಗಾಂಗ ದಾನ ದಂಧೆಯಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದ ಜಾಲದ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ಪೊಲೀಸರು ದಾಖಲಿಸಿದ ಹಲವಾರು ಎಫ್‌ಐಆರ್‌ಗಳ ಆಧಾರದ ಮೇಲೆ ಇಡಿ ಈ ತನಿಖೆ ಆರಂಭಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು, ಅಂಗಾಂಗ ದಾನಿಗಳು, ಸ್ವೀಕರಿಸುವವರು ಹಾಗೂ ಆಸ್ಪತ್ರೆಗಳ ನಡುವೆ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ದಾನಗಳನ್ನು ಸುಗಮಗೊಳಿಸಲು ಗಣನೀಯ ಮೊತ್ತವನ್ನು ವಿಧಿಸುತ್ತಿದ್ದರು ಎಂದು ಆರೋಪಿಸಲಾಗಿದೆ.