ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; ಮೂವರ ಸಾವು: ಮಾಜಿ ಶಾಸಕನ ಪುತ್ರನಿಗೆ ಗಂಭೀರ ಗಾಯ

Belagavi News: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮಾಜಿ ಶಾಸಕ ಆರ್.ವಿ. ಪಾಟೀಲ್ ಅವರ ಪುತ್ರ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ; ಮೂವರ ಸಾವು:

Profile Ramesh B May 5, 2025 8:04 PM

ಬೆಳಗಾವಿ: ಬೈಲಹೊಂಗಲ (Bailhongal) ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೊರ ವಲಯದ ಬೈಲಹೊಂಗಲ-ಬೆಳಗಾವಿಗೆ ಸಂಪರ್ಕಿಸುವ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ (Road Accident) ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ಬೈಲಹೊಂಗಲ ಹೋಗುತ್ತಿದ್ದ ಕಿಯಾ ಕಾರು ಓವರ್ ಟೆಕ್ ಮಾಡಲು ಹೋಗಿ ಎದುರಗಡೆಯಿಂದ ಬರುತ್ತಿದ್ದ ಅಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಮೂಲಗಳು ತಿಳಿಸಿವೆ (Belagavi News). ಇನ್ನು ಅಪಘಾತದಲ್ಲಿ ಮಾಜಿ ಶಾಸಕ ಆರ್.ವಿ. ಪಾಟೀಲ್ ಅವರ ಪುತ್ರ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಅಲ್ಟೋ ಕಾರಿನಲ್ಲಿದ್ದ ಅಯುಮ್ ಹಾಗೂ ಅವರ ಪತ್ನಿ ಮತ್ತು ಮಗು ಎಂದು ಗುರತಿಸಲಾಗಿದೆ. ಮತ್ತೊಂದು ಮಗುವಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಕಿಯಾ ಕಾರಿನಲ್ಲಿದ್ದ ಮಾಜಿ ಶಾಸಕ ಆರ್.ವಿ. ಪಾಟೀಲ್ ಪುತ್ರ ಸೇರಿದಂತೆ ಮತ್ತೊಬ್ಬರು ಗಾಯಗೊಂಡಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ: Drowned: ನೀರು ಕುಡಿಯಲು ಹೋಗಿದ್ದ ಮೂವರು ಬಾಲಕರು ಕೆರೆಗೆ ಬಿದ್ದು ಸಾವು

ರಾಮನಗರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ರಾಮನಗರ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ (Ramanagara news) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಕಬ್ಬಾಳು ಗ್ರಾಮದಲ್ಲಿ ನಡೆದ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕಾರು ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಕ್ಕುರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.