ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Heart attack: ಸಂಭ್ರಮಾಚರಣೆ ವೇಳೆ ಹೃದಯಾಘಾತ- RCB ಅಭಿಮಾನಿ ಸಾವು!

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಿನ್ನೆ ರಾತ್ರಿ ಆರ್ ಸಿ ಬಿ ಗೆದ್ದ ಬಳಿಕ ಸಂಭ್ರಮಾಚರಣೆಯ ವೇಳೆ ಆರ್‌ಸಿಬಿ ಫ್ಯಾ ಅಭಿಮಾನಿಯಾಗಿದ್ದ ಮಂಜುನಾಥ್ ಈರಪ್ಪ ಕಂಬಾರ್ (28) ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆರ್‌ಸಿಬಿ ಗೆಲವು ಸಂಭ್ರಮಾಚರಣೆಯ ವೇಳೆ ಕುಣಿಯುತ್ತಲೇ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದಾನೆ.

ಸಂಭ್ರಮಾಚರಣೆ ವೇಳೆ ಹೃದಯಾಘಾತ- RCB ಅಭಿಮಾನಿ ಸಾವು!

Rakshita Karkera Rakshita Karkera Jun 4, 2025 2:25 PM

ಬೆಳಗಾವಿ: ಮೊದಲ ಬಾರಿಗೆ ಐಪಿಎಲ್ 18ನೇ ಆವೃತ್ತಿಯ ಚಾಂಪಿಯನ್ಸ್ ಆಗಿ ಆರ್‌ಸಿಬಿ ಹೊರಹೊಮ್ಮಿದ್ದು, ಆರ್‌ಸಿಬಿ ಫ್ಯಾನ್ಸ್‌ ಸಂಭ್ರಮ ಮುಗಿಲು ಮುಟ್ಟಿದೆ. ಇದೀಗ ಈ ಸಂಭ್ರಮಾಚರಣೆ ನಡುವೆಯೇ ಬೆಳಗಾವಿಯಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬೆಳಗಾವಿಯಲ್ಲಿ ಸಂಭ್ರಮಾಚರಣೆಯ ವೇಳೆ ಆರ್‌ಸಿಬಿಯ ಕಟ್ಟಾ ಅಭಿಮಾನಿ ಡ್ಯಾನ್ಸ್ ಮಾಡುತ್ತಲೇ, ಕುಸಿದು ಬಿದ್ದು ಹೃದಯಾಘಾತದಿಂದ(Heart attack) ಸಾವನ್ನಪ್ಪಿದ್ದಾನೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಿನ್ನೆ ರಾತ್ರಿ ಆರ್ ಸಿ ಬಿ ಗೆದ್ದ ಬಳಿಕ ಸಂಭ್ರಮಾಚರಣೆಯ ವೇಳೆ ಆರ್‌ಸಿಬಿ ಫ್ಯಾ ಅಭಿಮಾನಿಯಾಗಿದ್ದ ಮಂಜುನಾಥ್ ಈರಪ್ಪ ಕಂಬಾರ್ (28) ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಆರ್‌ಸಿಬಿ ಗೆಲವು ಸಂಭ್ರಮಾಚರಣೆಯ ವೇಳೆ ಕುಣಿಯುತ್ತಲೇ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದಾನೆ.

ಈ ಸುದ್ದಿಯನ್ನೂ ಓದಿ: IPL 2025 Final: ಆರ್‌ಸಿಬಿ-ಪಂಜಾಬ್‌ ಫೈನಲ್‌ ಪಂದ್ಯಕ್ಕೂ ಮುನ್ನ ನಿರ್ದೇಶಕ ರಾಜಮೌಳಿ ಭಾವನಾತ್ಮಕ ಪೋಸ್ಟ್‌

ಮೃತ ಮಂಜುನಾಥ ಕೆ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಹುಚ್ಚು ಅದರಲ್ಲೂ ಐಪಿಎಲ್ ಅಂತ ಬಂದರೆ ಆರ್ ಸಿ ಬಿ ಆತನ ನೆಚ್ಚಿನ ತಂಡವಾಗಿತ್ತು. ಆರ್‌ಸಿಬಿ ಗೆದ್ದ ಕೂಡಲೇ ಗ್ರಾಮದ ಯುವಕರೊಂದಿಗೆ ಮಕ್ಕಳೊಂದಿಗೆ ಕುಣಿದು ಸಂಭ್ರಮಾಚರಣೆ ಮಾಡುತ್ತಿರುವ ವೇಳೆ, ಕುಸಿದು ಬಿದ್ದು ಮಂಜುನಾಥ್ ಸಾವನಪ್ಪಿದ್ದಾನೆ. ಮೃತ ಮಂಜುನಾಥಗೆ ಆರು ತಿಂಗಳ ಹೆಣ್ಣು ಮಗುವಿದೆ.