ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ashok Pattan: ರೈತರ ಬೆಂಬಲದಿಂದ ನಾನು ಗೆಲುವು ಸಾಧಿಸುತ್ತೇನೆ

ಗುರುವಾರ ನಗರದ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಮಾತನಾಡಿದರು. ನಾನು ಯಾರ ಬಣದಲ್ಲಿ ಯೂ ಗುರುತಿಸಿಕೊಂಡಿಲ್ಲ. ನನ್ನ ಕ್ಷೇತ್ರದ ರೈತರ ಒತ್ತಾಯದ ಮೇರೆಗೆ ಚುನಾವಣೆ ಸ್ಪರ್ಧೆ ಮಾಡಿದ್ದು ಗೆಲುವು ಸಾಧಿಸುವ ವಿಶ್ವಾಸ ಇದೆ

ರೈತರ ಬೆಂಬಲದಿಂದ ನಾನು ಗೆಲುವು ಸಾಧಿಸುತ್ತೇನೆ

-

Ashok Nayak Ashok Nayak Oct 10, 2025 12:35 AM

ಬೆಳಗಾವಿ: ತಾಲೂಕಿನ ಜನರ ಒತ್ತಾಯದ ಮೇರೆಗೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಎದುರಿಸುತ್ತಿದ್ದೇನೆ.‌ ರೈತರ ಬೆಂಬಲದಿಂದ ನಾನು ಗೆಲುವು ಸಾಧಿಸುತ್ತೇನೆ ಎಂದು ರಾಮದುರ್ಗ ಕಾಂಗ್ರೆಸ್ ಶಾಸಕ ಹಾಗೂ ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ(
Ramdurga Congress MLA and Assembly Chief Whip Ashok Pattan) ಅಭಿಪ್ರಾಯಪಟ್ಟರು.

ಇದನ್ನೂ ಓದಿ: Bangalore News: ಹಬ್ಬಗಳ ಸಂದರ್ಭದ ಸೊನಾಟಾ ಸಂಗ್ರಹ ತಂದಿದೆ ಹೊಳಪು, ಸೂಕ್ತ ವಿನ್ಯಾಸ

ಗುರುವಾರ ನಗರದ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಮಾತನಾಡಿದರು. ನಾನು ಯಾರ ಬಣದಲ್ಲಿಯೂ ಗುರುತಿಸಿಕೊಂಡಿಲ್ಲ. ನನ್ನ ಕ್ಷೇತ್ರದ ರೈತರ ಒತ್ತಾಯದ ಮೇರೆಗೆ ಚುನಾವಣೆ ಸ್ಪರ್ಧೆ ಮಾಡಿದ್ದು ಗೆಲುವು ಸಾಧಿಸುವ ವಿಶ್ವಾಸ ಇದೆ ಎಂದರು.

ಬಣಗಳ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಸಿದ್ದರಾಮಯ್ಯ ಅವರ ಬಣ. ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕಾರಣದ ಕುರಿತು ಎಲ್ಲರಿಗೂ ಗೊತ್ತಿರುವ ವಿಷಯ. ನಮ್ಮ ಪಕ್ಷದವರೇ ನನ್ನ ವಿರುದ್ಧ ಪ್ರಚಾರ ಮಾಡಿದರೆ ಪಕ್ಷವೇ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂದು ಅಶೋಕ್ ಪಟ್ಟಣ ಹೇಳಿದರು.