ʼಅಬಕಾರಿ ಹಗರಣ ಅಲ್ಲವೇ ಅಲ್ಲʼ; ಸತೀಶ್ ಜಾರಕಿಹೊಳಿ ಮನೆ ಮೇಲೆ ED ದಾಳಿ ನಡೆದಿದ್ಯಾಕೆ? ಇಲ್ಲಿದೆ ಮಾಹಿತಿ
Satish Jarkiholi: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಗೆ ಹಲವು ಕಾರಣಗಳನ್ನು ಊಹಿಸಲಾಗಿತ್ತು. ಆದರೆ ಇದೀಗ ಇ.ಡಿ ಮಾಹಿತಿ ನೀಡಿದೆ.
ಸಂಗ್ರಹ ಚಿತ್ರ -
ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ( Satish Jarkiholi) ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆಯ ಮಾಜಿ ಅಧಿಕಾರಿ ವೈ. ಮಂಜುನಾಥ್ ಅವರ ಕೇಸ್ ಸಂಬಂಧ ಈ ದಾಳಿ ನಡೆದಿದೆ ಎನ್ನಲಾಗುತ್ತಿತ್ತು. ಆದರೆ ಇದೀಗ ಈ ದಾಳಿಗೂ ಮಂಜುನಾಥ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಇಡಿ ತಿಳಿಸಿದೆ. ಸದ್ಯ ಇ.ಡಿ ಅಧಿಕಾರಿಗಳು ಸತೀಶ್ ಆಪ್ತರ ಮನೆ ಮೇಲೆಯೂ ದಾಳಿ ನಡೆಸಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಮೇಲಿನ ದಾಳಿ FEMA–1999ರ ಅಡಿಯಲ್ಲಿ ನಡೆಯುತ್ತಿರುವ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ಇಡಿ ತಿಳಿಸಿದೆ. ದಕ್ಷಿಣ ಆಫ್ರಿಕಾ, ಉಗಾಂಡ ಸೇರಿದಂತೆ ವಿವಿಧ ದೇಶಗಳಲ್ಲಿ ಅಕ್ರಮವಾಗಿ ಹೂಡಿಕೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಆಫ್ರಿಕಾದಲ್ಲಿ ಅಸ್ತಿತ್ವದಲ್ಲಿರುವ ಈ ಗಣಿಗಾರಿಕೆ ಕಂಪನಿಗೆ ಪುತ್ರ ರಾಹುಲ್ ಜಾರಕಿಹೊಳಿ ನಿರ್ದೇಶಕರಾಗಿದ್ದು, ಸತೀಶ್ ಜಾರಕಿಹೊಳಿ ಅವರ ಸಹೋದರಿ ಲಕ್ಷ್ಮಿ ಕೂಡ ನಿರ್ದೇಶಕಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜಾರಕಿಹೊಳಿಯವರ ಪುತ್ರ, ಸಂಸದೆ ಪ್ರಿಯಾಂಕ ಹಾಗೂ ಪುತ್ರ ರಾಹುಲ್ ಹೆಸರುಗಳಲ್ಲಿ ಭಾರಿ ಮೊತ್ತದ ಬಂಡವಾಳ ಹೂಡಿಕೆ ಆರೋಪ ಕೇಳಿ ಬಂದಿದ್ದು, ಕಳೆದ 3 ತಿಂಗಳಿಂದ ಬಂಡವಾಳ ಹೂಡಿಕೆಯ ಅಷ್ಟು ದಾಖಲೆ ಕಲೆ ಹಾಕಿ ಫೆಮಾ ಕಾಯ್ದೆ ಉಲ್ಲಂಘನೆ ಖಚಿತ ಪಡಿಸಿಕೊಂಡು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ಮತ್ತು ಸದಾಶಿವನಗರದ ಸರ್ಕಾರಿ ನಿವಾಸ ಸೇರಿದಂತೆ ಸುಮಾರು 18ಕ್ಕೂ ಅಧಿಕ ಕಡೆಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮುಂದುವರಿದ ಮಧ್ಯಪ್ರಾಚ್ಯ ಸಂಘರ್ಷ: ಇರಾನ್‌ನ 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ
ಬೆಳಗಾವಿಗೆ ಭೇಟಿ ನೀಡಿದ್ದ ರುವಾಂಡಾ ದೇಶದ ರಾಯಭಾರಿ

ಕಳೆದ ಕೆಲ ದಿನಗಳ ಹಿಂದೆ ಪೂರ್ವ ಆಫ್ರಿಕಾದ ರುವಾಂಡಾ ದೇಶದ ರಾಯಭಾರಿ ಜಾಕ್ವೆಲಿನ್ ಮುಕಂಜಿರಾ ಅವರು ಬೆಳಗಾವಿಗೆ ಭೇಟಿ ನೀಡಿದ್ದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಸಭೆ ಆಯೋಜನೆ ಮಾಡಿತ್ತು ಎಂಬ ಮಾಹಿತಿ ಬಯಲಾಗಿದೆ.
ಅಷ್ಟೇ ಅಲ್ಲದೆ ರುವಾಂಡಾ ದೇಶದ ರಾಯಭಾರಿ ಗೋಕಾಕ್ ನಗರಕ್ಕೂ ಭೇಟಿ ನೀಡಿದ್ದರು. ಸತೀಶ್ ಶುಗರ್ಸ್ ಮತ್ತು ಪ್ರಿಯಾಶಕ್ತಿ ಸ್ಟೀಲ್ ಘಟಕಕ್ಕೆ ಭೇಟಿನೀಡಿ ಕಾರ್ಯವಿಧಾನದ ಕುರಿತು ಇಬರು ಮಾಹಿತಿ ಪಡೆದುಕೊಂಡಿದ್ದರು. ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್ ಜಾರಕಿಹೊಳಿ ಉಪಸ್ಥಿತರಿದ್ದು ರುವಾಂಡಾ ದೇಶದ ಅಧಿಕಾರಿಗೆ ಆತಿಥ್ಯ ನೀಡಿದ್ದರು.

ರಾಜಕೀಯ ಪ್ರೇರಿತ ದಾಳಿ ಎಂದ ಸಿಎಂ ಡಿಕೆಶಿ:
ಈ ದಾಳಿಯ ಬೆನ್ನಲ್ಲೇ ತೀವ್ರ ರಾಜಕೀಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. "ಇದು ಸಂಪೂರ್ಣವಾಗಿ ರಾಜಕೀಯ ಪ್ರೇರಿತ ದಾಳಿಯಾಗಿದೆ. ಸರ್ಕಾರದ 100 ದಿನಗಳು ಪೂರೈಸುತ್ತಿರುವ ಸರಿಯಾದ ಸಮಯವನ್ನೇ ಸಾಧಿಸಿ ಕೇಂದ್ರ ಸರ್ಕಾರ ಇಡಿಯನ್ನು ಬಳಸಿಕೊಳ್ಳುತ್ತಿದೆ" ಎಂದು ಅವರು ಆರೋಪಿಸಿದ್ದಾರೆ. ಇನ್ನು ದಾಳಿಗಳ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅವರು ನೇರವಾಗಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.