ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Milk Incentive: ರಾಜ್ಯ ರೈತರಿಗೆ ಗುಡ್‌ನ್ಯೂಸ್‌; ಹಾಲಿನ ಪ್ರೋತ್ಸಾಹಧನ 7 ರೂ.ಗೆ ಹೆಚ್ಚಳ

ಹಾಲಿನ ಪ್ರೋತ್ಸಾಹ ಹೆಚ್ಚಿಸುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ರೈತರಿಗೆ ಪ್ರೋತ್ಸಾಹಧನ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಬೆಲೆ ಏರಿಕೆಯ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತಲೇ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

ರಾಜ್ಯ ರೈತರಿಗೆ ಗುಡ್‌ನ್ಯೂಸ್‌; ಹಾಲಿನ ಪ್ರೋತ್ಸಾಹಧನ 7 ರೂ.ಗೆ ಹೆಚ್ಚಳ

ಸಿಎಂ ಸಿದ್ದರಾಮಯ್ಯ -

Prabhakara R
Prabhakara R Dec 19, 2025 2:21 PM

ಬೆಳಗಾವಿ, ಡಿ.19: ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್‌ನ್ಯೂಸ್‌ ನೀಡಿದ್ದಾರೆ. ಹಾಲಿನ ಪ್ರೋತ್ಸಾಹಧನ ಹೆಚ್ಚಿಸುವುದಾಗಿ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಘೋಷಿಸಿದ್ದು, ಸದ್ಯ ಪ್ರತಿ ಲೀಟರ್‌ ಹಾಲಿಗೆ ನೀಡುತ್ತಿರುವ 5 ರೂ. ಪ್ರೋತ್ಸಾಹ ಧನವನ್ನು (Milk Incentive) ಈ ಅವಧಿಯಲ್ಲಿ 7 ರೂ.ಗೆ ಹೆಚ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ರೈತರಿಗೆ ಪ್ರೋತ್ಸಾಹಧನ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಅವರು, ಬೆಲೆ ಏರಿಕೆಯ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತಲೇ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

ತಮ್ಮ ಸರ್ಕಾರದ ಹಿಂದಿನ ಅವಧಿ (2013-18) ಪ್ರಣಾಳಿಕೆಯ ಭರವಸೆಗಳನ್ನು ಪ್ರಸ್ತಾಪಿಸಿ, 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿದೆ. ಬಜೆಟ್‌ನಲ್ಲಿ ಘೋಷಿಸದ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂಬುದನ್ನು ಕೂಡ ವಿವರಿಸಿದರು. ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳಲ್ಲಿ 293 ಭರವಸೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಜಾರಿಗೆ ತರಲು ತಂತ್ರ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಬಾಕಿ ಪ್ರೋತ್ಸಾಹ ಧನ ಶೀಘ್ರ ಬಿಡುಗಡೆ

ಆರ್. ಅಶೋಕ್ ಅವರು ಹಾಲು ಉತ್ಪಾದಕರಿಗೆ ಹಾಲಿನ ಪ್ರೋತ್ಸಾಹ ಧನ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಇದು ಪೂರ್ತಿ ನಿಜವಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಹಾಲಿನ ದರವನ್ನು ಎರಡು ಬಾರಿ ಹೆಚ್ಚಿಸಿದ್ದೇವೆ. ಒಮ್ಮೆ ಮೂರು ರೂಪಾಯಿ, ಮತ್ತೊಮ್ಮೆ 4 ರೂಪಾಯಿ. ಇದರ ಜತೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿಯಿದ್ದ 630 ಕೋಟಿ ರೂಪಾಯಿಗಳನ್ನೂ ರೈತರಿಗೆ ನೀಡಿದ್ದೇವೆ. 2023-24 ರಿಂದ 2025-26 ರವರೆಗೆ 4048 ಕೋಟಿ ರೂಪಾಯಿಗಳನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಿದ್ದೇವೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಪ್ರೋತ್ಸಾಹಧನ ಮಾತ್ರ ಬಾಕಿ ಇದೆ. ಬಾಕಿ ಇರುವ ಶೀಘ್ರವಾಗಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.

ಗ್ಯಾರಂಟಿಗಳಿಗೆ ಇದುವರೆಗೆ ದಲಿತರ 39 ಸಾವಿರ ಕೋಟಿ ರೂ. ಬಳಕೆ: ಛಲವಾದಿ ನಾರಾಯಣಸ್ವಾಮಿ

2013-14 ರಲ್ಲಿ ನಮ್ಮ ಸರ್ಕಾರ ಕ್ಷೀರಧಾರೆ ಯೋಜನೆಯನ್ನು ಜಾರಿಗೆ ತಂದು, 3 ರೂ. ಇದ್ದ ಪ್ರೋತ್ಸಾಹ ಧನವನ್ನು 5 ರೂ.ಗೆ ಹೆಚ್ಚಿಸಿತ್ತು. ಅದನ್ನು 7 ರೂಗಳಿಗೆ ಹೆಚ್ಚಿಸುತ್ತೇವೆ ಎಂದು ಹೇಳಿದ್ದೇವೆ. ಮುಂದಿನ ದಿನಗಳಲ್ಲಿ ಅದನ್ನೂ ಮಾಡುತ್ತೇವೆ. ನಾವು ಇದನ್ನೆಲ್ಲ ಮಾಡಿದ ಕಾರಣಕ್ಕಾಗಿಯೇ ಹಾಲಿನ ಉತ್ಪಾದನೆ ಬಿಜೆಪಿ ಸರ್ಕಾರದ ಅವಧಿಗಿಂತ ಸುಮಾರು 25-30 ಲಕ್ಷ ಲೀಟರುಗಳಷ್ಟು ಹಾಲನ್ನು ಪ್ರತಿ ದಿನ ರೈತರು ನಮ್ಮ ಡೈರಿಗಳಿಗೆ ಕೊಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ 75 ಲಕ್ಷ ಲೀಟರುಗಳಿಗೆ ಇಳಿದಿದ್ದ ಹಾಲಿನ ಸಂಗ್ರಹ ಈಗ 1.05 ಕೋಟಿ ಲೀಟರುಗಳ ವರೆಗೆ ಏರಿಕೆಯಾಗಿದೆ.

ಅನುಗ್ರಹ ಯೋಜನೆಯಲ್ಲಿ 37.41 ಕೋಟಿ ಪರಿಹಾರ

ನಾವು ಸರ್ಕಾರ 2014 ರಲ್ಲಿ ಅನುಗ್ರಹ ಯೋಜನೆಯನ್ನು ಜಾರಿಗೆ ತಂದಿದ್ದೆವು. ಮೂಲಕ, ಕುರಿ, ಮೇಕೆ, ಎತ್ತು, ಎಮ್ಮೆ, ಹಸು ಮುಂತಾದವುಗಳು ಆಕಸ್ಮಿಕವಾಗಿ ಮರಣ ಹೊಂದಿದರೆ ರೈತರಿಗೆ ತೀವ್ರ ಅನಾನುಕೂಲವಾಗುತ್ತದೆಂದು ತೀರ್ಮಾನಿಸಿ ಪರಿಹಾರ ಕೊಡಲು ಪ್ರಾರಂಭಿಸಿದೆವು. ಇದು ದೇಶದಲ್ಲಿಯೆ ಮಾದರಿ ಕಾರ್ಯಕ್ರಮವಾಗಿದೆ. ಹಿಂದಿನ ಸರ್ಕಾರ 2021 ನೇ ಸಾಲಿನಿಂದ 2023 ರವರೆಗೆ ಈ ಯೋಜನೆಯನ್ನು ಸಂಪೂರ್ಣವಾಗಿ ನಿಲ್ಲಿಸಿತ್ತು.

ಕುರಿ/ಮೇಕೆ ಆಕಸ್ಮಿಕ ಸಾವುಗಳು ಉಂಟಾದ ಸಂದರ್ಭದಲ್ಲಿ ಅವುಗಳ ಮಾಲೀಕರಿಗೆ ಪರಿಹಾರವಾಗಿ ರೂ. 5000 ರೂ.ಗಳನ್ನು ನೀಡಲಾಗುತ್ತಿತ್ತು. ಈ ವರ್ಷದಿಂದ 7500 ರೂಗಳಿಗೆ ಹೆಚ್ಚಿಸಿದ್ದೇವೆ. ನಮ್ಮ ಸರ್ಕಾರ ಬಂದಾಗಿನಿಂದದ ಇಲ್ಲಿಯವರೆಗೆ ರೂ.58 ಕೋಟಿಗಳನ್ನು ಮಾಲೀಕರಿಗೆ ಪರಿಹಾರ ನೀಡಿದ್ದೇವೆ.

ಹಾಗೆಯೇ, ಆಕಸ್ಮಿಕವಾಗಿ ಮರಣ ಹೊಂದಿದ ದನ, ಎಮ್ಮೆ, ಎತ್ತು, ಹೋರಿ ಮತ್ತು ಕಡಸುಗಳಿಗೆ ಮಾಲೀಕರಿಗೆ ಪರಿಹಾರವಾಗಿ ರೂ.10,000 ನೀಡಲಾಗುತ್ತಿತ್ತು. ಈ ವರ್ಷದಿಂದ 15000 ರೂಗಳಿಗೆ ಏರಿಕೆ ಮಾಡಿದ್ದೇವೆ. ನಮ್ಮ ಸರ್ಕಾರ ಬಂದಾಗಿನಿಂದ ಇಲ್ಲಿಯವರೆಗೆ ರೂ.37.41 ಕೋಟಿಗಳನ್ನು ಮಾಲೀಕರಿಗೆ ಪರಿಹಾರವಾಗಿ ನೀಡಿದ್ದೇವೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಆಪ್ತರ ಜೊತೆಗೆ ಸತೀಶ್‌ ಜಾರಕಿಹೊಳಿ ಡಿನ್ನರ್‌ ಮೀಟಿಂಗ್

ಗ್ಯಾರಂಟಿ ಯೋಜನೆಗಳಿಗಾಗಿ 1,06,076 ಕೋಟಿ ವೆಚ್ಚ

ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರದ ಪ್ರಮುಖ ಸ್ಕೀಮ್‌ಗಳಲ್ಲಿ ಗ್ಯಾರಂಟಿ ಯೋಜನೆಗಳೂ ಸೇರಿವೆ. ಮೊದಲಿಗೆ ಈ ಭಾಗದ ಜನರಿಗೆ ಕಳೆದ ಎರಡೂವರೆ ವರ್ಷಗಳಲ್ಲಿ ನಾವು ಎಷ್ಟು ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಜನರ ಖಾತೆಗಳಿಗೆ ವರ್ಗಾವಣೆ ಮಾಡಿದ್ದೇವೆ ಎಂಬ ಮಾಹಿತಿಯನ್ನು ಸದನದ ಮೂಲಕ ಜನರ ಗಮನಕ್ಕೆ ತರಬೇಕಾಗಿರುವುದು ನಮ್ಮ ಜವಾಬ್ಧಾರಿ ಎಂದು ತಿಳಿಸಿದರು.

ನಾವು ಗ್ಯಾರಂಟಿ ಯೋಜನೆಗಳನ್ನು ಪ್ರಾರಂಭ ಮಾಡಿದ ದಿನಾಂಕದಿಂದ ಅಕ್ಟೋಬರ್- ನವೆಂಬರ್ ವರೆಗೆ ನಮ್ಮ ಸರ್ಕಾರ 1,06,076 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದೆ. ಇದರಲ್ಲಿ 46,277 ಕೋಟಿ ರೂಪಾಯಿಗಳನ್ನು ಉತ್ತರ ಕರ್ನಾಟಕದ ಜಿಲ್ಲೆಗಳ ಜನರಿಗಾಗಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಲಾಗಿದೆ. ಒಟ್ಟು ವೆಚ್ಚದಲ್ಲಿ ಶೇ. 43.63 ರಷ್ಟು ಅನುದಾನಗಳು ಈ ಭಾಗದ ಜನರಿಗಾಗಿ ವೆಚ್ಚ ಮಾಡಲಾಗಿದೆ.

ಈ ಸದನದಲ್ಲಿ ಅನೇಕರಿಗೆ ಗ್ಯಾರಂಟಿ ಯೋಜನೆಗಳ ಕುರಿತು ನಕಾರಾತ್ಮಕ ಭಾವನೆಗಳಿವೆ. ಆದರೆ ಇಡೀ ದೇಶದ ಆರ್ಥಿಕತೆ ಕುಸಿಯುತ್ತಿರುವಾಗ ಕರ್ನಾಟಕ ರಾಜ್ಯದ ಆರ್ಥಿಕತೆ ಆರೋಗ್ಯಕರವಾಗಿರುವುದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆ ಬಹಳ ದೊಡ್ಡದಿದೆ.

ಮಾಜಿ ಸಚಿವರುಗಳಾಗಿದ್ದ ಶಶಿಕಲಾ ಜೊಲ್ಲೆಯವರು ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಅವರು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳ ಶಾಲೆ, ಕಾಲೇಜು, ಆಸ್ಪತ್ರೆ ಮುಂತಾದವುಗಳ ಕುರಿತಂತೆ ಹಲವು ಅಂಕಿ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ. ಅವರು ಹೇಳಿರುವ ಅಂಕಿ ಅಂಶಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ ಎಂದು ತಿಳಿಸಿದರು.