Physical Abuse Case: ಮಸೀದಿಯಲ್ಲಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮೌಲ್ವಿ ಬಂಧನ
Belagavi News: ಬೆಳಗಾವಿ ಜಿಲ್ಲೆಯ ಯರಗಟ್ಟಿಯ ಮಸೀದಿಯಲ್ಲಿ ಘಟನೆ ನಡೆದಿತ್ತು. 2023ರ ಅಕ್ಟೋಬರ್ನಲ್ಲಿ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಬೆನ್ನಲ್ಲೇ ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್ (22) ಎಂಬಾತನನ್ನು ಬಂಧಿಸಲಾಗಿದೆ.


ಬೆಳಗಾವಿ: ಮಸೀದಿಯಲ್ಲಿ ಮೌಲ್ವಿಯಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿಯ ಮಸೀದಿಯಲ್ಲಿ ನಡೆದಿದ್ದು, 2023ರ ಅಕ್ಟೋಬರ್ನಲ್ಲಿ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಬೆನ್ನಲ್ಲೇ ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್ (22) ಎಂಬಾತನನ್ನು ಮುರಗೋಡ ಪೊಲೀಸರು ಬಂಧಿಸಿ, ಹಿಂಡಲಗಾ ಜೈಲಿಗಟ್ಟಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ ಎಸಗುವ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಘಟನೆ ನಡೆದು ಎರಡು ವರ್ಷ ಕಳೆದರೂ ಭಯ ಪಟ್ಟು ಬಾಲಕಿ ಪೋಷಕರು ಕೇಸ್ ನೀಡಿರಲಿಲ್ಲ. ವಿಡಿಯೋ ಸಿಗುತ್ತಿದ್ದಂತೆ ಪೊಲೀಸರೇ ಬಾಲಕಿ ತಂದೆಯ ಮನವೊಲಿಸಿ ಕೇಸ್ ದಾಖಲಿಸಿದ್ದಾರೆ.
ಪುನೀತ್ ಕೆರೆಹಳ್ಳಿ ಎಕ್ಸ್ ಖಾತೆಯಲ್ಲಿ ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿತ್ತು. 2023 ಅಕ್ಟೋಬರ್ 5ರಂದು ಬೆಳಗಾವಿ ಜಿಲ್ಲೆಯ ಯರಗಟ್ಟಿಯ ಮಸೀದಿ ಒಂದರಲ್ಲಿ ಹೆಣ್ಣು ಮಗುವಿನ ಮೇಲೆ ನಡೆದಿರುವ ಈ ಅತ್ಯಾಚಾರಕ್ಕೆ ಆ ಮಗುವಿನ ತಂದೆ ನ್ಯಾಯ ಕೇಳುತ್ತಿದ್ದಾರೆ. ಮಸೀದಿಯವರು ಇವರನ್ನು ಹೆದರಿಸಿ ದೂರು ಕೊಡದಂತೆ ತಡೆದಿದ್ದಾರಂತೆ. ಈಗಲೂ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ದಯವಿಟ್ಟು ಕೂಡಲೇ ತನಿಖೆ ಮಾಡಿ ಕ್ರಮ ಜರುಗಿಸಿ ಆ ಹೆಣ್ಣು ಮಗುವಿಗೆ ನ್ಯಾಯ ಕೊಡಿಸಬೇಕೆಂದು ಕೇಳಿಕೊಳ್ಳುತ್ತಿದ್ದೇನೆ. ತಂದೆಯ ಹೆಸರು ಕುತುಬುದ್ದೀನ್ ಎಂದು ಪೋಸ್ಟ್ ಮಾಡಲಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | UP Murder: ಪ್ರಿಯಕರನ ಜೊತೆಗೂಡಿ ಪತಿಯ ಬರ್ಬರ ಹತ್ಯೆ- ಹೊಟ್ಟೆ ಸೀಳಿ, ದೇಹವನ್ನು ಆ್ಯಸಿಡ್ ಹಾಕಿ ಸುಟ್ಟ ದುರುಳರು
ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿ ನೇಣಿಗೆ ಶರಣಾದ ಆರೋಪಿ
ಬೆಂಗಳೂರು: ನಗರದಲ್ಲಿ ಭೀಕರ ಕೊಲೆ ನಡೆದಿದ್ದು, ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿದ (Murder Case) ಆರೋಪಿಯು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಹೊರವಲಯದ ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮಂದಿರ ಮಂಡಲ್ (27) ಹಾಗೂ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವವನ್ನು ಸುಮನ್ (28) ಮಂಡಲ್ ಎಂದು ಗುರುತಿಸಲಾಗಿದೆ. ಕಳೆದ 8 ವರ್ಷದ ಹಿಂದೆ ಬಿಜೋನ್ ಮಂಡಲ್ ಎಂಬಾತನನ್ನು ಮಹಿಳೆ ವಿವಾಹವಾಗಿದ್ದಳು. ದಂಪತಿಗೆ ಆರು ವರ್ಷದ ಮಗನಿದ್ದಾನೆ.
ಕಳೆದ ಎರಡು ವರ್ಷಗಳಿಂದ ದಂಪತಿಯ ಮಧ್ಯೆ ಕಲಹ ನಡೆಯುತ್ತಿತ್ತು. ಹಾಗಾಗಿ ಇಬ್ಬರೂ ಬೇರ್ಪಟ್ಟಿದ್ದರು. ಮಂದಿರ ಗಂಡನ ಮನೆ ತೊರೆದು ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಿದ್ದಳು ಆರೋಪಿ ಸುಮನ್ ಮಂಡಲ್ ಕೊಲೆಯಾದ ಮಹಿಳೆ ಪತಿಯ ಸ್ನೇಹಿತನಾಗಿದ್ದ. ಸುಮನ್ ಹಾಗೂ ಮಂದಿರ ಇಬ್ಬರಿಗೂ ಸ್ನೇಹವಿತ್ತು ಎಂದು ಹೇಳಲಾಗಿದೆ. ಮೊನ್ನೆ ಇಬರ ನಡುವೆ ಗಲಾಟೆಯಾಗಿದೆ. ಸುಮನ್ ಚಾಕುವಿನಿಂದ ಮಂದಿರಾಳ ಕತ್ತನ್ನು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಸುಮನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.