ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BY Vijayendra: ಜನಾಕ್ರೋಶ ಯಾತ್ರೆ ದಿಕ್ಕು ಬದಲಿಸಲು ಕೇಂದ್ರದ ವಿರುದ್ಧ ಕಾಂಗ್ರೆಸ್‌ ಹೋರಾಟ: ವಿಜಯೇಂದ್ರ

BY Vijayendra: ನಮ್ಮ ಜನಾಕ್ರೋಶ ಯಾತ್ರೆಯ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರು ನಾಳೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಜನಾಕ್ರೋಶ ಯಾತ್ರೆ ದಿಕ್ಕು ಬದಲಿಸಲು ಕಾಂಗ್ರೆಸ್‌ ಹೋರಾಟ: ವಿಜಯೇಂದ್ರ

Profile Siddalinga Swamy Apr 16, 2025 5:41 PM

ಬೆಳಗಾವಿ: ನಮ್ಮ ಜನಾಕ್ರೋಶ ಯಾತ್ರೆಯ ದಿಕ್ಕು ಬದಲಿಸಲು ಕಾಂಗ್ರೆಸ್ಸಿನವರು ನಾಳೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿ 3 ಹಂತದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಮೊದಲ ಹಂತದ ಯಾತ್ರೆಯು ಮೈಸೂರಿನಿಂದ ಪ್ರಾರಂಭವಾಗಿ ಮಂಡ್ಯ, ಹಾಸನ, ಮಡಿಕೇರಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಉತ್ತರ ಕನ್ನಡ, ನಿಪ್ಪಾಣಿ ಮೂಲಕ ಇವತ್ತು ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಪ್ರಾರಂಭವಾಗಿದೆ. ಮೊದಲ ಹಂತದ ಜನಾಕ್ರೋಶ ಯಾತ್ರೆ ಪರಿಣಾಮವಾಗಿ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳು ತಲೆ ಕೆಡಿಸಿಕೊಂಡಿದ್ದಾರೆ ಎಂದು ದೂರಿದರು.

ಬೆಂಗಳೂರಿಗೇ ಸೀಮಿತವಾದ ಸರ್ಕಾರ

ಗ್ಯಾರಂಟಿಗಳನ್ನು ನೀಡಿದ್ದು, ಜನರು ಸಂತೋಷ, ನೆಮ್ಮದಿಯಿಂದಿದ್ದಾರೆ ಎಂಬ ಭ್ರಮೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಇದ್ದರು. ಸರ್ಕಾರ ಬಂದಾಗಿನಿಂದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಸದಸ್ಯರು ಬೆಂಗಳೂರಿಗೇ, ಎ.ಸಿ. ರೂಮಿಗೇ ಸೀಮಿತವಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಎಳೆಎಳೆಯಾಗಿ ನಾಡಿನ ಜನರ ಮುಂದೆ ಬಿಚ್ಚಿಡುವ ಕೆಲಸ ಮಾಡುತ್ತಿದ್ದೇವೆ. ಬೆಲೆ ಏರಿಕೆಯ ದುಬಾರಿ ಸರ್ಕಾರದ ಪರಿಣಾಮವಾಗಿ ನಾಡಿನ ಜನರು ತತ್ತರಿಸಿದ್ದಾರೆ, ಆಕ್ರೋಶ ಭರಿತರಾಗಿದ್ದಾರೆ. ನಮ್ಮ ಹೋರಾಟದ ಪರಿಣಾಮ ಮುಖ್ಯಮಂತ್ರಿಗಳಿಗೂ ತಟ್ಟಿದೆ. ಈಗ ಅವರಿಗೆ ಜ್ಞಾನೋದಯ ಆಗುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು.

ಮುಖ್ಯಮಂತ್ರಿಗಳು ಮತ್ತು ಸಚಿವರು ಹಳ್ಳಿಗಳಿಗೆ ತೆರಳಿ ಬೆಲೆ ಏರಿಕೆಯಿಂದ ಪರದಾಡುತ್ತಿರುವ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂದು ಅವರು ಆಗ್ರಹಿಸಿದರು.

ಗ್ಯಾರಂಟಿಗಳಿಂದ ರಾಜ್ಯ ಸಮೃದ್ಧವಾಗಿದೆ ಎಂಬ ಭ್ರಮೆ ಮುಖ್ಯಮಂತ್ರಿಗಳದು. ನಮ್ಮೆಲ್ಲ ಶಾಸಕರು ಮುಖ್ಯಮಂತ್ರಿಗಳ ಬಳಿ ಹೋಗಿ ಅನುದಾನ ಕೇಳಿದಾಗ ಗ್ಯಾರಂಟಿ ಕೊಟ್ಟಿದ್ದೀವಲ್ಲಾ ಎಂದಿದ್ದರು. ಸಿದ್ದರಾಮಯ್ಯನವರ ಸರ್ಕಾರ ಬಂದ ಬಳಿಕ ಡೀಸೆಲ್ ಬೆಲೆ ಐದೂವರೆ ರೂ. ಹೆಚ್ಚಾಗಿದೆ. ಪೆಟ್ರೋಲ್ ಬೆಲೆ 3 ರೂ. ಏರಿಸಿದ್ದಾರೆ. ಇವನ್ನು ಜನಪರ ಮುಖ್ಯಮಂತ್ರಿಗಳು, ಸರ್ಕಾರ ಮಾಡಲು ಸಾಧ್ಯವೇ? ಹಾಲಿನ ದರ 9 ರೂ. ಏರಿಸಿದ್ದಾರೆ. ಇದು ಬಡವರ ಪರ ನಿರ್ಧಾರವೇ? ಎಂದು ಕೇಳಿದರು. 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಮೇಲೆ ದರ ಏರಿಸಿದ್ದಾರೆ. ಕಾಂಟ್ರಾಕ್ಟರ್‌ಗಳು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಡೀ ದೇಶದಲ್ಲಿ ಕೇವಲ 20 ತಿಂಗಳಲ್ಲೇ ತನ್ನ ಜನಪ್ರಿಯತೆ ಕಳಕೊಂಡ ರಾಜ್ಯ ಸರ್ಕಾರ- ಮುಖ್ಯಮಂತ್ರಿಗಳು ಇದ್ದರೆ ಅದು ನಮ್ಮ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ಅವರು ಎಂದು ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | BY Vijayendra: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯ ಮುಚ್ಚಿಡಲು ಕೇಂದ್ರದ ವಿರುದ್ಧ ಅಪಪ್ರಚಾರ: ವಿಜಯೇಂದ್ರ

ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ

ಜಾರಿ ನಿರ್ದೇಶನಾಲಯವು (ಇ.ಡಿ) ನ್ಯಾಷನಲ್ ಹೆರಾಲ್ಡ್ ಕೇಸಿನ ಸಮಗ್ರ ತನಿಖೆ ನಡೆಸಿ ಸೋನಿಯಾ ಗಾಂಧಿಯವರು ಮೊದಲನೇ ಆರೋಪಿ, ರಾಹುಲ್ ಗಾಂಧಿಯವರು ಎರಡನೇ ಆರೋಪಿ ಎಂದಿದೆ. ಏನು ಮಾಡಿದ್ದಾರೋ ಅದನ್ನು ಅನುಭವಿಸಲೇಬೇಕಾಗುತ್ತಿದೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಅದನ್ನು ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.