Murder Case: ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತ್ನಿಯ ಕೊಂದು ಮಂಚದೊಳಗಿಟ್ಟು ಪತಿ ಪರಾರಿ
Belagavi news: ನಾಲ್ಕು ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. ಮೂರು ದಿನದ ಹಿಂದೆ ಸಾಕ್ಷಿ ಕಂಬಾರಳನ್ನು ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ಆಕಾಶ್ ಪರಾರಿ ಆಗಿದ್ದಾನೆ. ಇತ್ತ ಊರಿಗೆ ಹೋಗಿದ್ದ ಅತ್ತೆ ಮನೆಗೆ ಹಿಂದಿರುಗಿದಾಗ ಹತ್ಯೆ ಬೆಳಕಿಗೆ ಬಂದಿದೆ.

-

ಬೆಳಗಾವಿ: ಪತ್ನಿಯನ್ನು (wife) ಕೊಂದು (Murder case) ಶವವನ್ನು ಮಂಚದೊಳಗಿಟ್ಟು ಬೆಡ್ ಮುಚ್ಚಿ ಪತಿ (Husband) ಪರಾರಿ ಆಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸಾಕ್ಷಿ ಕಂಬಾರ (20) ಕೊಲೆಯಾದ ಪತ್ನಿ. ಆಕಾಶ್ ಪರಾರಿಯಾಗಿರುವ ಪತಿ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ಕು ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. ಮೂರು ದಿನದ ಹಿಂದೆ ಸಾಕ್ಷಿ ಕಂಬಾರಳನ್ನು ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ಆಕಾಶ್ ಪರಾರಿ ಆಗಿದ್ದಾನೆ. ಇತ್ತ ಊರಿಗೆ ಹೋಗಿದ್ದ ಅತ್ತೆ ಮನೆಗೆ ಹಿಂದಿರುಗಿದಾಗ ಹತ್ಯೆ ಬೆಳಕಿಗೆ ಬಂದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಮತ್ತು ಗೋಕಾಕ್ ಡಿವೈಎಸ್ಪಿ ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.
ಇದನ್ನೂ ಓದಿ: Murder Case: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಕೇಸ್; ನಾಲ್ವರು ಆರೋಪಿಗಳು ಅರೆಸ್ಟ್
ತವರು ಮನೆಯಿಂದ ಬರಲೊಪ್ಪದ ಪತ್ನಿಯ ಕೊಲೆಗೈದ ಪತಿ
ಯಾದಗಿರಿ: ತವರು ಮನೆಯಿಂದ ಬರಲು ಒಪ್ಪದ ಪತ್ನಿಯನ್ನು ಪತಿ ಮಚ್ಚಿನಿಂದ ಕೊಚ್ಚಿ ಕೊಂದಿರುವ ಘಟನೆ ಜಿಲ್ಲೆಯ ಸುರಪುರ ನಗರದ ಡೋಣಿಗೇರಾದಲ್ಲಿ ನಡೆದಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಪತಿ, ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಹತ್ಯೆಗೀಡಾದ ಮಹಿಳೆಯನ್ನು ಮರಿಯಮ್ಮ (35) ಎಂದು ಗುರುತಿಸಲಾಗಿದೆ. ಆರೋಪಿ ಪತಿ ಸಂಗಪ್ಪ (40) ಸುರಪುರ ತಾಲೂಕಿನ ಕಕ್ಕೇರಿ ಗ್ರಾಮದ ನಿವಾಸಿಯಾಗಿದ್ದಾನೆ. ಈತ ಮತ್ತು ಪತ್ನಿ ಮರಿಯಮ್ಮ ಮಧ್ಯೆ ವೈಮನಸ್ಸು ಶುರುವಾಗಿತ್ತು.ಹೀಗಾಗಿ ಮರಿಯಮ್ಮ ತನ್ನ ಗಂಡನೊಂದಿಗೆ ಹೊಂದಾಣಿಕೆ ಆಗುತ್ತಿಲ್ಲ ಎಂದು ತವರು ಮನೆ ಸೇರಿದ್ದಳು.
ಶನಿವಾರ ತಡರಾತ್ರಿ ಸಂಗಪ್ಪ ತನ್ನ ಪತ್ನಿಯನ್ನು ಮನೆಗೆ ಕರೆಯಲು ಡೋಣಿಗೇರಾದ ಆಕೆಯ ಮನೆಗೆ ಹೋಗಿದ್ದ. ಆದರೆ, ಮರಿಯಮ್ಮ ಗಂಡನ ಮನೆಗೆ ಬರಲು ನಿರಾಕರಿಸಿ, ವಾದ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಸಂಗಪ್ಪ, ಗಂಡನ ಮಾತಿಗೆ ಮರ್ಯಾದೆ ಕೊಡಲ್ವಾ. ಮನೆಗೆ ಬಂದಿಲ್ಲ ಎಂದರೆ ಬದುಕಿರಲೇ ಬೇಡ ಎಂದು ಮನೆಯಲ್ಲಿದ್ದ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಇದರಿಂದ ತಲೆಗೆ ಗಂಭೀರ ಗಾಯವಾಗಿ, ಮರಿಯಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ನಂತರ ಸಂಗಪ್ಪ, ಸುರಪುರ ಪೊಲೀಸ್ ಠಾಣೆಗೆ ಹೋಗಿ, ತನ್ನ ಪತ್ನಿಯನ್ನು ಕೊಂದಿದ್ದೇನೆ ಎಂದ ಹೇಳಿ ಶರಣಾಗಿದ್ದಾನೆ.