Nippani News: ನಿಪ್ಪಾಣಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ; ಮಾರಕಾಸ್ತ್ರ ವಶಕ್ಕೆ
Nippani News: ನಿಪ್ಪಾಣಿ ನಗರದ ವಿವಿಧ ಭಾಗಗಳಲ್ಲಿರುವ ರೌಡಿಶೀಟರ್‌ಗಳ ವಿರುದ್ಧ ನಿಪ್ಪಾಣಿ ಪೊಲೀಸರು ಬುಧವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿ, 10 ರಿಂದ 15 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು.
ನಿಪ್ಪಾಣಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಿಢೀರ್ ದಾಳಿ. -
ನಿಪ್ಪಾಣಿ, ಜೂ.10: ನಗರದ ವಿವಿಧ ಭಾಗಗಳಲ್ಲಿರುವ ರೌಡಿಶೀಟರ್‌ಗಳ ವಿರುದ್ಧ ನಿಪ್ಪಾಣಿ ಪೊಲೀಸರು ಬುಧವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿ, 10 ರಿಂದ 15 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದರು. ಸಿಪಿಐ ಬಿ.ಎಸ್. ತಳವಾರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ (Nippani News) ನಿಪ್ಪಾಣಿ ನಗರ ಪೊಲೀಸ್ ಠಾಣೆ, ಬಿಸಿಪಿಎಸ್ ಠಾಣೆ, ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಖಡಕಲಾಟ ಪೊಲೀಸ್ ಠಾಣೆಯ ಪಿಎಸ್ಐಗಳು ಸೇರಿದಂತೆ ಸುಮಾರು 40 ಸಿಬ್ಬಂದಿ ಭಾಗವಹಿಸಿದ್ದರು.
ಕಾರ್ಯಾಚರಣೆ ವೇಳೆ ಅರ್ಬಾಜ್ ಮುಲ್ಲಾ ಎಂಬಾತನಿಂದ ಒಂದು ತಲ್ವಾರ್ ವಶಪಡಿಸಿಕೊಳ್ಳಲಾಗಿದ್ದು, ಶೈಲೆಂದ್ರ ಬೊಂಧಲೆ ಎಂಬಾತನಿಂದ ಯಾವುದೇ ದಾಖಲಾತಿಗಳಿಲ್ಲದ ಬುಲೆಟ್ ಬೈಕ್ ಜಪ್ತಿ ಮಾಡಲಾಗಿದೆ. ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ನಡೆದ ಈ ದಾಳಿಯ ಸಂದರ್ಭದಲ್ಲಿ ರೌಡಿಶೀಟರ್‌ಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಗಾಂಜಾ ಸಾಗಣೆ, ಮಾರಾಟ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆ ಅಥವಾ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ಬಿ.ಎಸ್. ತಳವಾರ ಎಚ್ಚರಿಕೆ ನೀಡಿದ್ದಾರೆ.
Bidar News: ಹೆಡ್ ಮಾಸ್ಟರ್ ಕಿರುಕುಳ ಆರೋಪ; ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಅವರು ತಿಳಿಸಿದ್ದಾರೆ.