Road Accident: ಬೈಕ್‌ಗೆ ಡಿಕ್ಕಿಯಾದ ಲಾರಿ, ಒಂದೇ ಕುಟುಂಬದ ಮೂವರು ಸಾವು
ಮೃತರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣಕ್ಕೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳಗಾವಿಯ ರಾಯಬಾಗದಲ್ಲಿ ಅಪಘಾತ -
ಚಿಕ್ಕೋಡಿ, ಫೆ.19: ಲಾರಿ- ಬೈಕ್ ಮುಖಾಮುಖಿ (lorry bike hit) ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ (Road Accident) ಘಟನೆ ಬೆಳಗಾವಿ (Belagavi news) ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ ಮಗಳು ಆರಾಧ್ಯಾ (7) ಮೃತ ದುರ್ದೈವಿಗಳು.
ಮೃತ ಗಿರೇಪ್ಪಾ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣಕ್ಕೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓವರ್ ಟೆಕ್ ಮಾಡುವಾಗ ಲಾರಿ ಚಕ್ರಕ್ಕೆ ಬೈಕ್ ಸಿಲುಕಿ ಇಬ್ಬರು ಸಾವು
ಕೊಪ್ಪಳ: ಓವರ್ ಟೆಕ್ ಮಾಡುವ ವೇಳೆ ಲಾರಿ ಚಕ್ರಕ್ಕೆ ಬೈಕ್ ಸಿಲುಕಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಎಂಬ ಗ್ರಾಮದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ನಿವಾಸಿಗಳಾದ ಶ್ರೀನಿವಾಸ್ (26) ಹಾಗೂ ಸಿದ್ದನಗೌಡ (25) ಮೃತ ಸವಾರರು ಎಂದು ತಿಳಿದುಬಂದಿದೆ. ಸಂಬಂಧಿಕರೊಬ್ಬರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಶ್ರೀನಿವಾಸ್ ಸ್ನೇಹಿತನ ಜತೆಗೆ ತೆರಳುತ್ತಿದ್ದರು. ಮುಸಲಾಪುರದಿಂದ ಬೈಕ್‌ನಲ್ಲಿ ಹಿರೇ ಅರಳಹಳ್ಳಿಗೆ ಇಬ್ಬರು ತೆರಳುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಲಾರಿ ಕೆಳಗಡೆ ಸಿಲುಕಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತು ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಕ್ತಸಿಕ್ತ ವ್ಯಾಲೆಂಟೈನ್ಸ್ ಡೇ; ನಿಲ್ಲಿಸಿದ್ದ ಕಾರೊಳಗೆ ಯುವ ಪ್ರೇಮಿಗಳ ಮೃತದೇಹ ಪತ್ತೆ: ನಿಗೂಢ ಸಾವಿಗೆ ಕಾರಣವೇನು?