ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

CPI Self Harming: ಎಸ್‌ಡಿಆರ್‌ಎಫ್ʼಯ ಸಿಪಿಐ ಶ್ರೀಶೈಲ ಚೌಗಲಾ ನೇಣು ಬಿಗಿದು ಆತ್ಮಹತ್ಯೆ

ಚೌಗಲಾ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಅವರು ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಎಸ್‌ಡಿಆರ್‌ಎಫ್ʼಯ ಸಿಪಿಐ ಶ್ರೀಶೈಲ ಚೌಗಲಾ ನೇಣು ಬಿಗಿದು ಆತ್ಮಹತ್ಯೆ

-

Profile
Ashok Nayak May 28, 2026 11:50 AM

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲಾ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ.

ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿ ಯ ಬಾಗಿಲು ಮುರಿದು ಅವರನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ:Chinthamani Crime: ಮರೀನಾಯಕನಹಳ್ಳಿ ಗೇಟ್ ಬಳಿ ಅಕ್ರಮ ದಂಧೆಗೆ ಬ್ರೇಕ್: ಮೂವರ ವಿರುದ್ಧ ಪ್ರಕರಣ ದಾಖಲು!

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಘಟನೆ ಕುರಿತು ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರ ಆತ್ಮಹತ್ಯೆಗೆ ಕಾರಣವೇನು ಎಂಬುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.

ಚೌಗುಲಾ ಅವರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 9.30ಕ್ಕೆ ನಡೆಯಲಿದೆ.