ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Belagavi Accident: ಬೆಳಗಾವಿಯಲ್ಲಿ ಟ್ಯಾಂಕರ್‌ ಹರಿದು ಮೂವರು ಕಾರ್ಮಿಕರ ದುರ್ಮರಣ

Belagavi Accident: ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ಯಾಂಕರ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರ ಮೇಲೆ ಟ್ಯಾಂಕರ್‌ ಹರಿದಿದೆ.

ಬೆಳಗಾವಿಯಲ್ಲಿ ಟ್ಯಾಂಕರ್‌ ಹರಿದು ಮೂವರು ಕಾರ್ಮಿಕರ ದುರ್ಮರಣ

Profile Prabhakara R Jun 1, 2025 2:06 PM

ಬೆಳಗಾವಿ: ಜಿಲ್ಲೆಯ ಕಿತ್ತೂರು ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Belagavi Accident) ನಡೆದಿದೆ. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ದುರಂತ ಸಂಭವಿಸಿದೆ. ಟ್ಯಾಂಕರ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದ್ದು, ಈ ವೇಳೆ ಟ್ಯಾಂಕರ್ ಕೂಡ ಪಲ್ಟಿಯಾಗಿದೆ. ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಕಿ ಮೇಲೆ 6 ಮಂದಿ ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಬೆಳಗಾವಿ: ಬಿಡದಿಯ ದಿವ್ಯಾಂಗ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲು ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಬಾಲಕಿ ಮೇಲೆ ಆರು ಜನ ಕಾಮುಕರು ಸಾಮೂಹಿಕ ಅತ್ಯಾಚಾರ(Physical Abuse) ಎಸಗಿರುವ ಹೀನ ಕೃತ್ಯವೊಂದು ಬೆಳಗಾವಿಯಲ್ಲಿ ನಡೆದಿದೆ. ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು 6 ಜನರಿಂದ ಅತ್ಯಾಚಾರ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿದೆ. ಕಾಮುಕರು ಬಾಲಕಿ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. 6 ತಿಂಗಳ ಹಿಂದೆ ಗ್ಯಾಂಗ್ ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದರು. ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ. ಇದೀಗ ಬಾಲಕಿಯ ಪೋಷಕರು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ಸುದ್ದಿಯನ್ನೂ ಓದಿ: Goa Murder Case: ವಿದೇಶಿ ಯುವತಿ ಮೇಲೆ ಅತ್ಯಾಚಾರ-ಕೊಲೆ; ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಕೆಲವು ದಿನಗಳ ಹಿಂದೆ ಇಂತಹದ್ದೇ ಭೀಕರ ಘಟನೆಯೊಂದು ಮಹಾರಾಷ್ಟ್ರದಲ್ಲಿನಡೆದಿತ್ತು. ಕುಡಿದ ಅಮಲಿನಲ್ಲಿ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಇಬ್ಬರು ಸಹಪಾಠಿಗಳು ಹಾಗೂ ಒಬ್ಬ ಸ್ನೇಹಿತ ಅತ್ಯಾಚಾರ (Physical Abuse) ಎಸಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿತ್ತು. ಮೇ 18ರಂದು ಮಧ್ಯರಾತ್ರಿ ಸಿನಿಮಾ ನೋಡಲು ಯುವತಿ ತನ್ನ ಸ್ಮೇಹಿತರ ಜತೆ ತೆರಳಿದ್ದಳು.‌ ನಂತರ ಯುವತಿಯನ್ನು ಖಾಸಗಿ ಫ್ಯಾಟ್‌ಗೆ ಕರೆದೊಯ್ದಿದ್ದಾರೆ. ಈ ಸಂದರ್ಭದಲ್ಲಿ ಯುವತಿಗೆ ಪಾನೀಯದಲ್ಲಿ ಮತ್ತು ಬರಿಸುವ ಮಾತ್ರೆ ಕೊಟ್ಟು ಪ್ರಜ್ಞೆ ತಪ್ಪಿದ ನಂತರ ಮೂವರಿಂದ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಜ್ಞೆ ಬಂದ ನಂತರ ಯುವತಿ ಬೆಳಗಾವಿಯ ತಮ್ಮ ಮನೆಯವರಿಗೆ ಘಟನೆ ಕುರಿತು ವಿವರಿಸಿದ ನಂತರದಲ್ಲಿ ಸಾಂಗ್ಲಿಯ ವಿಶ್ರಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪುಣೆ, ಸೋಲಾಪುರ ಮತ್ತು ಸಾಂಗ್ಲಿ ಮೂಲದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಮೇ 27ರ ವರೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ‌.‌