ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Soil collapse: ಒಳ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು

Soil collapse: ಬೆಳಗಾವಿಯ ಕನಕದಾಸ ಸರ್ಕಲ್ ಬಳಿ ಒಳ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.

ಒಳ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ಸಾವು

Profile Prabhakara R Apr 16, 2025 4:24 PM

ಬೆಳಗಾವಿ: ಒಳ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ (Soil collapse) ಬೆಳಗಾವಿಯ ಕನಕದಾಸ ಸರ್ಕಲ್ ಬಳಿ ನಡೆದಿದೆ. ಮೂಡಲಗಿ ತಾಲೂಕಿನ ಪಟಗುಂಡಿ ಗ್ರಾಮದ ಬಸವರಾಜ ದುಂಡಪ್ಪ ಸರವಿ(38), ಶಿವಲಿಂಗ ಮಾರುತಿ ಸರವಿ (20) ಮೃತರು. ಮಣ್ಣಲ್ಲಿ ಸಿಲುಕಿಕೊಂಡಿದ್ದ ಇಬ್ಬರ ರಕ್ಷಣೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು‌. ಆದರೆ, ಅಷ್ಟರ ವೇಳೆಗೆ ಮಣ್ಣಿನಡಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯಿಂದ ಕಾಮಗಾರಿ ಕೈಗೊಳ್ಳಲಾಗಿತ್ತು. ಜೆಸಿಬಿ ಬಳಸಿ ಒಳ ಚರಂಡಿ ಕಾಮಗಾರಿ ಮಾಡುವಾಗ ಈ ಅವಘಡ ಸಂಭವಿಸಿದೆ. ಅಪಾರ ಪ್ರಮಾಣದ ಮಣ್ಣು ಕುಸಿದ ಪರಿಣಾಮ ಇವರಿಬ್ಬರೂ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Reels Case: ಮಚ್ಚು ಹಿಡಿದು ರೀಲ್ಸ್‌ ಮಾಡಿದ ರಜತ್‌ಗೆ ಮತ್ತೆ ಪೊಲೀಸ್‌ ನೋಟೀಸ್

ಮಲಗಿದ್ದ ತಂದೆ, ತಾಯಿ, ಅಕ್ಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ!

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ (Bengaluru Crime News) ನಡೆದಿದ್ದು, ವಿದ್ಯಾರ್ಥಿಯೊಬ್ಬ (Student) ಮನೆಯಲ್ಲಿ ಮಲಗಿದ್ದ ತಂದೆ, ತಾಯಿ, ಅಕ್ಕನಿಗೆ ಯದ್ವಾತದ್ವಾ ಚಾಕುವಿನಿಂದ (Assault Case) ಇರಿದಿದ್ದಾನೆ. ಸೋಲದೇವಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇದರಹಳ್ಳಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಮಲಗಿದ್ದ ಅಕ್ಕ, ತಾಯಿ, ತಂದೆ ಮೇಲೆ ಮಗ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಮಗನ ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ.

ವಿನಾಯಕ ಲೇಔಟ್ ನಿವಾಸಿ ಕೃಷ್ಣಮೂರ್ತಿ (51) ಪಾರ್ವತಮ್ಮ (48) ನಯನಾ (24) ಹಲ್ಲೆಗೆ ಒಳಗಾದವರು. ಮೂವರಿಗೂ ಕೂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಹರ್ಷ ಎಂಬ ವಿದ್ಯಾರ್ಥಿ ತನ್ನ ಪೋಷಕರ ಮೇಲೆಯೇ ಈ ಕೃತ್ಯ ಎಸಗಿದ್ದಾನೆ. ಚಾಕುವಿನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾನೆ. ಕಾರದ ಪುಡಿ ಎರಚಿ ಮಗನ ಕೃತ್ಯ ತಡೆಯಲು ಮುಂದಾದರೂ ಆತ ಹಲ್ಲೆ ಮಾಡುವುದನ್ನು ಬಿಡಲಿಲ್ಲ. ವಿಚಾರ ತಿಳಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಗಿಲು ಒಡೆದು ಮನೆಯವರನ್ನು ರಕ್ಷಿಸಿದ್ದಾರೆ. ಈತ ಮಾನಸಿಕ ಅಸ್ವಸ್ಥನೇ, ಕೌಟುಂಬಿಕ ಕಲಹದ ಕಾರಣದಿಂದ ಹೀಗೆ ಮಾಡಿದ್ದಾನೆಯೇ ಎಂಬುದು ತಿಳಿದು ಬರಬೇಕಿದೆ.