ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Savadatti news: ಮಹಿಳೆಯರು ಶಿಕ್ಷಣ ಮತ್ತು ಆರೋಗ್ಯದ ಕಡೆ ಗಮನಹರಿಸಿ : ಡಾ. ನಯನಾ ಭಸ್ಮೆ

ಮಹಿಳೆಯರು ಕೇವಲ ಮನೆಗೆ ಸೀಮಿತವಾಗದೆ ಸ್ವಯಂ ಉದ್ಯೋಗಗಳಲ್ಲಿ ತೊಡಗಿಕೊಳ್ಳಬೇಕು. ಸ್ವಯಂ ಉದ್ಯೋಗದ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ಇಂದಿನ ಸ್ಪರ್ದಾ ಯುಗದಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಸಬಲರಾಗಬೇಕಿದೆ ಎಂದರು.

ಮಹಿಳೆಯರು ಶಿಕ್ಷಣ ಮತ್ತು ಆರೋಗ್ಯದ ಕಡೆ ಗಮನಹರಿಸಿ

-

Profile
Ashok Nayak Oct 25, 2026 9:08 AM

ಸವದತ್ತಿ: ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊತ್ತ ಮಹಿಳೆಯರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಡಾ.ನಯನಾ ಭಸ್ಮೆ ಹೇಳಿದರು.

ಇಲ್ಲಿನ ಗಾಂಧಿಚೌಕದಲ್ಲಿ ನಡೆದ ನಾಡಹಬ್ಬ ನವರಾತ್ರಿ ಉತ್ಸವ(Navaratri Utsava) ಕಾರ್ಯಕ್ರಮ ದಲ್ಲಿ ಮಾತನಾಡಿ, ಕುಟುಂಬದ ಮತ್ತು ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಣವು ಮಹಿಳೆಯರಿಗೆ ಆರೋಗ್ಯಕರ ಅಭ್ಯಾಸಗಳು ಮತ್ತು ರೋಗಗಳ ತಡೆಗಟ್ಟುವಿಕೆಯ ಬಗ್ಗೆ ಅರಿವು ಮೂಡಿಸುತ್ತದೆ. ಕಾರಣ ಪ್ರತಿಯೊಬ್ಬರೂ ಸುಶಿಕ್ಷಿತರಾಗಬೇಕು. ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳು ಮಕ್ಕಳ ಜ್ಞಾನ ವೃದ್ಧಿ, ಮಾನಸಿಕ ನೆಮ್ಮದಿಗೆ ಸಹಕಾರಿಯಾಗಿದೆ.

ಇದನ್ನೂ ಓದಿ: Savadatti News: ಐತಿಹಾಸಿಕ ಗ್ರಾಮದೇವಿ ಜಾತ್ರೆ ಆರಂಭ: ದೇವಿಯರನ್ನು ಕಣ್ತುಂಬಿಕೊಂಡು ಭಂಡಾರದಲ್ಲಿ ಮಿಂದೆದ್ದ ಭಕ್ತ ಸಾಗರ

ಮಹಿಳೆಯರು ಕೇವಲ ಮನೆಗೆ ಸೀಮಿತವಾಗದೆ ಸ್ವಯಂ ಉದ್ಯೋಗಗಳಲ್ಲಿ ತೊಡಗಿಕೊಳ್ಳಬೇಕು. ಸ್ವಯಂ ಉದ್ಯೋಗದ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕು. ಇಂದಿನ ಸ್ಪರ್ದಾ ಯುಗದಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಸಬಲರಾಗಬೇಕಿದೆ ಎಂದರು.

ಡಾ.ಸವಿತಾ ಸಬನಿಸ್ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ. ಮಹಿಳೆಯರಿಗೆ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ಮಕ್ಕಳಿಗೆ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರ ನೀಡುವದು ಪ್ರತಿಯೊಬ್ಬ ಪಾಲಕರ ಜವಾಬ್ದಾರಿ ಎಂದರು.

ಈ ವೇಳೆ ಪಲ್ಲವಿ ಪದಕಿ, ವೈದ್ಯರಾದ ಕೀರ್ತಿ ಅಂತಕ್ಕನವರ, ಶೃತಿ ಬಸರಗಿ, ವಿಜಯಲಕ್ಷ್ಮೀ ಪಾಟೀಲ, ತ್ರಿವೇಣಿ ಕಬ್ಬಿನ, ಪುಷ್ಪಾ ಮಮದಾಪೂರ ಸೇರಿ ನಾಡಹಬ್ಬ ಉತ್ಸವ ಸಮಿತಿ ಸದಸ್ಯರು ಇದ್ದರು.