ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru News: ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳು ಗಮನಹರಿಸಲಿ- ತಹಸೀಲ್ದಾರ್ ಬಿ.ಎಸ್.ರಾಜೀವ್

Bengaluru News: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಮಾತ್ರ ಐಎಎಸ್, ಐಪಿಎಸ್‌ನಂತ ಉನ್ನತ ಹುದ್ದೆ ಪಡೆಯಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ಪೂರ್ವ ತಾಲೂಕು ತಹಸೀಲ್ದಾರ್ ಬಿ.ಎಸ್. ರಾಜೀವ್ ತಿಳಿಸಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳು ಗಮನಹರಿಸಲಿ: ಬಿ.ಎಸ್.ರಾಜೀವ್

Profile Siddalinga Swamy May 23, 2025 9:20 PM

ಕೆ.ಆರ್. ಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಮಾತ್ರ ಐಎಎಸ್, ಐಪಿಎಸ್‌ನಂತ ಉನ್ನತ ಹುದ್ದೆ ಪಡೆಯಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ಪೂರ್ವ ತಾಲೂಕು ತಹಸೀಲ್ದಾರ್ ಬಿ.ಎಸ್. ರಾಜೀವ್ ಅಭಿಪ್ರಾಯಪಟ್ಟರು. (Bengaluru News)‌ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸಾಂಸ್ಕೃತಿಕ ಸಮಿತಿ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸದಾ ಗುರಿಯತ್ತ ತಮ್ಮ ಚಿತ್ತವನ್ನು ನೀಡಬೇಕು ಎಂದು ಕಿವಿಮಾತು ಹೇಳಿದರು.

ಮೌಲ್ಯ, ಸಂಯಮ ವಿದ್ಯಾರ್ಥಿಗಳಿಗೆ ಕವಚವಿದ್ದಂತೆ. ಭವ್ಯ ಭಾರತದ ಕನಸು ನನಸಾಗಬೇಕಾದರೆ ವಿದ್ಯಾರ್ಥಿಗಳು ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿ ಜೀವನ ಬಂಗಾರವಿದ್ದಂತೆ. ಅದಕ್ಕೆ ಪೂರಕವಾಗಿ ಮಕ್ಕಳು ನಿರಂತರವಾಗಿ ಅಭ್ಯಾಸ ಮಾಡಿ, ಜ್ಞಾನ ಸಂಪಾದನೆ ಮಾಡಿದ್ದಲ್ಲಿ ನಿಶ್ಚಿತ ಗುರಿಯನ್ನು ಮುಟ್ಟಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದರು.

KR Puram

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಡಾ. ಪ್ರತಿಭಾ ಪಾರ್ಶ್ವನಾಥ್ ಮಾತನಾಡಿ, ಕಾಲೇಜು ಇಂದು ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು, ಇದಕ್ಕೆ ವಿದ್ಯಾರ್ಥಿಗಳ ಕೊಡುಗೆ ಅನನ್ಯವಾದುದು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಹೊರಟಿರುವ ನಿಮ್ಮಗಳ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ತಿಳಿಸಿದರು.

ಸಮಾಜ ಸೇವಕ ಪರೋಪಕಾರಿ ಶ್ರೀನಿವಾಸ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದಾರೆ. ಹಾಗಾಗಿ ನಾನಾ ಸಮಸ್ಯೆಗಳಿಂದ ಕೂಡ ಬಳಲುತ್ತಿದ್ದಾರೆ. ಸ್ಮಾರ್ಟ್ ಫೋನ್ ಜನರ ಜೀವನದಲ್ಲಿ ಎಷ್ಟು ಉಪಯುಕ್ತವಾಗಿದೆಯೋ ಅಷ್ಟೇ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಫೋನ್‌ಗೆ ದಾಸರಾಗದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸುದ್ದಿಯನ್ನೂ ಓದಿ | IOB Recruitment 2025: ಇಂಡಿಯನ್‌ ಓವರ್‌ಸಿಸ್‌ ಬ್ಯಾಂಕ್‌ನಲ್ಲಿದೆ 400 ಹುದ್ದೆ; ಹೀಗೆ ಅಪ್ಲೈ ಮಾಡಿ

ಇದೇ ವೇಳೆ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಚಾಲಕಿ ರೇಣುಕಾ ಜಾನಬೊ, ಎಲ್ಲಾ ವಿಭಾಗದ ಮುಖ್ಯಸ್ಥರು, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.