ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ; ಗಣೇಶ ಮೆರೆವಣಿಗೆ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು, ಐವರಿಗೆ ಗಾಯ

Doddaballapur Tragedy: ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ದುರ್ಘಟನೆ ನಡೆದಿದೆ. ಗಣೇಶ ವಿಸರ್ಜನೆ ಮೆರವಣಿಗೆ ನಡೆಸಲಾಗುತ್ತಿತ್ತು. ಈ ವೇಳೆ ಲಿಫ್ಟಿಂಗ್ ವಾಹನದಲ್ಲಿದ್ದ ಪಟಾಕಿ ಬಾಕ್ಸ್ ಸ್ಫೋಟಗೊಂಡಿದೆ. ಲಿಫ್ಟಿಂಗ್ ವಾಹನದ ಸೈಲೆನ್ಸರ್ ಬಿಸಿಯಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ದೊಡ್ಡಬಳ್ಳಾಪುರದಲ್ಲಿ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು!

-

Prabhakara R Prabhakara R Aug 29, 2025 8:55 PM

ಬೆಂ.ಗ್ರಾಮಾಂತರ: ಪಟಾಕಿ ಬಾಕ್ಸ್ ಸ್ಫೋಟಗೊಂಡ ಪರಿಣಾಮ ಒಬ್ಬ ಬಾಲಕ ಮೃತಪಟ್ಟು, ಪೊಲೀಸ್ ಕಾನ್ಸ್‌ಸ್ಟೇಬಲ್ ಸೇರಿ ಐವರು ಗಂಭೀರವಾಗಿ ಗಾಯಗೊಂಡಿರುವುದು (Doddaballapur Tragedy) ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದಿದೆ. ಪಟಾಕಿ ಬಾಕ್ಸ್ ಸ್ಫೋಟಗೊಂಡಿದ್ದರಿಂದ ಮುತ್ತೂರು ನಿವಾಸಿ ತನುಷ್ ರಾವ್ (15) ಎಂಬ ಬಾಲಕ ಕೊನೆಯುಸಿರೆಳೆದಿದ್ದಾನೆ.

ಫ್ರೆಂಡ್ಸ್ ಯುವಕರ ಬಳಗದಿಂದ ಗಣೇಶ ವಿಸರ್ಜನೆ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆ ಮಾಡುತ್ತಿದ್ದ ಲಿಫ್ಟಿಂಗ್ ವಾಹನದಲ್ಲಿದ್ದ ಪಟಾಕಿ ಬಾಕ್ಸ್ ಸ್ಫೋಟಗೊಂಡಿದೆ. ಲಿಫ್ಟಿಂಗ್ ವಾಹನದ ಸೈಲೆನ್ಸರ್ ಬಿಸಿಯಿಂದ ಬೆಂಕಿ ಹೊತ್ತಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ.

_Doddaballapura (1)

ಈ ದುರ್ಘಟನೆಯಲ್ಲಿ ಗಣೇಶ್(16), ಯೋಗೇಶ್(15), ಮುನಿರಾಜು(27) ಹಾಗೂ ನಾಗರಾಜು (35), ಚೇತನ್ ಶಾವಿ(13), ಕಾನ್ಸ್ ಸ್ಟೇಬಲ್ ಜಾಕೀರ್ ಹುಸೇನ್‌ಗೆ ಗಾಯಗಳಾಗಿವೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪಿಸಿ ಜಾಕೀರ್ ಕೈ ಮತ್ತು ಭುಜಕ್ಕೆ ಗಾಯವಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.