Purushottama Bharathi Swamiji: ಶೃಂಗೇರಿ ಶಾಖಾ ಮಠದ ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ ಇನ್ನಿಲ್ಲ
Sringeri shakha matha: ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾ ಮಠದ ಪೀಠಾಧ್ಯಕ್ಷರಾಗಿದ್ದರು. ಸ್ವಾಮೀಜಿಗಳು ಅಲ್ಪ ಕಾಲದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.
-
ಹರೀಶ್ ಕೇರ
Oct 24, 2025 9:19 AM
ಬೆಂಗಳೂರು, ಅ .24: ನೆಲಮಂಗಲದ (Nelamangala) ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾ ಮಠದ (Sringeri Shakha Math) ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ (75) (Purushottama Bharathi Swamiji) ವಿಧಿವಶರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶಾಖಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿಗಳು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನದವರೆಗೆ ಶಿಷ್ಯರು ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಂಸದ ಯದುವೀರ್ ಅವರ ತಾತ ವಿಧಿವಶ
ಮೈಸೂರು: ಸಂಸದ, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ತಾತ ಮದನ್ ಗೋಪಾಲ್ ರಾಜ್ ಅರಸ್ (93) (Madan Gopal Raj Urs) ಅವರು ವಯೋಸಹಜ ಅನಾರೋಗ್ಯದಿಂದ ನಗರದ ಲಕ್ಷ್ಮೀಪುರಂ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಇವರು ಯದುವೀರ್ ಅವರ ಪೂರ್ವಾಶ್ರಮದ ತಂದೆ ಸ್ವರೂಪ್ ಗೋಪಾಲ ರಾಜ್ ಅರಸ್ ಅವರ ತಂದೆಯಾಗಿದ್ದಾರೆ.
ಚಾಮುಂಡಿ ಬೆಟ್ಟದ ತಪ್ಪಲಿನ ಅರಸು ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿದೆ.ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು, ಸ್ನೇಹಿತರು, ಹಿತೈಷಿಗಳು ಭಾಗಿಯಾಗಿದ್ದರು. ತಾತ ನಿಧನರಾದ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.
ಇದನ್ನೂ ಓದಿ: SL Bhyrappa Will Exclusive: ಕುಟುಂಬ ವ್ಯಾಮೋಹ ಮೀರಿದ ಭೈರಪ್ಪ-ಅಂತಿಮ ಉಯಿಲು ಬಹಿರಂಗ