Plane Accident : ಕೆಂಪೇಗೌಡ ಏರ್ ಪೋರ್ಟ್‌ನಲ್ಲಿ ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿ; ತಪ್ಪಿದ ದುರಂತ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿಯಾಗಿದ್ದು, ಭಾರೀ ದುರಂತವೊಂದು ತಪ್ಪಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಸಣ್ಣಪುಟ್ಟ ಗಾಯಗಳಿಂದ ಟಿಟಿ ಚಾಲಕ ಪಾರಾಗಿದ್ದಾರೆ.


ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿಯಾಗಿದ್ದು, (Plane Accident) ಭಾರೀ ದುರಂತವೊಂದು ತಪ್ಪಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಸಣ್ಣಪುಟ್ಟ ಗಾಯಗಳಿಂದ ಟಿಟಿ ಚಾಲಕ ಪಾರಾಗಿದ್ದಾರೆ. ಕೆಲ ದಿನಗಳಿಂದ ಇಂಡಿಗೋ ವಿಮಾನ ಕೆಟ್ಟು ನಿಂತಿತ್ತು. ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ. ಟಿಟಿಯಲ್ಲಿ ಪ್ರಯಾಣಿಕರನ್ನು ಬಿಟ್ಟು ಬರುವಾಗ ಈ ಘಟನೆ ನಡೆದಿದೆ. ಸಿಬ್ಬಂದಿ ಬಿಟ್ಟು ಬರುವಾಗ ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆಯಿಂದ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ಪುಣೆಯಲ್ಲಿ . ಏರ್ ಇಂಡಿಯಾ ವಿಮಾನವು ಟೇಕಾಫ್ ಆಗುವ ವೇಳೆ ಟಗ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ವೇಳೆ ವಿಮಾನದಲ್ಲಿ ಸುಮಾರು 180 ಪ್ರಯಾಣಿಕರಿದ್ದರು. ಪುಣೆಯಿಂದ ಏರ್ ಇಂಡಿಯಾ ವಿಮಾನವು ಗುರುವಾರ ದೆಹಲಿಗೆ ಟೇಕಾಫ್ ಆಗುತ್ತಿತ್ತು. ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ವಿಮಾನದ ಮುಂದಿನ ತುದಿ ಮತ್ತು ಲ್ಯಾಂಡಿಂಗ್ ಗೇರ್ ಬಳಿ ಟೈರ್‌ಗೆ ಹಾನಿಯಾಗಿದೆ. ಈ ಡಿಕ್ಕಿಯ ಹೊರತಾಗಿಯೂ, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಹಾನಿ ಸಂಭವಿಸಿರಲಿಲ್ಲ.
ಈ ಸುದ್ದಿಯನ್ನೂ ಓದಿ: Aircraft collide: ನಿಲುಗಡೆ ಮಾಡಿದ್ದ ಡೆಲ್ಟಾ ವಿಮಾನಕ್ಕೆ ಜಪಾನ್ ಏರ್ಲೈನ್ಸ್ ವಿಮಾನ ಡಿಕ್ಕಿ; ವಿಡಿಯೋ ಇಲ್ಲಿದೆ
ಈ ಡಿಕ್ಕಿಗೆ ಕಾರಣ ತಿಳಿಯಲು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ತನಿಖೆಗೆ ಆದೇಶ ನೀಡಿತ್ತು. ಟ್ಯಾಕ್ಸಿ ಪ್ರಕ್ರಿಯೆಯಲ್ಲಿ ವೇಳೆ ಟಗ್ ಟ್ರಕ್ ವಿಮಾನಕ್ಕೆ ಅಪ್ಪಳಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವಿಮಾನ ಟ್ರಕ್‌ಗೆ ಡಿಕ್ಕಿ ಹೊಡೆಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.