Bengaluru Stampede: ಜೀವಗಳನ್ನು ಕಳೆದುಕೊಂಡು ಸಂಭ್ರಮಾಚರಣೆ ಬೇಕಿಲ್ಲ: ರಾಹುಲ್ ಗಾಂಧಿ ಸಂತಾಪ
Bengaluru Stampede: ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಮಾನವ ಜೀವಗಳನ್ನು ಕಳೆದುಕೊಂಡು ಯಾವುದೇ ಆಚರಣೆ ಮಾಡಬೇಕಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ

ಬೆಂಗಳೂರು : ಬೆಂಗಳೂರಿನ (Bengaluru Stampede) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (chinnaswamy stadium) ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, ದುರಂತಕ್ಕೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ದುರಂತ ಹೃದಯವಿದ್ರಾವಕ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಈ ದುಃಖದ ಸಮಯದಲ್ಲಿ, ನಾನು ಬೆಂಗಳೂರಿನ ಜನರೊಂದಿಗೆ ನಿಲ್ಲುತ್ತೇನೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಈ ದುರಂತವು ನೋವಿನ ನೆನಪಾಗಿದೆ. ಮಾನವ ಜೀವಗಳನ್ನು ಕಳೆದುಕೊಂಡು ಯಾವುದೇ ಆಚರಣೆ ಮಾಡಬೇಕಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಹೇಳಿದ್ದಾರೆ.
The tragic stampede near Bengaluru’s Chinnaswamy Stadium during RCB’s IPL victory celebrations is heartbreaking.
— Rahul Gandhi (@RahulGandhi) June 4, 2025
My condolences to the families who lost their loved ones. Wishing a swift and full recovery to all those injured.
In this hour of grief, I stand with the people of…
ನಿನ್ನೆ (ಜೂನ್ 4) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ಆಟಗಾರರನ್ನು ನೋಡಲು ಲಕ್ಷಾಂತರ ಜನಸಂದಣಿ ಸೇರಿತ್ತು. ಸ್ಟೇಡಿಯಂ ಒಳಗೆ ಜನ ತುಂಬಿ ಹೊರಗೆ ಗೇಟ್‌ಗಳ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ. ಇದಾದ ಬಳಿಕವೂ ಸ್ಟೇಡಿಯಂ ಒಳಗೆ ಆಟಗಾರರ ಜೊತೆಗೆ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸಲಾಗಿತ್ತು.
ಇದನ್ನೂ ಓದಿ: Chinnaswamy Stadium Stampede: ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಮ್ಯಾಜಿಸ್ಟ್ರಿಯಲ್ ತನಿಖೆಗೆ ಸಿಎಂ ಆದೇಶ