Theft Case: ಬೆಂಗಳೂರಿನ ಟೆಕ್ಕಿ ಮನೆಯಲ್ಲಿ 1 ಕೆಜಿ ಚಿನ್ನ, 4 ಲಕ್ಷ ಹಣ ಕಳ್ಳತನ; ದೂರು ದಾಖಲು
Bengaluru News: ಬೆಂಗಳೂರು ನಗರದ ಜ್ಞಾನಭಾರತಿಯ ಮಲ್ಲತ್ತಹಳ್ಳಿಯಲ್ಲಿ ಕಳ್ಳತನ ನಡೆದಿದೆ. ಟೆಕ್ಕಿಯೊಬ್ಬರ ಮನೆಯಲ್ಲಿ 1 ಕೆಜಿ ಚಿನ್ನ, 4 ಲಕ್ಷ ರೂ. ನಗದು ಕಳ್ಳರು ಕದ್ದಿದ್ದಾರೆ. ಈ ಸಂಬಂಧ ಟೆಕ್ಕಿ, ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


ಬೆಂಗಳೂರು: ಟೆಕ್ಕಿಯೊಬ್ಬರ ಮನೆಯಲ್ಲಿ 1 ಕೆಜಿ ಚಿನ್ನ, 4 ಲಕ್ಷ ರೂ. ನಗದು ಕಳ್ಳತನ (Theft Case) ಮಾಡಿರುವುದು ನಗರದ ಜ್ಞಾನಭಾರತಿಯ ಮಲ್ಲತ್ತಹಳ್ಳಿಯಲ್ಲಿ ನಡೆದಿದೆ. ಟೆಕ್ಕಿ ನಟೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಕಳೆದ ಶುಕ್ರವಾರ ನಟೇಶ್ ಅವರು ಮೈಸೂರಿಗೆ ತೆರಳಿದ್ದರು. ಬಳಿಕ ಶನಿವಾರ ವಾಪಸ್ ಬಂದು ನೋಡಿದಾಗ ಮನೆಯಲ್ಲಿದ್ದ 1 ಕೆ.ಜಿ ಚಿನ್ನ ಹಾಗೂ 4 ಲಕ್ಷ ರೂ. ನಗದು ಸೇರಿ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದು ಕಂಡುಬಂದಿದೆ.
ಈ ಸಂಬಂಧ ನಟೇಶ್ ಅವರು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಯ ಅಕ್ಕಪಕ್ಕದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ; 15ಕ್ಕೂ ಹೆಚ್ಚು ಬೈಕ್ಗಳು ಬೆಂಕಿಗಾಹುತಿ

ಬೆಂಗಳೂರು: ಹಲಸೂರು ಮಾರ್ಕೆಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, (Fire Accident) ಬೈಕ್ ಅಂಗಡಿಗಳು ಸುಟ್ಟು ಕರಕಲಾಗಿದೆ. ಮುಂಜಾನೆ 3 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಸ್ಥಳೀಯ ನಿವಾಸಿಗಳು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ 15 ಬೈಕ್ ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕೃತ್ಯವನ್ನ ಕೆಲ ಕಿಡಿಗೇಡಿಗಳೇ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. 15 ಬೈಕ್ಗಳು ಹೊತ್ತಿ ಉರಿಯುವ ವೇಳೆ ಒಂದು ತರಕಾರಿ ಅಂಗಡಿಗೂ ಬೆಂಕಿ ತಗುಲಿದ್ದು, ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಯಾರೋ ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡಿದ್ದಾರೆಂದು ಎನ್ನುವ ಶಂಕೆ ವ್ಯಕ್ತವಾಗಿದೆ.
ಬೆಳಗ್ಗೆ 3 ಗಂಟೆ ಸುಮಾರಿಗೆ ಮೂವರು ಬಂದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಸಿಸಿಟಿವಿಯಲ್ಲಿ ಮೂವರು ಅನಾಮಿಕರು ಓಡಾಡಿರುವುದು ಕಂಡು ಬಂದಿದೆ. ಇವರೇ ಬೆಂಕಿ ಇಟ್ಟಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಬೆಂಕಿಯಿಂದ ಹಲಸೂರು ಮಾರ್ಕೆಟ್‌ನ ಕಾಳಿಯಮ್ಮನ್ ದೇವಸ್ಥಾನಕ್ಕೂ ಹಾನಿಯಾಗಿದೆ. ಬೆಂಕಿ ಕೆನ್ನಾಲಿಗೆಗೆ ಪುರಾತನ ಅರಳಿ ಮರ ಕೂಡ ಸುಟ್ಟು ಹೋಗಿದೆ. 600 ವರ್ಷ ಹಳೆಯ ದೇವಸ್ಥಾನದ ಗೋಡೆಯೂ ಹಾಗೂ ಅರಳಿ ಮರಕ್ಕೂ ಹಾನಿಯಾದ ಕಾರಣ, ದೇವಸ್ಥಾನ ಆಡಳಿತ ಮಂಡಳಿ ಸೂಕ್ತ ನ್ಯಾಯ ಕೊಡಿಸಬೇಕೆಂದು ಆಗ್ರಹಿಸಿದೆ.
ಈ ಸುದ್ದಿಯನ್ನೂ ಓದಿ: Fire accident: 5 ಅಂತಸ್ತಿನ ಶಾಪಿಂಗ್ ಮಾಲ್‌ನಲ್ಲಿ ಭಾರಿ ಬೆಂಕಿ ಅವಘಡ-50 ಜನ ಬಲಿ
ಹೊತ್ತಿಯುರಿದ ಬಟ್ಟೆ ಅಂಗಡಿ
ಮೈಸೂರಿನಲ್ಲಿ ಭೀಕರ ಅಗ್ನಿ ಅವಘಡ ನಡೆದಿದ್ದು ಬಟ್ಟೆ ಅಂಗಡಿಗೆ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ಸುಮಾರು ಒಂದೂವರೆ ಕೋಟಿ ರೂಪಾಯಿ ಬಟ್ಟೆ ಸೇರಿದಂತೆ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮೈಸೂರಿನ ಟಿ. ನರಸೀಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದ್ದು, ಕೂಡಲೇ ಅಗ್ನಿಶಾಮಕದಳ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಕೋಟ್ಯಾಂತರ ರೂಪಾಯಿ ವಸ್ತುಗಳು ಸುಟ್ಟು ಭಸ್ಮವಾಗಿವೆ.