ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Maddur Stone Pelting: ಮದ್ದೂರು ಕಲ್ಲು ತೂರಾಟ ಪ್ರಕರಣ; 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Maddur Stone Pelting: ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಸೆ.7ರಂದು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ ನಾಲ್ವರು ಹೋಮ್‌ಗಾರ್ಡ್​​ಗಳು ಸೇರಿ 8 ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 22 ಆರೋಪಿಗಳನ್ನು ಬಂಧಿಸಲಾಗಿದೆ.

ಮದ್ದೂರು ಕಲ್ಲು ತೂರಾಟ; 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

-

Prabhakara R Prabhakara R Sep 8, 2025 9:17 PM

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ (Maddur Stone Pelting) ಸಂಬಂಧಿಸಿ ಬಂಧನವಾಗಿದ್ದ 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಆರೋಪಿಗಳನ್ನು ಮದ್ದೂರಿನ 2ನೇ ಹೆಚ್ಚುವರಿ ಸಿವಿಲ್ ಕೋರ್ಟ್‌ಗೆ ಸೋಮವಾರ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಗಳಾದ ಮೊಹಮ್ಮದ್​ ಆವೇಜ್ ಅಲಿಯಾಸ್ ಮುಳ್ಳು, ಮೊಹಮ್ಮದ್ ಇರ್ಫಾನ್ ಅಲಿಯಾಸ್ ಮಿಯಾ, ನವಾಜ್ ಖಾನ್ ಅಲಿಯಾಸ್ ನವಾಜ್, ಇಮ್ರಾನ್ ಪಾಷಾ ಅಲಿಯಾಸ್ ಇಮ್ರಾನ್, ಉಮರ್ ಫಾರೂಕ್ ಅಲಿಯಾಸ್ ಉಮರ್, ಸಯ್ಯದ್ ದಸ್ತಗಿರ್ ಅಲಿಯಾಸ್ ಸಯ್ಯದ್ ರಶೀದ್ , ಖಾಸಿಫ್ ಅಹ್ಮದ್​ ಅಲಿಯಾಸ್ ಖಾಸಿಫ್, ಅಹ್ಮದ್​ ಸಲ್ಮಾನ್ ಅಲಿಯಾಸ್ ಮುಕ್ಕುಲ್ಲಾ, ಮುಸವೀರ್ ಪಾಷಾ ಅಲಿಯಾಸ್ ಒಡೆಯ, ಕಲಾಂದರ್ ಖಾನ್, ಸುಮೇರ್ ಪಾಷಾ, ಮೊಹಮ್ಮದ್ ಅಜೀಜ್, ಇನಾಯತ್ ಪಾಷಾ, ಮೊಹಮ್ಮದ್ ಖಲೀಂ ಅಲಿಯಾಸ್ ಕೈಫ್ ಸೇರಿ 22 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಏನಿದು ಪ್ರಕರಣ?

ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಸೆ.7ರಂದು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ (Ganesha visarjan) ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ ನಾಲ್ವರು ಹೋಮ್‌ಗಾರ್ಡ್​​ಗಳು ಸೇರಿ 8 ಜನರು ಗಾಯಗೊಂಡಿದ್ದರು. ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ 22 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಸದ್ಯ ಮದ್ದೂರಿನಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.

ಮಸೀದಿಯಿಂದಲೇ ಲೈಟ್ ಆಫ್ ಮಾಡಿ ಕಲ್ಲು ತೂರಾಟ (Stone Pelting) ಮಾಡಿದ್ದಾರೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ. ಬೀದಿಯಲ್ಲಿ ಮೆರವಣಿಗೆ ಮೂಲಕ ಬಂದ ಗಣಪ, ಮಸೀದಿ ಮುಂದೆ ಹಾದುಹೋಗುತ್ತಿದ್ದಾಗ ಸ್ಥಳದಲ್ಲಿ ದಿಢೀರ್ ಲೈಟ್​ ಆಫ್​ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ. ಮಸೀದಿ ಬಳಿ ಬಂದಾಗ ಯಾವುದೇ ಘೋಷಣೆ ಕೂಗಬಾರದು. ಮೈಕ್ ಹಾಕಬಾರದು ಎಂದು ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಮೈಕ್‌ ಆಫ್ ಮಾಡಿ ಮೆರವಣಿಗೆ ಮಾಡಲಾಗುತ್ತಿತ್ತು. ಇದಾದ ಬಳಿಕ‌ ಏಕಾಏಕಿ ಲೈಟ್ ಆಫ್ ಮಾಡಿ ಗಣಪತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಾಟ‌ ಮಾಡಲಾಗಿದೆ ಎಂದು ಹಿಂದೂಗಳು ಆರೋಪಿಸಿದ್ದಾರೆ.