ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DA Hike 2025: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ತುಟ್ಟಿಭತ್ಯೆ ಶೇ.2 ಹೆಚ್ಚಳ

Dearness Allowance: ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ತುಟ್ಟಿಭತ್ಯೆ ಶೇ.2 ಹೆಚ್ಚಳ

-

Prabhakara R Prabhakara R Oct 14, 2025 4:25 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್‌ ನ್ಯೂಸ್ ನೀಡಿದೆ. ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು (DA Hike 2025) ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು (Dearness Allowance) ರಾಜ್ಯ ಸರ್ಕಾರವು ನಗದು ರೂಪದಲ್ಲಿ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮನವಿ ಮಾಡಿದ್ದರು.

DA Hike (2)

ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಹ ಸಂಪ್ರದಾಯವಾಗಿರುತ್ತದೆ. ಹೀಗಾಗಿ ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕೋರಿದ್ದರು.

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ: 01-07-2025 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಕೋರಿದ್ದರು. ಇದರ ಬೆನ್ನಲ್ಲೇ ಶೇ.2ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಿಎಂ ಅನುಮೋದನೆ ನೀಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ಧನ್ಯವಾದ

ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.