ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

LPG shortage: ಎಲ್‌ಪಿಜಿ ಸಿಲಿಂಡರ್ ಅಭಾವ ನೀಗಿಸಲು ಒತ್ತಾಯಿಸಿ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ

ಆಹಾರಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿಯವರು ಎಲ್‌ಪಿಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ನಿರ್ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಲ್‌ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ

ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) -

Prabhakara R
Prabhakara R Mar 15, 2026 3:10 PM

ಬೆಂಗಳೂರು, ಮಾರ್ಚ್ 15: ಎಲ್‌ಪಿಜಿ ಅಭಾವವನ್ನು (LPG shortage) ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು.

ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ.. ಆಹಾರಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ. ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿಯವರು ಎಲ್‌ಪಿಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ನಿರ್ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.

ಕರ್ನಾಟಕದಲ್ಲಿ ಮಾತ್ರ ಎಲ್‌ಪಿಜಿ ಪೂರೈಕೆ ದೊಡ್ಡ ಸಮಸ್ಯೆಯಾಗಿದೆ ಎಂದು ಬಿಜೆಪಿಯ ನಾಯಕರು ಟೀಕಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯ ಬಿಜೆಪಿಯವರು ಮಾತನಾಡುವ ಬದಲು, ಎಲ್‌ಪಿಜಿ ಹೆಚ್ಚಿನ ಸರಬರಾಜಿಗೆ ಕ್ರಮ ವಹಿಸಲಿ ಎಂದು ತಿಳಿಸಿದರು.

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಎಚ್.ವೈ ಮೇಟಿ ಕುಟುಂಬದವರೂ ಒಬ್ಬರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆಯ ನವನಗರ ಮಾಧ್ಯಮದವರೊಂದಿಗೆ ಸಿಎಂ ಶನಿವಾರ ಮಾತನಾಡಿದ್ದಾರೆ.

ಉಪಚುನಾವಣೆ ಒಂದು ವಾರದೊಳಗೆ ಘೋಷಣೆಯಾಗಬಹುದು. ಯಾರಾದರೂ ಆಕಾಂಕ್ಷಿಯಾಗಬಹುದು. ಒಂದೇ ಕುಟುಂಬದಿಂದ ಎಷ್ಟು ಜನ ಕೇಳಿದರೂ ಒಬ್ಬರಿಗೆ ಹೈಕಮಾಂಡ್ ಟಿಕೆಟ್ ನೀಡುವುದು. ಉಪಚುನಾವಣೆಗೆ ಎಲ್ಲಾ ತಯಾರಿ ನಡೆದಿದ್ದು, ನಾವು ಅದಕ್ಕೆ ಸಿದ್ಧರಿದ್ದೇವೆ.

ಸಿಲಿಂಡರ್ ಸರಬರಾಜು ಸುಗಮಗೊಳಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಕೊಟ್ಟರೆ ವಿತರಣೆ ಮಾಡುತ್ತದೆ. ಆಹಾರ ಸಚಿವರು ಎರಡು ಸಭೆಗಳನ್ನು ಈಗಾಗಲೇ ನಡೆಸಿದ್ದು, ಕೇಂದ್ರ ಸಚಿವರಿಗೆ ಪತ್ರವನ್ನೂ ಬರೆಯಲಾಗಿದೆ. ಸಿಲಿಂಡರ್ ಅಭಾವವಾಗದಂತೆ ಎಚ್ಚರಿಕೆ ವಹಿಸಲು ಕೋರಲಾಗಿದೆ.

ಗ್ಯಾರಂಟಿಗಳಿಂದ ಅಭಿವೃದ್ಧಿಗೆ ಹಣವಿಲ್ಲವೆಂಬ ಬಿಜೆಪಿಯ ಆರೋಪ ಸತ್ಯಕ್ಕೆ ದೂರ: ಸಿಎಂ ಸಿದ್ದರಾಮಯ್ಯ

ಒಳಮೀಸಲಾತಿ ಕುರಿತು ಮಾರ್ಚ್ 27 ರಂದು ಸಭೆ ಕರೆಯಲಾಗಿದೆ. ಅಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.