ಗಂಡ, ಮಕ್ಕಳಿಗೆ ನಿದ್ರೆ ಮಾತ್ರೆ ಹಾಕಿ ಕಟಿಂಗ್ ಶಾಪ್‌ನವನ ಜತೆ ಮಹಿಳೆ ಪರಾರಿ; ಕಸ ಹಾಕಿ ಬರ್ತೀನಿ ಎಂದು ಹೇಳಿ ಎಸ್ಕೇಪ್!
ನಾನು ಕೆಲಸಕ್ಕೆ ಹೋದ ಸಮಯದಲ್ಲಿ ನಮ್ಮ ಏರಿಯಾದಲ್ಲಿ ಕಟಿಂಗ್ ಶಾಪ್ ನಡೆಸುತ್ತಿದ್ದ ವ್ಯಕ್ತಿ ಜತೆ ಭೇಟಿಯಾಗುತ್ತಿದ್ದಳು. ಏ.11ರ ರಾತ್ರಿ ಪತ್ನಿ ಮನೆ ಬಿಟ್ಟು ಹೋಗಿದ್ದಾಳೆ. ಮಧ್ಯರಾತ್ರಿ ಕಸ ಎಸೆದು ಬರುವುದಾಗಿ ಮನೆಯಿಂದ ಕಸದ ಬಕೆಟ್ ಹಿಡಿದು ಹೊರಟವಳು, ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ ಎಂದು ಪತಿ ಅಳಲು ತೋಡಿಕೊಂಡಿದ್ದಾರೆ.
-
ಬೆಂಗಳೂರು: ಕಸ ಹಾಕಿ ಬರುವುದಾಗಿ ಮನೆಯಿಂದ ಹೊರಗೆ ಹೋಗಿದ್ದ ಮಹಿಳೆ ಪ್ರಿಯಕರನ ಜತೆ ಪರಾರಿಯಾಗಿರುವ ಘಟನೆ ನಗರದ (Bengaluru) ಬಾಗಲಗುಂಟೆಯಲ್ಲಿ ನಡೆದಿದೆ. ಗಂಡ, ಇಬ್ಬರ ಮಕ್ಕಳನ್ನು ಬಿಟ್ಟು ಪತ್ನಿ ಪರ ಪುರುಷನ ಜತೆ ಓಡಿ ಹೋಗಿದ್ದಾಳೆ. ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶರತ್ ಕುಮಾರ್ ಎಂಬುವವರ ಪತ್ನಿ ಪ್ರಿಯಾಂಕಾ ಪರಾರಿಯಾದ ಮಹಿಳೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದು, ಬಾಗಲಗುಂಟೆಯಲ್ಲಿ ವಾಸವಾಗಿದ್ದರು. ಕಸ ಹಾಕಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಪರಪುರುಷನೊಂದಿಗೆ ಪರಾರಿಯಾಗಿದ್ದಾಳೆ. ನಾನು ಮನೆಯಲ್ಲಿರುವಾಗಲೇ ಪ್ರಿಯಾಂಕಾ ತನ್ನ ಪ್ರಿಯಕರ ಪ್ರಭು ಜತೆ ಹೋಗಿದ್ದಾಳೆ. ಅಷ್ಟೇ ಅಲ್ಲದೆ, ಊಟದಲ್ಲಿ ನಿದ್ದೆ ಮಾತ್ರೆ ಹಾಕಿ ಪರಾರಿಯಾಗಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ.
ನಾನು ಕೆಲಸಕ್ಕೆ ಹೋದ ಸಮಯದಲ್ಲಿ ಏರಿಯಾದಲ್ಲಿ ಕಟಿಂಗ್ ಶಾಪ್ ನಡೆಸುತ್ತಿದ್ದ ಪ್ರಭು ಎಂಬಾತನನ್ನು ಭೇಟಿಯಾಗುತ್ತಿದ್ದಳು. ಜತೆಗೆ ಪ್ರಭು ಪ್ರಿಯಾಂಕಾಗೆ ಮೊಬೈಲ್ ಕರೆನ್ಸಿ ಹಾಕಿಸುತ್ತಿದ್ದ. ಇದೇ ವಿಚಾರಕ್ಕಾಗಿ ನಮ್ಮ ನಡುವೆ ಆಗಾಗ ಜಗಳ ಆಗುತ್ತಿತ್ತು ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಪತಿ ಶರತ್ ಪ್ರಿಯಾಂಕಾಗೆ ಹೀಗೆಲ್ಲ ಮಾಡಬೇಡ ಎಂದು ಬುದ್ಧಿವಾದ ಹೇಳಿ ಎಚ್ಚರಿಕೆ ನೀಡಿದ್ದರು. ಆದರೆ ಏ.11ರ ರಾತ್ರಿ ಪ್ರಿಯಾಂಕಾ ಮನೆ ಬಿಟ್ಟು ಹೋಗಿದ್ದಾಳೆ. ಮಧ್ಯರಾತ್ರಿ ಕಸ ಎಸೆದು ಬರುವುದಾಗಿ ಮನೆಯಿಂದ ಕಸದ ಬಕೆಟ್ ಹಿಡಿದು ಹೊರಟಿದ್ದಾಳೆ. ಮೊದಲೇ ರೆಡಿ ಮಾಡಿ ಇಟ್ಟಿದ್ದ ಬಟ್ಟೆ ಬ್ಯಾಗ್‌ನ್ನು ಮನೆಯಲ್ಲಿನ ಪತಿ, ಮಕ್ಕಳಿಗೆ ಕಾಣದಂತೆ ಕಸದ ಜತೆ ಬ್ಯಾಗ್ ಸಮೇತ ಹೊರಗೆ ಬಂದಿದ್ದಾಳೆ.
ಒಂದು ಕೈಯಲ್ಲಿ ಕಸದ ಬಕೆಟ್ ಮತ್ತು ಮತ್ತೊಂದು ಕೈಯಲ್ಲಿ ಬ್ಯಾಗ್ ಹಿಡಿದು ಹೊರಟಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪತಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಪ್ರೇಯಸಿಯೇ ಕೈಕಾಲು ಕಟ್ಟಿಹಾಕಿ, ಬೆಂಕಿ ಹಚ್ಚಿ ಪ್ರಿಯಕರನ ಕೊಂದಿದ್ದೇಕೆ?

ಬೆಂಗಳೂರು: ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣ ಸಂಬಂಧ ಒಂದೊಂದೇ ಭಯಾನಕ ವಿಚಾರಗಳು ಹೊರಬರುತ್ತಿವೆ. ಸದ್ಯ ಆತನ ಪ್ರೇಯಸಿ ಪ್ರೇಮಾ ಪೊಲೀಸರ ವಶದಲ್ಲಿದ್ದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾಳೆ. ಕಿರಣ್‌ನ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ ಎಂದು ಆಕೆ ನೀಡಿರುವ ಹೇಳಿಕೆ ಕೇಳಿ ಖುದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.
ಪೊಲೀಸರ ತನಿಖೆಯ ವೇಳೆ ದೊರೆತ ಮಾಹಿತಿ ಪ್ರಕಾರ, ಮೃತ ಕಿರಣ್ ಮತ್ತು ಆರೋಪಿ ಯುವತಿ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರೇಮಾಗೆ ಕಿರಣ್ ಪರಿಚಯವಾಗಿದ್ದ. ಈ ವರ್ಷದ ಫೆಬ್ರವರಿ 14ರ ‘ವ್ಯಾಲೆಂಟೈನ್ಸ್ ಡೇ’ ದಿನ ಪ್ರೇಮಾ ತನ್ನ ಪ್ರೀತಿಯನ್ನು ನಿವೇದಿಸಿದ್ದಳು. ಕಿರಣ್ ಕೂಡ ಒಪ್ಪಿಕೊಂಡಿದ್ದ. ಪ್ರಿಯಕರನಿಗಾಗಿ ಪ್ರೇಮಾ ಬರೋಬ್ಬರಿ 4.5 ಲಕ್ಷ ರೂಪಾಯಿ ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದಳು. ಕೊಲೆ ಕೃತ್ಯ ನಡೆದ ದಿನವೂ ಇಬ್ಬರೂ ಸೇರಿ ಬೈಕ್ ನೋಡಲು ಹೋಗಿದ್ದರು ಎನ್ನಲಾಗಿದೆ.
ಆದರೆ, ಇತ್ತೀಚೆಗೆ ಕಿರಣ್ ಪ್ರೇಮಾಳಿಂದ ಅಂತರ ಕಾಯ್ದುಕೊಳ್ಳಲು ಶುರು ಮಾಡಿದ್ದ. ಇದರಿಂದ ಮನನೊಂದಿದ್ದ ಪ್ರೇಮಾ, ಆತನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮೊದಲೇ ತೀರ್ಮಾನಿಸಿದ್ದಳು. ಅದಕ್ಕಾಗಿಯೇ ಪೆಟ್ರೋಲ್ ಮತ್ತು ಸೀಮೆಎಣ್ಣೆಯನ್ನು ಮೊದಲೇ ಖರೀದಿಸಿ ತಂದಿಟ್ಟುಕೊಂಡಿದ್ದಳು. ಮದುವೆ ವಿಚಾರವಾಗಿ ಮನೆಯಲ್ಲಿ ಮತ್ತೆ ಗಲಾಟೆ ಆರಂಭವಾದಾಗ, ಪ್ಲಾನ್ ಪ್ರಕಾರ ಕಿರಣ್‌ನನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದಾಳೆ.
2ನೇ ಮದುವೆಗೆ ರೆಡಿಯಾಗಿದ್ದ ಶಿರಸಿ ವೈದ್ಯನ ಹತ್ಯೆಗೆ ಕಾರಣ ಬಹಿರಂಗ; ಸ್ನೇಹಿತನೇ ಕೊಲೆಗಾರ!
ಮಂಗಳವಾರ ಯುವತಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಿರಣ್ ಅಲ್ಲಿಗೆ ತೆರಳಿದ್ದ. ಈ ವೇಳೆ ಯುವತಿ ನಿನಗೆ ವೆಸ್ಟರ್ನ್ ಸ್ಟೈಲ್‌ನಲ್ಲಿ ಪ್ರಪೋಸ್ ಮಾಡ್ತೀನಿ ಎಂದು ನಂಬಿಸಿ ಕಿರಣ್‌ನ ಕಣ್ಣಿಗೆ ಬಟ್ಟೆ ಕಟ್ಟಿ, ಕೈ-ಕಾಲುಗಳನ್ನು ಹಗ್ಗದಿಂದ ಬಿಗಿದಿದ್ದಾಳೆ. ನಂತರ ಆತನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಬೆಂಕಿಯ ಜ್ವಾಲೆಯಿಂದ ತಪ್ಪಿಸಿಕೊಳ್ಳಲಾಗದೆ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ ಬ್ಯಾಡರಹಳ್ಳಿ ಪೊಲೀಸರು ಈಕೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಹತ್ಯೆಗೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.