ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿದ್ದಕ್ಕೆ ಪೊಲೀಸರಿಂದ ಕಿರುಕುಳ ಆರೋಪ; ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಬೆಂಗಳೂರು ಹೊರವಲಯದ ಸೋಲದೇವನಹಳ್ಳಿಯಲ್ಲಿ ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಮುಂದೆ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸುವುದನ್ನು ಗಮನಿಸಿದ ವಿಧಾನಸೌಧ ಪೊಲೀಸರು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದರು. -
ಬೆಂಗಳೂರು: ಶಕ್ತಿಸೌಧದ ವಿಧಾನಸೌಧದ ಮುಂದೆ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಡಾ.ನಾಗೇಂದ್ರ ಶಿರೂರು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಆತನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಲದೇವನಹಳ್ಳಿಯಲ್ಲಿ ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಬಯಲಿಗೆಳೆದಿದ್ದಕ್ಕೆ ಪೊಲೀಸರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ವಿಧಾನಸೌಧದ ಮುಂದೆ ನಾಗೇಂದ್ರ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ.
ವಿಷ ಸೇವಿಸುವುದನ್ನು ಗಮನಿಸಿದ ವಿಧಾನಸೌಧ ಪೊಲೀಸರು ತಕ್ಷಣ ವಿಷದ ಬಾಟಲಿಯನ್ನು ಕಿತ್ತುಕೊಂಡು ವ್ಯಕ್ತಿಯನ್ನು ಆಸ್ಪತ್ರೆಗೆ ರವಾನೆ ಮಾಡಿದ್ದು, ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
ಪುನೀತ್ ಕೆರೆಹಳ್ಳಿ ಜತೆ ಓಡಾಡುತ್ತಿದ್ದ ನಾಗೇಂದ್ರಪ್ಪ ಇತ್ತೀಚಿಗೆ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿ ನೀಡಿದ್ದರು. ಇದೇ ವಿಚಾರಕ್ಕೆ ಪುನೀತ್ ಕೆರೆಹಳ್ಳಿ ಮತ್ತು ನಾಗೇಂದ್ರಪ್ಪ ಮೇಲೆ ಕೇಸ್ ದಾಖಲಾಗಿತ್ತು. ಪೊಲೀಸರು ನಾಗೇಂದ್ರಪ್ಪ ಹಿಂದೆ ಬಿದ್ದಿದ್ದರು. ಹೀಗಾಗಿ ವಿಧಾನಸೌಧದ ಬಳಿ ಆಗಮಿಸಿ ವಿಷ ಸೇವಿಸಿದರು ಎನ್ನಲಾಗಿದೆ. ಸದ್ಯ ನಾಗೇಂದ್ರಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದುವೆ ಬಳಿಕ ಗಂಡನೊಂದಿಗೆ ಹಳ್ಳಿಯಲ್ಲಿ ನೆಲೆಸಲು ಇಷ್ಟವಿಲ್ಲದೆ ನವವಿವಾಹಿತೆ ಆತ್ಮಹತ್ಯೆ
ಅಂಕೋಲಾ ಫಾರ್ಮಾಸಿಸ್ಟ್ ಆತ್ಮಹತ್ಯೆ ಪ್ರಕರಣ; ವಿಡಿಯೊ ವೈರಲ್ ಮಾಡಿದ್ದ ಇಬ್ಬರ ಬಂಧನ
ಕಾರವಾರ: ಅಂಕೋಲಾದ ಫಾರ್ಮಾಸಿಸ್ಟ್ ರಾಜೀವ್ ಪಿಕಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತನ್ನನ್ನು ತೇಜೋವಧೆ ಮಾಡಿದ ಕಾರಣಕ್ಕಾಗಿ ರಾಜೀವ್ ಪಿಕಳೆ ಅವರು ಡಬಲ್ ಬ್ಯಾರಲ್ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಮಾಡಿದಂತ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುಭಾಷ್, ಹರಿಶ್ಚಂದ್ರ ಬಂಧಿತರು ಎಂದು ತಿಳಿದುಬಂದಿದೆ.
ಸೋಶಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಮನನೊಂದು ಅಂಕೋಲಾ ತಾಲೂಕಿನ ಹಟ್ಟಿಕೇರಿಯ ನಿವಾಸದ ಬಳಿ ಫಾರ್ಮಾಸಿಸ್ಟ್ ರಾಜೀವ ಪಿಕಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆಯಲ್ಲಿ ಡೆತ್ ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದಷ್ಟೇ ಇಂಗ್ಲಿಷ್‌ನಲ್ಲಿ ಬರೆಯಲಾಗಿತ್ತು.
ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿರುವ ರಾಜೀವ ಪಿಕಳೆ ಅವರು ಕೆಲ ದಿನಗಳ ಹಿಂದೆ ಅವಧಿ ಮೀರಿದ ಮಾತ್ರೆ ನೀಡಿದ ಬಗ್ಗೆ ವಿಡಿಯೋ ವೈರಲ್ ಆಗಿತ್ತು. ಈ ಘಟನೆಯಿಂದ ನೊಂದಿದ್ದ ರಾಜು ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ಇದೇ ವಿಚಾರವಾಗಿ ಆತ್ಮಹತ್ಯೆಯಂತಹ ಕಠಿಣ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ.