ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಘೋರ ಘಟನೆ; ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ದಾರುಣ ಸಾವು

ಬೆಂಗಳೂರು ನಗರದ ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರ ಬಳಿ ದುರ್ಘಟನೆ ನಡೆದಿದೆ. ಬುಧವಾರ ಬೆಳಗ್ಗೆ ಸ್ಕೂಟರ್‌ನಲ್ಲಿ ಪೊಲೀಸ್‌ ಪೇದೆಯೊಬ್ಬರು ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ಹೊರಟಿದ್ದರು. ಈ ವೇಳೆ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದು, ಸ್ಕೂಟರ್‌ ಮೇಲೆ ಬಸ್ ಹರಿದಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಶಾಲಾ ಬಸ್‌ ಹರಿದು ಇಬ್ಬರು ಪುಟ್ಟ ಮಕ್ಕಳ ಸಾವು

ಮೃತ ಮಕ್ಕಳಾದ ವರ್ಷ ಮತ್ತು ಭಾನು. -

Prabhakara R
Prabhakara R Feb 11, 2026 4:24 PM

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Bengaluru Accident) ನಡೆದಿದೆ. ನಗರದ ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರ ಬಳಿ ಈ ದುರ್ಘಟನೆ ಸಂಭವಿಸಿದೆ. ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2), ಭಾನು (4) ಮೃತರು.

ಇಂದು ಬೆಳಗ್ಗೆ ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ನಾಗನಗೌಡ ಅವರು ಹಾಲು ತರಲು ಹೊರಟಿದ್ದರು. ಥಣಿಸಂದ್ರದ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್‌ ಮೇಲೆ ಬಸ್ ಹರಿದಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ ಮಹಜರು ನಡೆಸಿದ್ದು, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ: ಪೊಲೀಸ್‌ ಠಾಣೆಗೆ ದೂರು

ಬೆಂಗಳೂರು: ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ನೀಡಿರುವ ಹೀನ ಕೃತ್ಯ ನಗರದಲ್ಲಿ ನಡೆದಿದೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸಿಯಾಗಿರುವ ಅಬ್ದುಲ್ ಹಫೀಜ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳೀಬಂದಿದೆ. ಈ ವಿಚಾರ ಮಗನಿಗೆ ಏನಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಸಹ ಹಾಕಿದ್ದಾನೆ ಎನ್ನಲಾಗಿದೆ.

ಆರೋಪಿಯು ಥಣಿಸಂದ್ರದ ಪ್ರತಿಷ್ಠಿತ ಶಾಲೆಯ ಫೌಂಡರ್‌ ಆಗಿದ್ದಾನೆ. ಮನೆಯಲ್ಲಿ ಸೊಸೆ ಒಬ್ಬಳೇ ಇದ್ದಾಗ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ನೀನು ಸುಂದರವಾಗಿದ್ದೀಯಾ, ನನ್ನ ಆಸೆ ಈಡೇರಿಸುವೆಯಾ ಎಂದು ಕಿರುಕುಳ ನೀಡಿದ್ದಾನೆ. ಇನ್ನು ಸೊಸೆಯ ಸೌಂದರ್ಯದ ಬಗ್ಗೆ ಪತ್ರ ಬರೆದು ಆಕೆಯ ಮುಂದೆಯೇ ಮಾವ ಓದುತ್ತಿದ್ದ ಎನ್ನಲಾಗಿದೆ.

ಬಿಕ್ಲು ಶಿವ ಕೊಲೆ ಕೇಸ್‌; ಶಾಸಕ ಬೈರತಿ ಬಸವರಾಜ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

ಶಾಲೆಯ ಕ್ಯಾಬಿನಲ್ಲಿ ಕೂಡ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಕೊನೆಯದಾಗಿ ಮಾವನ ಕಿರುಕುಳ ತಾಳದೆ ಪತಿಗೆ ಸಂತ್ರಸ್ತೆ ಮಹಿಳೆ ಎಲ್ಲವನ್ನು ತಿಳಿಸಿದ್ದಾಳೆ. ಮಗ ಬುದ್ಧಿವಾದ ಹೇಳಿದರು ಕೂಡ ಆರೋಪಿ ಕಿರುಕುಳ ಮುಂದುವರಿಸಿದ್ದ. ಇದೀಗ ಮಾವನ ವಿರುದ್ಧ ಸೊಸೆ ಆರ್‌.ಟಿ. ನಗರ ಠಾಣೆಗೆ ದೂರು ನೀಡಿದ್ದಾರೆ.