Bangalore Central Jail: ಭಯೋತ್ಪಾದಕರಿಗೂ ಸ್ವರ್ಗವಾಯ್ತಾ ಪರಪ್ಪನ ಅಗ್ರಹಾರ ಜೈಲು?; ಐಸಿಸ್ ಉಗ್ರನಿಗೆ ರಾಜಾತಿಥ್ಯ!
Parappana Agrahara jail in Bengaluru: ಬೆಂಗಳೂರಿನ ತಿಲಕ್‌ನಗರದವನಾದ ಜುಹಾದ್ ಹಮೀದ್ ಶಕೀಲ್ ಮೂಲಭೂತವಾದಿ ಮನಸ್ಥಿತಿಯುಳ್ಳ ಮುಸ್ಲಿಂ ಯುವಕರನ್ನು ಐಸಿಸ್‌ಗೆ ನೇಮಕ ಮಾಡುತ್ತಿದ್ದ. ಸಿರಿಯಾದ ಐಸಿಸ್ ಉಗ್ರರ ಜತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಶಕೀಲ್‌ನನ್ನು 2020ರಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿತ್ತು. 2022ರಲ್ಲಿ ಸೌದಿಯಿಂದ ಭಾರತಕ್ಕೆ ಗಡೀಪಾರಾಗಿದ್ದ. ಸದ್ಯ ಕಳೆದ ಮೂರು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿ ಶಕೀಲ್ ಶಿಕ್ಷೆ ಅನುಭವಿಸುತ್ತಿದ್ದಾನೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಮೊಬೈಲ್ ಬಳಸುತ್ತಾ, ಟೀ ಕುಡಿಯುತ್ತಿರುವುದು. -
ಬೆಂಗಳೂರು, ನ. 8: ಪರಪ್ಪನ ಅಗ್ರಹಾದ ಜೈಲಿನಲ್ಲಿ (Parappana Agrahara jail) ಶಿಕ್ಷೆ ಅನುಭವಿಸುತ್ತಿರುವ ಮೋಸ್ಟ್ ವಾಂಟೆಡ್, ಐಸಿಸ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾಗೆ ರಾಜಾತಿಥ್ಯ ನೀಡುತ್ತಿರುವ ವಿಷಯ ಬೆಳಕಿಗೆ ಬಂದಿದೆ. ಶಕೀಲ್ ರಾಜಾರೋಷವಾಗಿ ಜೈಲಿನಲ್ಲಿ ಮೊಬೈಲ್ ಫೋನ್ ಇಟ್ಕೊಂಡು ಮಾತನಾಡುತ್ತಿರುವ ವಿಡಿಯೊ ವೈರಲ್ ಆಗಿದೆ. ಇದರಿಂದ ಬೆಂಗಳೂರು ಸೆಂಟ್ರಲ್ ಜೈಲು (Bangalore Central Jail) ಭಯೋತ್ಪಾದಕರಿಗೂ ಸ್ವರ್ಗವಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ.
ಬೆಂಗಳೂರಿನ ತಿಲಕ್‌ನಗರದವನಾದ ಜುಹಾದ್ ಹಮೀದ್ ಶಕೀಲ್ ಮೂಲಭೂತವಾದಿ ಮನಸ್ಥಿತಿಯುಳ್ಳ ಮುಸ್ಲಿಂ ಯುವಕರನ್ನು ಐಸಿಸ್‌ಗೆ ನೇಮಕ ಮಾಡುತ್ತಿದ್ದ. ʻಇಕ್ರಾ ಸರ್ಕಾಲ್ʼ ಹೆಸರಿನಲ್ಲಿ ಆನ್‌ಲೈನ್ ಗ್ರೂಪ್ ರಚಿಸಿ ಉಗ್ರರ ಸಂಘಟನೆಗೆ ನೇಮಕಾತಿ ನಡೆಸುತ್ತಿದ್ದ. ಅದರಂತೆ ಬೆಂಗಳೂರಿನ ನಾಲ್ವರನ್ನೂ ಸಿರಿಯಾಗೆ ಕರೆದೊಯ್ದಿದ್ದ. ಆದರೆ ಟರ್ಕಿಯ ಇಸ್ತಾಂಬುಲ್ ರೆಫ್ಯೂಜಿ ಕ್ಯಾಂಪ್‌ನಲ್ಲೇ ಇಬ್ಬರು ಮೃತಪಟ್ಟಿದ್ದರು.
ಸಿರಿಯಾದ ಐಸಿಸ್ ಉಗ್ರರ ಜತೆ ನಿರಂತರವಾಗಿ ಸಂಪರ್ಕ ಹೊಂದಿದ್ದ ಶಕೀಲ್‌ನನ್ನು 2020ರಲ್ಲಿ ಸೌದಿ ಅರೇಬಿಯಾದಲ್ಲಿ ಬಂಧಿಸಲಾಗಿತ್ತು. 2022ರಲ್ಲಿ ಸೌದಿಯಿಂದ ಭಾರತಕ್ಕೆ ಗಡೀಪಾರಾಗಿದ್ದ. ಸದ್ಯ ಕಳೆದ ಮೂರು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಲ್ಲಿ ಶಕೀಲ್ ಶಿಕ್ಷೆ ಅನುಭವಿಸುತ್ತಿದ್ದಾನೆ. ಆದರೆ ಶಿಕ್ಷೆಗೆ ಗುರಿಯಾಗಿರುವ ಕೈದಿ ಬಿಂದಾಸ್ ಲೈಫ್ ನಡೆಸುತ್ತಿರೋದು ಕಾನೂನು ಸುವ್ಯಸ್ಥೆ ಮೇಲೆಯೇ ಅನುಮಾನ ಮೂಡುವಂತೆ ಮಾಡಿದೆ.
ಜೈಲಿನಲ್ಲಿರುವ ಐಸಿಸ್ ಉಗ್ರ ಜುಹಾದ್ ಹಮೀದ್ ವಿಡಿಯೊ
Terrorist or VIP? Bengaluru Parappana Agrahara Jail Turns Into a 5-Star Suite for ISIS Operative
— Karnataka Portfolio (@karnatakaportf) November 8, 2025
The walls of Parappana Agrahara Central Jail have once again been breached not by escape, but by corruption. A video showing ISIS terrorist Juhad Hamid Shakeel Manna casually using a… pic.twitter.com/UXexocvzgi
ಈ ಸುದ್ದಿಯನ್ನೂ ಓದಿ | Actor Darshan: ನವೆಂಬರ್ 10ಕ್ಕೆ ದರ್ಶನ್ ವಿಚಾರಣೆ ಮುಂದೂಡಿಕೆ
ಜೈಲಿನಲ್ಲಿ ವಿಕೃತ ಕಾಮಿ ಉಮೇಶ್ ರೆಡ್ಡಿ ಬಿಂದಾಸ್ ಲೈಫ್
Terror suspects, smugglers, and rapists getting royal treatment in Bengaluru jail..... What kind of justice system is this?
— Karnataka Portfolio (@karnatakaportf) November 8, 2025
Once again, shocking visuals have emerged from Parappana Agrahara Central Jail in Bengaluru, raising serious questions about the state of our prison… pic.twitter.com/5D4PfA73Gz
ಉಗ್ರನಿಗೆ ಮಾತ್ರವಲ್ಲ, ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನ ಆಗಿರುವ ನಟಿ ರನ್ಯಾ ರಾವ್ ಪ್ರಿಯಕರ ತರುಣ್ ರಾಜ್‌ಗೂ ಜೈಲಿನಲ್ಲಿ ಬಿಂದಾಸ್ ಲೈಫ್ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಉಮೆಶ್ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿಂದಾಸ್ ಲೈಫ್ ನಡೆಸುತ್ತಿದ್ದಾನೆ. ವಿಕೃತ ಕಾಮಿಗೆ ಜೈಲಿನಲ್ಲಿ ಟಿವಿ, ಮೊಬೈಲ್ ಸೌಲಭ್ಯ ನೀಡಲಾಗಿದೆ. ಜತೆಗೆ ತನಗೆ ಬೇಕಾದ ಅಡುಗೆ ಮಾಡಿಕೊಳ್ಳಲು ಜೈಲಿನೊಳಗೇ ಅಧಿಕಾರಿಗಳು ಸೌಲಭ್ಯ ಕಲ್ಪಿಸಿದ್ದಾರೆ. ಉಮೇಶ್ ರೆಡ್ಡಿ ಟಿವಿ ನೋಡ್ತಾ, ಮೊಬೈಲ್ ಇಟ್ಟುಕೊಂಡು ಮಾತನಾಡುತ್ತಿರುವ ವಿಡಿಯೊ ವೈರಲ್ ಆಗಿದೆ. ಇದರಿಂದ ಸೌಲಭ್ಯ ಕೊಟ್ಟ ಜೈಲಾಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.
ಈ ಸುದ್ದಿಯನ್ನೂ ಓದಿ | Darshan: ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್ಫ್ರೇಮ್; ಮುಂದಿನ ವಿಚಾರಣೆ ಹೇಗಿರಲಿದೆ? ಲಾಯರ್ ಫಸ್ಟ್ ರಿಯಾಕ್ಷನ್
ಉಮೇಶ್ ರೆಡ್ಡಿ ಅಷ್ಟೇ ಅಲ್ಲ, ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನ ಆಗಿರುವ ರನ್ಯಾ ರಾವ್ ಪ್ರಿಯಕರ ತೆಲುಗು ಸಿನಿಮಾ ನಟ ತರುಣ್ ರಾಜ್ ಕೂಡ್‌ಗೂ ರಾಜಾತಿಥ್ಯ ಸಿಗುತ್ತಿದೆ. ಮೊಬೈಲ್ ಜೊತೆಗೆ ಟಿವಿ ಸೌಲಭ್ಯ ಕಲ್ಪಿಸಿರೋದು ವೈರಲ್ ಆಗಿರುವ ವಿಡಿಯೋದಿಂದ ಗೊತ್ತಾಗಿದೆ.