ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ: ಮನನೊಂದು ಟೆಕ್ಕಿ ಯುವತಿ ಆತ್ಮಹತ್ಯೆ

Bengaluru Techie Death: ಮನೆಯಲ್ಲಿ ಅಡುಗೆ ಮಾಡುವ ವಿಚಾರದಲ್ಲಿ ಅತ್ತೆ ಮತ್ತು ಸೊಸೆ ನಡುವೆ ಪದೇಪದೆ ಜಗಳವಾಗುತ್ತಿತ್ತು. ಒಂದೇ ಒಲೆಯಲ್ಲಿ ಪ್ರತ್ಯೇಕವಾಗಿ ಅಡುಗೆ ಮಾಡುವ ಬಗ್ಗೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಇದರಿಂದ ಮನನೊಂದು ಸೊಸೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ: ಮನನೊಂದು ಯುವತಿ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡ ಸುಷ್ಮಾ. -

Prabhakara R
Prabhakara R Mar 4, 2026 3:04 PM

ಬೆಂಗಳೂರು: ಅಡುಗೆ ಮಾಡುವ ವಿಚಾರಕ್ಕೆ ಅತ್ತೆ ಜತೆ ನಡೆದ ಜಗಳದಿಂದ ಮನನೊಂದು ಸೊಸೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Bengaluru Techie Death) ಬೆಂಗಳೂರಿನ ಅಬ್ಬಿಗೆರೆ ಪ್ರದೇಶದಲ್ಲಿ ನಡೆದಿದೆ. ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುಷ್ಮಾ (35) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಷ್ಮಾ ಅವರು 5 ವರ್ಷಗಳ ಹಿಂದೆ ಪುನೀತ್ ಕುಮಾರ್ ಎಂಬುವರನ್ನು ವಿವಾಹವಾಗಿದ್ದರು. ಮನೆಯಲ್ಲಿ ಅಡುಗೆ ಮಾಡುವ ವಿಚಾರದಲ್ಲಿ ಅತ್ತೆ ಕಲ್ಪನಾ ಮತ್ತು ಸೊಸೆ ಸುಷ್ಮಾ ನಡುವೆ ಪದೇಪದೆ ಜಗಳವಾಗುತ್ತಿತ್ತು. ಒಂದೇ ಒಲೆಯಲ್ಲಿ ಪ್ರತ್ಯೇಕವಾಗಿ ಅಡುಗೆ ಮಾಡುವ ಬಗ್ಗೆ ಭಿನ್ನಾಭಿಪ್ರಾಯ ಉಂಟಾಗಿತ್ತು, ಅಡುಗೆ ವೇಳೆ ಸೊಸೆಗೆ ಸರಿಯಾದ ಜಾಗ ಕೊಡದೇ ಇರುವುದು, ತುಪ್ಪ/ಇತರ ಸಾಮಗ್ರಿಗಳ ವಿಚಾರದಲ್ಲಿ ಜಗಳ ತೀವ್ರಗೊಂಡಿತ್ತು ಎಂದು ತಿಳಿದುಬಂದಿದೆ.

ಮನನೊಂದ ಸುಷ್ಮಾ ಅವರು ಈ ಘಟನೆಯ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಸುಷ್ಮಾ ಅವರ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಸುಷ್ಮಾ ಪೋಷಕರು ದೂರು ನೀಡಿದ್ದಾರೆ.

ಜ್ಯೋತಿಷಿ ಹೇಳಿದ ಭವಿಷ್ಯಕ್ಕೆ ಹೆದರಿ ಮದುವೆ ನಿಶ್ಚಯವಾಗಿದ್ದ ಟೆಕ್ಕಿ ಯುವತಿ ಆತ್ಮಹತ್ಯೆ!

ದೂರಿನ ಮೇರೆಗೆ ಪೊಲೀಸರು ಪತಿ ಪುನೀತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಅತ್ತೆ ಕಲ್ಪನಾ ಅವರನ್ನು ವಶಕ್ಕೆ ಪಡೆಯಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಫೋನ್‌, ಮೆಸೇಜ್‌ಗೆ ಪ್ರತಿಕ್ರಿಯಿಸದ ಪ್ರೇಯಸಿ: ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ

ಮಂಗಳೂರು: ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಮನನೊಂದು ಸೋಮೇಶ್ವರದ ಯುವಕನೊಬ್ಬ ಒಮನ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ಪೂಜಾರಿ (32) ಮೃತ ಯುವಕ. ಈತ ಕಳೆದ ಒಂದೂವರೆ ವರ್ಷದಿಂದ ಒಮನ್‍ನ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು, ಮರಳಿ ಒಮನ್‍ಗೆ ತೆರಳಿದ್ದ. ಪ್ರೀತಿಸುತ್ತಿದ್ದ ಯುವತಿ ಇತ್ತೀಚೆಗೆ ಪುನೀತ್‍ನ ಕರೆ, ಸಂದೇಶಗಳಿಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸ್ನೇಹಿತರೊಂದಿಗೆ ಮಾಹಿತಿ ಹಂಚಿಕೊಂಡಿದ್ದ ಪುನೀತ್, ಯುವತಿ ಪ್ರೀತಿ ನಿರಾಕರಿಸಿದ್ದಾಗಿ ಹೇಳಿಕೊಂಡಿದ್ದ. ಇದೇ ಕಾರಣಕ್ಕೆ ಮನನೊಂದ ಸಾಮಾಜಿಕ ಜಾಲತಾಣದಲ್ಲಿ ಲೈವ್ ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.