ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಪದಾಧಿಕಾರಿಗಳ ನೇಮಕ
Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕವು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಬ್ರಾಹ್ಮಣ ಸಮಾಜದ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಅಧಿಕೃತವಾಗಿ ನೇಮಕ ಮಾಡಿದೆ.
ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಪದಾಧಿಕಾರಿಗಳ ನೇಮಕ ಕಾರ್ಯಕ್ರಮ. -
ಬೆಂಗಳೂರು, ಜೂ.22: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕವು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಬ್ರಾಹ್ಮಣ ಸಮಾಜದ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಅಧಿಕೃತವಾಗಿ ನೇಮಕ ಮಾಡಿದೆ. ಬೆಂಗಳೂರು ಉತ್ತರ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿ ಹರೀಶ್ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಅವರೊಂದಿಗೆ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಮಹಿಳಾ ಘಟಕದ ಅಧ್ಯಕ್ಷೆ, ಉಪಾಧ್ಯಕ್ಷೆಯರು, ಪ್ರಧಾನ ಕಾರ್ಯದರ್ಶಿಯರು, ಕಾರ್ಯದರ್ಶಿಯರು ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಪದಾಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ.
ಈ ನೇಮಕಾತಿ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಜ್ಯಾಧ್ಯಕ್ಷ ಜಿ. ಆರ್. ಪ್ರದೀಪ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ, ಉದ್ಯಮ ವಿಭಾಗದ ರಾಜ್ಯಾಧ್ಯಕ್ಷ ಶ್ರೀಧರ್, ಹಾಗೂ ಬೆಂಗಳೂರು ಉತ್ತರ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಕುಮಾರಿ ಎ. ಜಿ. ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಜಿ. ಆರ್. ಪ್ರದೀಪ್ ಮಾತನಾಡಿ, ʼಸಂಘಟನೆಯ ಯಶಸ್ಸು ಸಮರ್ಥ ಹಾಗೂ ನಿಷ್ಠಾವಂತ ನಾಯಕತ್ವದ ಮೇಲೆ ಅವಲಂಬಿತವಾಗಿದೆ. ಬೆಂಗಳೂರು ಉತ್ತರ ಜಿಲ್ಲಾ ತಂಡವು ಸಮಾಜದ ಅಭಿವೃದ್ಧಿಗೆ ಮಾದರಿಯಾಗುವಂತಹ ಕಾರ್ಯಗಳನ್ನು ಕೈಗೊಳ್ಳಲಿದೆ ಎಂಬ ವಿಶ್ವಾಸವಿದೆʼ ಎಂದು ಹೇಳಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ ಮಾತನಾಡಿ, ʼಹೊಸ ಪದಾಧಿಕಾರಿಗಳು ಸಂಘದ ಧ್ಯೇಯೋದ್ದೇಶಗಳನ್ನು ಮನೆಮನೆಗೂ ತಲುಪಿಸಿ, ಸಮಾಜದ ಎಲ್ಲಾ ವರ್ಗಗಳನ್ನು ಒಗ್ಗೂಡಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಲಿದ್ದಾರೆʼ ಎಂದು ತಿಳಿಸಿದರು.
ಉದ್ಯೋಗಿಯಾಗುವ ಬದಲು ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ: ಸಿಎಂ ಡಿ.ಕೆ. ಶಿವಕುಮಾರ್
ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘವು ನೂತನವಾಗಿ ನೇಮಕಗೊಂಡ ಎಲ್ಲಾ ಪದಾಧಿಕಾರಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದು, ಅವರ ಅವಧಿಯಲ್ಲಿ ಸಂಘವು ಇನ್ನಷ್ಟು ಪ್ರಗತಿ ಸಾಧಿಸಲಿದೆ ಎಂದು ಆಶಿಸಿದೆ.