Tea-Coffee Price Hike: ಹಾಲಿನ ಬೆನ್ನೆಲ್ಲೇ ಗ್ರಾಹಕರಿಗೆ ಹೋಟೆಲ್ಗಳಿಂದ ಶಾಕ್; ಕಾಫಿ, ಟೀ, ತಿಂಡಿ ದರ ಹೆಚ್ಚಳ!
ಹಾಲಿನ ದರ ಏರಿಕೆಯ ಜತೆಗೆ ಇತ್ತೀಚೆಗೆ ದಿನದಿಂದ ದಿನಕ್ಕೆ ಅಕ್ಕಿಯ ಬೆಲೆ ಹೆಚ್ಚಳವಾಗುತ್ತಿದೆ. ಇದು ನಿಯಂತ್ರಣಕ್ಕೆ ಬಾರದ ಕಾರಣ ಹೋಟೆಲ್ಗಳಲ್ಲಿ ಕಾಫಿ, ಟೀ, ತಿಂಡಿ-ತಿನಿಸುಗಳ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ತಿಳಿಸಿದೆ.
-
ಬೆಂಗಳೂರು: ರಾಜ್ಯದಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿಗೆ 8 ರೂ. ಹೆಚ್ಚಳ ಮಾಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿರುವ ಬೆನ್ನಲ್ಲೇ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ಹೌದು, ಕಾಫಿ, ಟೀ ಹಾಗೂ ತಿಂಡಿ-ತಿನಿಸುಗಳ ದರ ಹೆಚ್ಚಳ (Tea-Coffee Price Hike) ಮಾಡುವ ಕುರಿತು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಸುಳಿವು ನೀಡಿದೆ.
ಹಾಲಿನ ದರ ಏರಿಕೆ ಬಗ್ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಪ್ರತಿಕ್ರಿಯೆ ನೀಡಿದ್ದು, ‘ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿನ ಬೆಲೆಯನ್ನು ಪ್ರತಿ ಲೀಟರ್ಗೆ 8 ರೂ. ಏಕಾಏಕಿ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನು ಕೇವಲ 2 ರಿಂದ 3 ರೂ.ಗಳಿಗೆ ಸೀಮಿತಗೊಳಿಸಿದಲ್ಲಿ ಹೋಟೆಲ್ಗಳಲ್ಲಿ ಕಾಫಿ, ಟೀ ಅಥವಾ ತಿಂಡಿ-ತಿನಿಸುಗಳ ಬೆಲೆ ಏರಿಕೆ ಮಾಡುವ ಅಗತ್ಯವಿರುತ್ತಿರಲಿಲ್ಲ. ಈಗ ಮಾಡಲು ಹೊರಟಿರುವ ಅತಿಯಾದ ಬೆಲೆ ಏರಿಕೆಯ ಪರಿಣಾಮವಾಗಿ ಕಾಫಿ, ಟೀ ಸೇರಿದಂತೆ ಹಾಲಿನಿಂದ ತಯಾರಾಗುವ ಎಲ್ಲಾ ಆಹಾರ ಮತ್ತು ಪಾನೀಯಗಳ ಬೆಲೆಯನ್ನು ಹೆಚ್ಚಿಸುವುದು ಅನಿವಾರ್ಯವಾಗಲಿದೆ.
‘ಇದಲ್ಲದೆ ಪೌಷ್ಟಿಕ ಆಹಾರವಾಗಿ ಉಪಯೋಗಿಸುವ ಜನಸಾಮಾನ್ಯರಿಗೆ, ಹಿರಿಯ ನಾಗರಿಕರಿಗೆ, ಗರ್ಭಿಣಿಯರಿಗೆ, ಮಕ್ಕಳಿಗೆ ಇದು ಬಹುದೊಡ್ಡ ಹೊಡೆತವಾಗಲಿದೆ. ನಮ್ಮ ಹೆಮ್ಮೆಯ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯನ್ನು ಸೀಮಿತಗೊಳಿಸಿ ಇನ್ನೂ ಹೆಚ್ಚು ಉಪಯೋಗಿಸಲು ಸರ್ಕಾರ ಪ್ರೋತ್ಸಾಹಿಸಬೇಕು.
ಸರ್ಕಾರ ಡೈರಿ ಉದ್ಯಮದ ಆಡಳಿತಾತ್ಮಕ ವೆಚ್ಚವನ್ನು ಹತೋಟಿಗೆ ತರುವುದರ ಜತೆಗೆ ರೈತರಿಗೆ ಪ್ರೋತ್ಸಾಹ ಧನ ನೀಡುವ ಮೂಲಕ ಬೆಲೆ ಏರಿಕೆಯನ್ನು ಸೀಮಿತಗೊಳಿಸಬೇಕು. ಈ ರೀತಿಯ ದೊಡ್ಡ ಪ್ರಮಾಣದ ಬೆಲೆ ಏರಿಕೆ ಮಾಡುವಾಗ ಜನಸಾಮಾನ್ಯರ ಬಗ್ಗೆ ಚಿಂತನ-ಮಂತನ ನಡೆಸುವುದು ಕೂಡ ಅತ್ಯಗತ್ಯ.
Nandini milk price hike: ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 8 ರೂ. ಹೆಚ್ಚಳ; ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಹಾಲಿನ ದರ ಏರಿಕೆಯ ಜತೆಗೆ ಇತ್ತೀಚೆಗೆ ದಿನದಿಂದ ದಿನಕ್ಕೆ ಅಕ್ಕಿಯ ಬೆಲೆ ಹೆಚ್ಚಳವಾಗುತ್ತಿದೆ. ಇದು ನಿಯಂತ್ರಣಕ್ಕೆ ಬಾರದ ಕಾರಣ ಹೋಟೆಲ್ಗಳಲ್ಲಿ ಕಾಫಿ, ಟೀ, ತಿಂಡಿ-ತಿನಿಸುಗಳ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.