Maha shivaratri: ಶಿವರಾತ್ರಿ: ಭಾನುವಾರ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
ಮಹಾಶಿವರಾತ್ರಿ (Maha shivaratri) ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ (animal slaughter) ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು (meat sale) ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಫೆ.13 : ಇದೇ ಭಾನುವಾರ (ಫೆ.15) ಮಹಾಶಿವರಾತ್ರಿ (Maha shivaratri) ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ (animal slaughter) ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು (meat sale) ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ
ಬೆಂಗಳೂರು ನಗರ ಪಾಲಿಕೆಯ ಅಪರ ಆಯುಕ್ತ ಆರ್.ಲತಾ ಅವರು ಯಲಹಂಕದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಸಾಂಕೇತಿಕವಾಗಿ 20 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸುವ ಮೂಲಕ ಗುರುತಿನ ಚೀಟಿ ವಿತರಣಾ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅಪರ ಆಯುಕ್ತರು, ಬೀದಿಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ 2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಿಗೆ) ಯೋಜನೆ 2020 ರಂತೆ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ದಿನಾಂಕ:20.09.2024 ರಿಂದ 06.01.2025 ರವರೆಗೆ ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಅಧಿನಿಯಮ 2019/20 ರ ಅಧ್ಯಾಯ-02 ರಂತೆ ಸಮೀಕ್ಷೆ ನಡೆಸಿ, ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು 4445 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿರುತ್ತದೆ ಹಾಗೂ ಗುರುತಿಸಲಾಗಿರುವ ಎಲ್ಲಾ ಬೀದಿಬದಿ ವ್ಯಾಪಾರಿಗಳಿಗೆ ಅವರು ವ್ಯಾಪಾರ ನಡೆಸುತ್ತಿರುವ ಜಾಗಗಳಿಗೆ ತೆರಳಿ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.