ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Ricky Rai Case: ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಕೇಸ್‌ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು ಎಫ್‌ಐಆರ್‌; ಕಾರಿನ ರಿಜಿಸ್ಟರ್‌ ಮಾಡಿಸಿಲ್ಲ, ಟ್ಯಾಕ್ಸ್‌ ಕೂಡ ಕಟ್ಟಿಲ್ಲ!

Lamborghini stunt case: ದೆಹಲಿಯಲ್ಲಿ ಆರ್‌ಟಿಒ ಹರಾಜಿನಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದ ರಿಕ್ಕಿ ರೈ, ಬಳಿಕ ಕಲರ್ ಬದಲಿಸಿ, ಅದಕ್ಕೆ ಫ್ಯಾನ್ಸಿ ನಂಬರ್ ಪಡೆದಿದ್ದಾರೆ. ಆದರೆ, ಕರ್ನಾಟಕದಲ್ಲಿ ರಿಜಿಸ್ಟರ್ ಮಾಡಿಸದೆ ತೆರಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಾರು ಡ್ರಿಫ್ಟಿಂಗ್ ಕೇಸ್‌ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು ಎಫ್‌ಐಆರ್‌

ರಿಕ್ಕಿ ರೈ -

Prabhakara R
Prabhakara R Mar 27, 2026 2:29 PM

ಬೆಂಗಳೂರು: ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣದ ಬಳಿಕ ರಿಕ್ಕಿ ರೈ (Ricky Rai Case) ವಿರುದ್ಧ ಇದೀಗ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ದೆಹಲಿಯಲ್ಲಿ ಖರೀದಿಸಿದ್ದ ಕಾರನ್ನು ರಾಜ್ಯದಲ್ಲಿ ನೋಂದಣಿ ಮಾಡಿಸದೆ, ಕಲರ್ ಬದಲಿಸಿ ಸರ್ಕಾರಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ.

ಡ್ರಿಫ್ಟಿಂಗ್ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ದಾಖಲೆ ಪರಿಶೀಲನೆ ವೇಳೆ ಈ ಅಕ್ರಮ ಬಯಲಾಗಿದೆ. ದೆಹಲಿಯಲ್ಲಿ ಆರ್‌ಟಿಒ ಹರಾಜಿನಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದ ರಿಕ್ಕಿ, ಬಳಿಕ ಕಲರ್ ಬದಲಿಸಿ, ಅದಕ್ಕೆ KA 05 NR 0009 ಸಂಖ್ಯೆಯ ಫ್ಯಾನ್ಸಿ ನಂಬರ್ ಪಡೆದಿದ್ದಾರೆ. ಅದನ್ನು ರಾಜ್ಯದಲ್ಲಿ ರಿಜಿಸ್ಟರ್ ಮಾಡಿಸಿದ್ದರೆ ಲಕ್ಷಾಂತರ ರೂ. ಟ್ಯಾಕ್ಸ್ ಕಟ್ಟಬೇಕಿತ್ತು. ಹೀಗಾಗಿ ಇದ್ಯಾವುದನ್ನೂ ಮಾಡದೇ ನಿಯಮ ಉಲ್ಲಂಘನೆ ಮಾಡಿ ಸರ್ಕಾರಕ್ಕೆ ವಂಚಿಸಿದ್ದಾರೆ. ಇದೇ ಕಾರಣಕ್ಕೆ ಆರಂಭದಲ್ಲಿ ಕಾರಿನ ನಂಬರ್ ಪತ್ತೆಯಾಗಿದ್ದರೂ ಸಹ ಕಾರಿನ ಮಾಲೀಕರು ಪತ್ತೆಯಾಗಿರಲಿಲ್ಲ ಎಂದು ತಿಳಿದುಬಂದಿದೆ.

ʼಬಂದರೋ ಬಂದರೋ ಭಾವ ಬಂದರೋʼ; ರಿಕ್ಕಿ ರೈ ಕಾರು ಡ್ರಿಫ್ಟಿಂಗ್‌ ಮಾಡಿಲ್ಲ ಎಂದ ವಕೀಲರ ಕಾಲೆಳೆದ ಪೊಲೀಸರು!

ವಂಚನೆ ಹಿನ್ನೆಲೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ನೀಡಿದ ದೂರಿನನ್ವಯ ಕಾನೂನು ಸುವ್ಯವಸ್ಥೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದರ ನಡುವೆ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಡ್ರಿಪ್ಟಿಂಗ್ ಕೇಸ್ ಸ್ಥಳ ಪರಿಶೀಲನೆಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಈವರೆಗೆ ರಿಕ್ಕಿ ರೈ ಯಾವುದೇ ಉತ್ತರ ನೀಡಿಲ್ಲ. ಈಗ ಕಾನೂನು ಸುವ್ಯವಸ್ಥೆ ಪೊಲೀಸರಿಂದಲೂ ಪ್ರಕರಣದ ತನಿಖೆ ನಡೆಯುತ್ತಿದ್ದು, ಸಂಚಾರ ಪೊಲೀಸರು ಕಾರನ್ನು ತಮ್ಮ ವಶದಲ್ಲಿಯೇ ಇಟ್ಟುಕೊಂಡಿದ್ದಾರೆ.

ಏನಿದು ಪ್ರಕರಣ?

ಮಾರ್ಚ್ 21ರ ಮಧ್ಯರಾತ್ರಿ ನಗರದ ಅನಿಲ್‌ ಕುಂಬ್ಳೆ ವೃತ್ತದ ಬಳಿ ಲ್ಯಾಂಬೋರ್ಗಿನಿ ಕಾರಿನಿಂದ ಡ್ರಿಫ್ಟಿಂಗ್ ಮಾಡಲಾಗಿತ್ತು. ಕಾರು ಚಾಲಕನ ಅಪಾಯಕಾರಿ ಸ್ಟಂಟ್‌ ಸಮೀಪದ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪೊಲೀಸರು ಕಾರು ಸಂಚರಿಸಿದ ಮಾರ್ಗದುದ್ದಕ್ಕೂ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ರಿಕ್ಕಿ ರೈ ವಾಹನ ಚಲಾಯಿಸಿರುವುದಾಗಿ ತಿಳಿದುಬಂದಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.