KUSUM-B scheme: ಕುಸುಮ್ ಬಿ ಯೋಜನೆಯಡಿ 40 ಸಾವಿರ ಪಂಪ್ ಸೆಟ್ ನೀಡಲು ಅನುಮೋದನೆ: ಸಿಎಂ
KUSUM-B scheme: 25 ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ ಎಂದು ಸಿಎಂ ಸಿದ್ದರಾಮಯಯ ತಿಳಿಸಿದ್ದಾರೆ.


ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕುಸುಮ್ ಬಿ ಯೋಜನೆಯ (KUSUM-B scheme) ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ, ಕುಸುಮ್ ಬಿ ಯೋಜನೆಯಡಿ ಸೋಲಾರ್ ಕೃಷಿ ಪಂಪ್ ಸೆಟ್ ಅಳವಡಿಸಲು, ಕೇಂದ್ರ ಸರ್ಕಾರ ಶೇ.30, ರಾಜ್ಯ ಸರ್ಕಾರ ಶೇ.50ರಷ್ಟು ಸಬ್ಸಿಡಿ ಒದಗಿಸುತ್ತಿದ್ದು, ಫಲಾನುಭವಿಗಳು ಶೇ.20ರಷ್ಟು ಭರಿಸಬೇಕಿದೆ. ಈ ಯೋಜನೆಯಡಿ 40 ಸಾವಿರ ಪಂಪ್ ಸೆಟ್‌ಗಳಿಗೆ ಅನುಮೋದನೆ ನೀಡಲಾಗಿದ್ದು, ಇದನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿ ಮುಖ್ಯಮಂತ್ರಿ ಅವರು ಸೂಚಿಸಿದರು.
25 ಸಾವಿರ ರೈತರು ಹೆಚ್ಚುವರಿಯಾಗಿ ಕುಸುಮ್ ಬಿ ಯೋಜನೆಯಡಿ ಅರ್ಜಿ ಸಲ್ಲಿಸಿದ್ದಾರೆ. ಯೋಜನೆಯಡಿ ರಾಜ್ಯ ಸರ್ಕಾರ 752 ಕೋಟಿ ರೂ. ವೆಚ್ಚ ಮಾಡಲಿದೆ. ಯೋಜನೆ ಸಮರ್ಪಕ ಅನುಷ್ಠಾನಗೊಳಿಸಿದ ಬಳಿಕ ಸಬ್ಸಿಡಿ ಮೊತ್ತ ಕಡಿಮೆಯಾಗಲಿದೆ. 4.5 ಲಕ್ಷ ಅನಧಿಕೃತ ಐಪಿ ಸೆಟ್‌ಗಳ ಪೈಕಿ 2 ಲಕ್ಷ ಐಪಿ ಸೆಟ್ ಸಂಪರ್ಕ ಅಧಿಕೃತಗೊಳಿಸಲಾಗಿದೆ. ಈ ಅನಧಿಕೃತ ಐಪಿ ಸೆಟ್‌ಗಳನ್ನು ಕುಸುಮ್ ಬಿ ಯೋಜನೆಯಡಿ ಆದ್ಯತೆ ಮೇಲೆಗೆ ತರುವ ಬಗ್ಗೆ ಚರ್ಚೆ ನಡೆದಿದೆ ಎಂದು ಸಿಎಂ ತಿಳಿಸಿದರು.
ರೈತರಿಗೆ ಸ್ವಯಂ ವಿದ್ಯುತ್ ಮೂಲಸೌಕರ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗುತ್ತಿದ್ದು, ಟ್ರಾನ್ಸ್‌ಫಾರ್ಮರ್‌ಗಳನ್ನು ಇಲಾಖೆ ಒದಗಿಸಲಿದೆ. ನೀರಾವರಿ ಪಂಪ್ ಸೆಟ್‌ಗಳಿಗೆ 2024-25ರ ಸಾಲಿನಲ್ಲಿ 12785 ಕೋಟಿ ರೂಪಾಯಿಗಳ ಅನುದಾನ ಹಂಚಿಕೆ ಆಗಿದ್ದು, ಫೆಬ್ರವರಿ 2025 ವರೆಗೆ 11720 ಕೋಟಿ ರೂ. ಬಿಡುಗಡೆ ಆಗಿದೆ. 2025-26ರಲ್ಲಿ 16021 ಕೋಟಿ ರೂಪಾಯಿಗಳ ಆಯವ್ಯಯ ಹಂಚಿಕೆ ಆಗಿದೆ ಎಂದು ಮಾಹಿತಿ ನೀಡಿದರು.
ಇಂಧನ ಸಚಿವ ಕೆ ಜೆ ಜಾರ್ಜ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸುದ್ದಿಯನ್ನೂ ಓದಿ | CM Siddaramaiah: ಸುಳ್ಳು ಹೇಳುವ ಬಿಜೆಪಿಯವರು ಬಹಿರಂಗ ಚರ್ಚೆಗೆ ಬರುವುದಿಲ್ಲ: ಸಿಎಂ ಸಿದ್ದರಾಮಯ್ಯ
ಡಿಸಿಎಂ ಡಿಕೆ ಶಿವಕುಮಾರ್‌ಗೆ ಡೆಂಗೆ ಜ್ವರ, ಮೂರು ದಿನ ವಿಶ್ರಾಂತಿ
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರು ಡೆಂಗೆ ಜ್ವರದಿಂದ (dengue fever) ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಂದಿನಿಂದ (ಜುಲೈ 22) ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗುತ್ತಿಲ್ಲ. ಈ ಬಗ್ಗೆ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಬರೆದುಕೊಂಡಿದ್ದಾರೆ.
ಡಿಕೆ ಶಿವಕುಮಾರ್ ಅವರು ತಮ್ಮ ಅನಾರೋಗ್ಯದ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದರೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಡಿಕೆ ಶಿವಕುಮಾರ್‌ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಈ ಬಗ್ಗೆ ಸುರ್ಜೆವಾಲ ಟ್ವಿಟ್ಟರ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿರುವುದು ಖಚಿತವಾಗಿದೆ.
ಜ್ವರದಿಂದ ಬಳಲುತ್ತಿರುವ ಡಿಕೆ ಶಿವಕುಮಾರ್ ಅವರಿಗೆ ರಣದೀಪ್ ಸಿಂಗ್ ಸುರ್ಜೆವಾಲ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನಿರಂತರ ಜ್ವರದಿಂದ ಬಳಲುತ್ತಿದ್ದ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿ ಆರೋಗ್ಯ ವಿಚಾರಿಸಿದ್ದು, ನಮ್ಮ ಪಿಸಿಸಿ ಅಧ್ಯಕ್ಷರು ಮತ್ತು ಉಪ ಮುಖ್ಯಮಂತ್ರಿಗಳು ಶೀಘ್ರವಾಗಿ ಚೇತರಿಸಿಕೊಂಡು ಜನರ ಸೇವೆಯಲ್ಲಿ ನಿರತವಾಗಬೇಕೆಂದು ಹಾರೈಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ |Basava Jaya Mruthyunjaya Swamiji: ಬಸವಜಯ ಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ: ಅರವಿಂದ್ ಬೆಲ್ಲದ ಆರೋಪ
ಜುಲೈ 16ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಇದರಿಂದ ಅಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ವಿಶ್ರಾಂತಿ ಪಡೆದುಕೊಂಡಿದ್ದರು. ಈಗ ಮತ್ತೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೂರು ದಿನ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಹೀಗಾಗಿ ನಾಳೆಯಿಂದ (ಮಂಗಳವಾರ) ಮೂರು ದಿನಗಳ ಕಾಲ ಸಾರ್ವಜನಿಕ ಭೇಟಿ, ಸಭೆ-ಸಮಾರಂಭ, ಕಾರ್ಯಕ್ರಮಗಳಿಂದ ದೂರ ಉಳಿಯಲಿದ್ದಾರೆ.