ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Prajwal Revanna: ಅಜ್ಜಿ ಚೆನ್ನಮ್ಮ ಅಂತ್ಯಕ್ರಿಯೆ ವೀಕ್ಷಿಸಲು ಪ್ರಜ್ವಲ್ ರೇವಣ್ಣಗೆ ಅವಕಾಶ

Chennamma's funeral: ಮೃತ ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹೊಳೆನರಸೀಪುರದಲ್ಲಿ ಸಾರ್ವಜನಿಕರು ಹಾಗೂ ಗಣ್ಯರು ಸಾವಿರಾರು ಸಂಖ್ಯೆಯಲ್ಲಿ ಬರುತ್ತಿದ್ದು, ಇಂದು ಸಂಜೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಅಜ್ಜಿ ಚೆನ್ನಮ್ಮ ಅಂತ್ಯಕ್ರಿಯೆ ವೀಕ್ಷಿಸಲು ಪ್ರಜ್ವಲ್ ರೇವಣ್ಣಗೆ ಅವಕಾಶ

-

Prabhakara R
Prabhakara R Jul 20, 2026 2:52 PM

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (Chennamma) ಅವರ ಅಂತ್ಯ ಸಂಸ್ಕಾರ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆಸಲು ಸಿದ್ಧತೆ ನಡೆದಿದೆ. ಮತ್ತೊಂದೆಡೆ ಜೈಲಿನಲ್ಲಿರುವ ಅವರ ಮೊಮ್ಮಗ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna), ಅಜ್ಜಿಯ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಹೀಗಾಗಿ ಅವರಿಗೆ ಜೈಲಿನಿಂದಲೇ ಅಂತ್ಯಕ್ರಿಯೆ ವೀಕ್ಷಿಸಲು ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಅಜ್ಜಿಯ ಅಂತಿಮ ದರ್ಶನ ಪಡೆಯಲು ಪ್ರಜ್ವಲ್ ರೇವಣ್ಣಗೆ ಅವಕಾಶ ಮಾಡಿಕೊಡಲಾಗಿದೆ. ಇದಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಅನುಮತಿ ನೀಡಿದ್ದಾರೆ.

ಮೃತ ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ಇಂದು ಸಂಜೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಒಕ್ಕಲಿಗ ಸಂಪ್ರದಾಯದಂತೆ ಅವರ ಸ್ವಗ್ರಾಮದ ಬಳಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಹೊಳೆನರಸೀಪುರದಲ್ಲಿ ಚೆನ್ನಮ್ಮ ಅಂತಿಮಯಾತ್ರೆ

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಚೆನ್ನಮ್ಮ (Chennamma H.D Devegowda) ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭವಾಗಿದೆ. ತಾಲೂಕಿನ ಪ್ರಮುಖ ಗ್ರಾಮಗಳಲ್ಲಿ ಅಂತಿಮ ಯಾತ್ರೆ ನಡೆಯಲಿದೆ.

ಹೊಳೆನರಸೀಪುರದಿಂದ ನಾಗಲಾಪುರ, ಹುಚ್ಚನಕೊಪ್ಪಲು, ಸಂಕನಹಳ್ಳಿ, ಕಳ್ಳಿಕೊಪ್ಪಲು, ಕಟ್ಟಹಳ್ಳಿ ಬಾರೆ, ಮಾರಗೊಡನಹಳ್ಳಿ, ಪಡುವಲಹಿಪ್ಪೆ, ಹನುಮನಹಳ್ಳಿ, ಬಸವನಾಯಕನಹಳ್ಳಿ, ಹಂಗರಹಳ್ಳಿ, ಹಳೇಕೋಟೆ ಗ್ರಾಮಗಳಲ್ಲಿ ಅಂತಿಮ ಯಾತ್ರೆ ನಡೆಯಲಿದೆ.

ಮಧ್ಯಾಹ್ನ 3 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಪಾರ್ಥಿವ ಶರೀರ ತಲುಪಲಿದೆ. 45 ನಿಮಿಷಗಳ ಕಾಲ ಹರದನಹಳ್ಳಿಯಲ್ಲಿ ಪೂಜೆ ನಡೆಯಲಿದ್ದು, 4 ಗಂಟೆ ವೇಳೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ.

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಸೋಮವಾರ ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ

ಬೆಂಗಳೂರು ಜೆಪಿ ನಗರದ ಶ್ರೀ ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಕಣ್ಣನ್ ಸ್ವಾಮೀಜಿ ನೇತೃತ್ವದಲ್ಲಿ ಅಂತ್ಯ ಸಂಸ್ಕಾರದ ವಿಧಿ ವಿಧಾನ ನಡೆಯಲಿದೆ. ಕಣ್ಣನ್ ಸ್ವಾಮೀಜಿ ಜೊತೆ 15ಕ್ಕೂ ಹೆಚ್ಚು ಅರ್ಚಕರು ಭಾಗವಹಿಸಲಿದ್ದಾರೆ.