ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ, ಆರ್‌.ವಿ. ದೇಶಪಾಂಡೆಗೆ ಸಂಪುಟ ದರ್ಜೆ ಸ್ಥಾನಮಾನ

ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಹೆಸರನ್ನು ಈ ಹಿಂದೆ ವಿಧಾನಸಭೆ ಉಪಾಧ್ಯಕ್ಷರ ಹುದ್ದೆಗೆ ಸೂಚಿಸಲಾಗಿತ್ತು. ಆದರೆ, ಇದೀಗ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಎ.ಎಸ್.ಪೊನ್ನಣ್ಣ ಅವರು ಈ ಹಿಂದಿನ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದರು.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ

ಎ.ಎಸ್‌.ಪೊನ್ನಣ್ಣ ಮತ್ತು ಆರ್‌.ವಿ.ದೇಶಪಾಂಡೆ. -

Prabhakara R
Prabhakara R Aug 12, 2026 10:14 PM

ಬೆಂಗಳೂರು: ಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎ.ಎಸ್ ಪೊನ್ನಣ್ಣ (AS Ponnanna) ಅವರು ನೇಮಕವಾಗಿದ್ದಾರೆ. ಈ ಹಿಂದೆ ಪೊನ್ನಣ್ಣ ಅವರ ಹೆಸರನ್ನು ವಿಧಾನಸಭೆ ಉಪಾಧ್ಯಕ್ಷರ ಹುದ್ದೆಗೆ ಸೂಚಿಸಲಾಗಿತ್ತು. ಆದರೆ ಈಗ, ದಿಢೀರ್ ಹೆಸರು ಬದಲಾವಣೆ ಮಾಡಲಾಗಿದೆ.

ಎ.ಎಸ್ ಪೊನ್ನಣ್ಣ ಅವರು ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರಿಗೆ ಕಾನೂನು ಸಲಹೆಗಾರರಾಗಿದ್ದರು. ಅ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಇನ್ನು ಪೊನ್ನಣ್ಣ ಅವರು ಡೆಪ್ಯೂಟಿ ಸ್ಪೀಕರ್ ಸ್ಥಾನದ ಆಕಾಂಕ್ಷಿ ಆಗಿರಲಿಲ್ಲ, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು ಎಂದು ಹೇಳಲಾಗಿದೆ. ಹೀಗಾಗಿ ಅವರಿಗೆ ಇದೀಗ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಈ ಹುದ್ದೆಯಲ್ಲಿ ಸಂಪುಟ ಸ್ಥಾನಮಾನ ಸಿಗಲಿದೆ.

ಆರ್.ವಿ. ದೇಶಪಾಂಡೆಗೂ ಸಂಪುಟ ದರ್ಜೆ ಸ್ಥಾನಮಾನ

ಇನ್ನು ಹಿರಿಯ ಶಾಸಕ ಆರ್.ವಿ ದೇಶಪಾಂಡೆ (RV Deshpande) ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹುದ್ದೆಗೆ ಸಂಪುಟ ದರ್ಜೆಯ ಸಚಿವರ ಸ್ಥಾನ ಮಾನ ನೀಡಲಾಗಿದೆ.

Karnataka Cabinet Portfolios: ಡಿ.ಕೆ.ಶಿವಕುಮಾರ್‌ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ, ಅಧಿಕೃತ ಪಟ್ಟಿಗೆ ರಾಜ್ಯಪಾಲರ ಅನುಮೋದನೆ; ಯಾರಿಗೆ ಯಾವ ಖಾತೆ?

ವಿಧಾನಸಭೆ ಉಪಾಧ್ಯಕ್ಷರಾಗಿ ಮಂಕಾಳ್ ವೈದ್ಯ

ಸಚಿವ ಸ್ಥಾನದಿಂದ ವಂಚಿತರಾಗಿ ಅಸಮಾಧಾನಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರಿಗೆ ವಿಧಾನಸಭಾ ಉಪಾಧ್ಯಕ್ಷ ಸ್ಥಾನವನ್ನು ನೀಡಲು ಕಾಂಗ್ರೆಸ್‌ ವರಿಷ್ಠರು ತೀರ್ಮಾನಿಸಿದ್ದಾರೆ.