ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಶ್ವವಾಣಿ ಅಭಿಯಾನದ ಫಲಶ್ರುತಿ; ಬಂಡೀಪುರ ಮತ್ತು ನಾಗರಹೊಳೆ ಜಂಗಲ್ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ಅಸ್ತು

Bandipur and Nagarhole Safari: ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ನಂತರ ಪರಿಣಾಮಕಾರಿ ಸಾಗಣೆ ಸಾಮರ್ಥ್ಯದ ಆಧಾರದ ಮೇಲೆ ಜಂಗಲ್ ಸಫಾರಿಗೆ ಹಸಿರು ನಿಶಾನೆ ನೀಡಲಾಗಿದೆ.

ಬಂಡೀಪುರ ಮತ್ತು ನಾಗರಹೊಳೆ ಜಂಗಲ್ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭ

ಎಐ ರಚಿತ ಚಿತ್ರ -

Vishakha Bhat Heggar
Vishakha Bhat Heggar Jun 26, 2026 1:49 PM

ಬೆಂಗಳೂರು: ಹಲವು ದಿನಗಳಿಂದ ಬಂಡೀಪುರ (Bandipura) ಹಾಗೂ ನಾಗರಹೊಳೆಯಲ್ಲಿ (Nagarahole) ಬಂದ್‌ ಆಗಿದ್ದ ಜಂಗಲ್‌ ಸಫಾರಿ (Jungle Safari) ಇನ್ನು ಪುನರಾರಂಭಗೊಳ್ಳಿದೆ. ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ನಂತರ ಪರಿಣಾಮಕಾರಿ ಸಾಗಣೆ ಸಾಮರ್ಥ್ಯದ (carrying capacity) ಆಧಾರದ ಮೇಲೆ ಜಂಗಲ್ ಸಫಾರಿಗೆ ಹಸಿರು ನಿಶಾನೆ ನೀಡಲಾಗಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸಲು ಸೂಚನೆ ನೀಡಲಾಗಿದೆ.

ಕರ್ನಾಟಕವು ಪರಿಸರ ಪ್ರವಾಸೋದ್ಯಮದಲ್ಲಿ ಅಪಾರ ಸಾಮರ್ಥ್ಯ ಹೊಂದಿದ್ದು, ಸದಾ ಸುಸ್ಥಿರ ಪ್ರವಾಸೋದ್ಯಮ ಮಾದರಿ ಪಾಲಿಸಿಕೊಂಡು ಬಂದಿದೆ. ಇದು ಸ್ಥಳೀಯ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಸೃಷ್ಟಿಗೆ ಸಹಾಯ ಮಾಡುತ್ತದೆ ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸಲು ನೆರವಾಗುತ್ತದೆ.

ಪರಿಸರ ವ್ಯವಸ್ಥೆಯ ಸಮಗ್ರತೆಯನ್ನು ರಕ್ಷಿಸುವ ಜೊತೆಗೆ, ಪರಿಸರ ಪ್ರವಾಸೋದ್ಯಮವು ವನ್ಯಜೀವಿ ಸಂರಕ್ಷಣೆ, ಸ್ಥಳೀಯರ ಜೀವನೋಪಾಯ ಮತ್ತು ಪ್ರವಾಸಿಗರ ಉತ್ತಮ ಅನುಭವಕ್ಕೆ ಪೂರಕವಾದ ಪರಿಸರ ಪ್ರವಾಸೋದ್ಯಮಕ್ಕೆ ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಶ್ವವಾಣಿ ವಿಶೇಷ ಅಭಿಯಾನ

ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ಮರು ಆರಂಭಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಗಮನ ಸೆಳೆಯಲು ವಿಶ್ವವಾಣಿ ಪತ್ರಿಕೆಯಲ್ಲಿ ವಿಶೇಷ ವರದಿಗಳು ಪ್ರಕಟವಾಗಿದ್ದವು. ಸಫಾರಿ ಬಂದ್‌ನಿಂದ ಪ್ರವಾಸೋದ್ಯಮಕ್ಕೆ ಆಗುತ್ತಿರುವ ನಷ್ಟ, ರೆಸಾರ್ಟ್ ಹೋಮ್ ಸ್ಟೇ ಮಾಲೀಕರು, ನೌಕರರು, ಸಫಾರಿ ಚಾಲಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಲಾಗಿತ್ತು. ಇದೀಗ ಸರ್ಕಾರ ಪೂರ್ಣ ಪ್ರಮಾಣದ ಜಂಗಲ್‌ ಸಫಾರಿಗೆ ಅವಕಾಶ ನೀಡಿದೆ.