ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನ.15ರಂದು ‘ಬಸವ ಮಂಟಪ’ ಕೃತಿ ಲೋಕಾರ್ಪಣೆ

ಲೇಖಕ ರವಿ ಹಂಜ್ ಅವರು ರಚಿಸಿರುವ ‘ಬಸವ ಮಂಟಪ’ ಕೃತಿಯ ಲೋಕಾರ್ಪಣೆ ಸಮಾರಂಭವು ನವೆಂಬರ್ 15, ಭಾನುವಾರದಂದು ಬೆಳಿಗ್ಗೆ 10.30ಕ್ಕೆ ನಗರದ ಕೆಂಪೇಗೌಡ ರಸ್ತೆಯ ಚಿಕ್ಕಪೇಟೆ ಬಳಿಯಿರುವ ಎಫ್‌ಕೆಸಿಸಿಐ (FKCCI) ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಹಿಸಲಿದ್ದಾರೆ.

ನ.15ರಂದು ‘ಬಸವ ಮಂಟಪ’ ಪುಸ್ತಕ ಬಿಡುಗಡೆ ಸಮಾರಂಭ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Nov 13, 2026 1:32 PM

ಬೆಂಗಳೂರು: ಲೇಖಕ ರವಿ ಹಂಜ್ ಅವರು ರಚಿಸಿರುವ ‘ಬಸವ ಮಂಟಪ’ ಕೃತಿಯ ಲೋಕಾರ್ಪಣೆ ಸಮಾರಂಭವು ನವೆಂಬರ್ 15, ಭಾನುವಾರದಂದು ಬೆಳಿಗ್ಗೆ 10.30ಕ್ಕೆ ನಗರದ ಕೆಂಪೇಗೌಡ ರಸ್ತೆಯ ಚಿಕ್ಕಪೇಟೆ ಬಳಿಯಿರುವ ಎಫ್‌ಕೆಸಿಸಿಐ (FKCCI) ಸಭಾಂಗಣದಲ್ಲಿ ನಡೆಯಲಿದೆ. ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಷ. ಬ್ರ. ಡಾ. ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಬೆಂಗಳೂರಿನ ಶ್ರೀ ಸರ್ಪಭೂಷಣ ಶಿವಯೋಗಿಗಳ ಮಠದ ಪೂಜ್ಯ ಶ್ರೀ ಮ.ನಿ.ಪ್ರ. ಮಲ್ಲಿಕಾರ್ಜುನ ದೇವರು ಮತ್ತು ಮೇಲಣಗವಿ ವೀರಸಿಂಹಾಸನ ಸಂಸ್ಥಾನ ಮಠದ ಪೂಜ್ಯ ಶ್ರೀ ಷ. ಬ್ರ. ಡಾ. ಮಲಯಶಾಂತಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಮಾರಂಭ ಜರುಗಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಪೊಲೀಸ್ ಮಹಾನಿರ್ದೇಶಕರಾದ ಐಪಿಎಸ್ ಶಂಕರ ಮಹಾದೇವ ಬಿದರಿ, ವಿಶ್ವವಾಣಿ ಸಮೂಹ ಸಂಸ್ಥೆಯ ಸಂಪಾದಕರಾದ ವಿಶ್ವೇಶ್ವರ ಭಟ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್‌ ಭಾಗವಹಿಸಲಿದ್ದಾರೆ.

Vishweshwar Bhat: ಕನ್ನಡ ಪುಸ್ತಕಗಳಿಗೆ ಓದುಗರು ಇದ್ದೇ ಇದ್ದಾರೆ, ತಲುಪಿಸುವ ಕೆಲಸವಾಗಬೇಕು: ವಿಶ್ವೇಶ್ವರ ಭಟ್‌

ಕಾರ್ಯಕ್ರಮದಲ್ಲಿ ಕೃತಿಯ ಲೇಖಕರಾದ ರವಿ ಹಂಜ್ ಅವರು ಉಪಸ್ಥಿತರಿರಲಿದ್ದು, ತುಮಕೂರಿನ ಖ್ಯಾತ ಹಿಂದೂಸ್ತಾನಿ ಗಾಯಕರಾದ ಪಂಡಿತ್ ಸಿದ್ದೇಂದ್ರ ಹಿರೇಮಠ ಅವರಿಂದ ವಿಶೇಷ ಸಂಗೀತ ಗಾಯನ ಕಾರ್ಯಕ್ರಮ ಜರುಗಲಿದೆ. ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿಶ್ವವಾಣಿ ಸಿಇಒ ಚಿದಾನಂದ ಕಡಲಾಸ್ಕರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.