ಬೆಂಗಳೂರಿನ ಡೇ ಕೇರ್ ದೌರ್ಜನ್ಯ ಪ್ರಕರಣ; ಪ್ರಮುಖ ಆರೋಪಿಗಳ ಬಂಧನವಾದದ್ದು ಹೇಗೆ?
ಬ್ರೂಕ್ಫೀಲ್ಡ್ನಲ್ಲಿರುವ ಸೊಸೈಟಿ ಜನರಲ್ ಬೇಬಿ ಡೇ ಕೇರ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್ (HAL) ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು.
ಸಂಗ್ರಹ ಚಿತ್ರ -
ಬೆಂಗಳೂರು: ಬ್ರೂಕ್ಫೀಲ್ಡ್ನಲ್ಲಿರುವ ಸೊಸೈಟಿ ಜನರಲ್ ಬೇಬಿ ಡೇ ಕೇರ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್‌ಎಎಲ್ (HAL) ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಮುಖ ಆರೋಪಿ ವಿಜಯಲಕ್ಷ್ಮೀ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು. ಅಳುವ ಮಕ್ಕಳನ್ನು ವಾಷಿಂಗ್ ಮೆಷಿನ್‌ನ ಮೇಲೆ ಕೂರಿಸುವುದು, ಅವರ ಬಾಯಿಗೆ ಟಾಯ್ಲೆಟ್ ಜೆಟ್ ಸ್ಪ್ರೇ ಸಿಂಪಡಿಸುವುದು ಮತ್ತು ಸ್ನಾನಗೃಹಗಳಲ್ಲಿ ಬೀಗ ಹಾಕುವ ದೃಶ್ಯಗಳು ವೈರಲ್ ಆಗಿದ್ದವು.
ವಿಡಿಯೋದಲ್ಲಿದ್ದ ಮೂವರು ಸಿಬ್ಬಂದಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿದ್ದು, ತನಿಖೆ ವೇಳೆ ನಮಗೇನೂ ಗೊತ್ತಿಲ್ಲ ಎಂದು ಆರೋಪಿಗಳು ಉಡಾಫೆಯ ಉತ್ತರ ನೀಡಿದ್ದರು ಎನ್ನಲಾಗಿದೆ. ಆದರೆ, ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಜುವೆನೈಲ್ ಜಸ್ಟೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ನಿನ್ನೆ ಮೂವರು ಪೋಷಕರಿಂದಲೂ ಪೊಲೀಸರು ದೂರಿಗೆ ಪೂರಕವಾದ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ನಡೆದ ಸಮಯದಲ್ಲಿ ಇನ್ನುಳಿದ ಸಿಬ್ಬಂದಿ ಸ್ಥಳದಲ್ಲಿದ್ದರಾ ಮತ್ತು ಅವರ ಪಾತ್ರವೇನು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.
ಏನಿದು ಘಟನೆ?
ಬೆಂಗಳೂರಿನ ಪ್ರ ಡೇ ಕೇರ್ ಸೆಂಟರ್‌ನಲ್ಲಿ ಎರಡು ವರ್ಷದ ಪುಟ್ಟ ಮಕ್ಕಳ ಮೇಲೆ ನಡೆದಿರುವ ಕ್ರೌರ್ಯ ಇಡೀ ನಗರವನ್ನೇ ಬೆಚ್ಚಿಬೀಳಿಸಿತ್ತು. ಅಳುವ ಮಕ್ಕಳನ್ನು ವಾಷಿಂಗ್ ಮಷಿನ್ ಒಳಗೆ ಕೂರಿಸಿ ವಾಟರ್ ಜೆಟ್ ಸ್ಪ್ರೇ ಮಾಡುವುದು ಹಾಗೂ ಬಾತ್‌ರೂಮ್‌ನಲ್ಲಿ ಕೂಡಿಹಾಕಿ ದೌರ್ಜನ್ಯ ನಡೆಸಲಾಗುತ್ತಿತ್ತು. ಈ ಬಗ್ಗೆ ಈ ಹಿಂದೆ ಧ್ವನಿ ಎತ್ತಿದ್ದ ಸಿಬ್ಬಂದಿಯನ್ನೇ ಕೆಲಸದಿಂದ ವಜಾಗೊಳಿಸಿ ಸತ್ಯ ಮುಚ್ಚಿಹಾಕಲು ಯತ್ನಿಸಲಾಗಿತ್ತು ಎಂಬ ಆಘಾತಕಾರಿ ವಿಷಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತನಿಖೆಯಿಂದ ಬಯಲಾಗಿದೆ. ಸದ್ಯ ಐದು ಮಂದಿ ಕೇರ್‌ಟೇಕರ್‌ಗಳ ವಿರುದ್ಧ ಕೇಸ್ ದಾಖಲಾಗಿದ್ದು, ಸೆಂಟರ್ ಅನ್ನು ಮುಚ್ಚಲಾಗಿದೆ. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಕುರಿತು ಸಿಎಂಗೆ ಪತ್ರ ಬರೆದು ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
Gudibande News: ದಲಿತ ರೈತರ ವಿರುದ್ಧ ಅರಣ್ಯ ಇಲಾಖೆ ದೌರ್ಜನ್ಯ ಖಂಡಿಸಿ ಜೂ.29ರಂದು ಜಿಲ್ಲಾದ್ಯಂತ ಪ್ರತಿಭಟನೆ: ದಸಂಸ
ಸಂಸ್ಥೆ ಹೇಳಿದ್ದೇನು?
ಘಟನೆಗೆ ಸಂಬಂಧಿಸಿದಂತೆ ಕ್ಯಾಪ್‌ಜೆಮಿನಿ ಸಂಸ್ಥೆಯು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, "ನಮ್ಮ ಉದ್ಯೋಗಿಗಳು ಮತ್ತು ಅವರ ಕುಟುಂಬದವರ ಆರೋಗ್ಯ, ಸುರಕ್ಷತೆ ಹಾಗೂ ಯೋಗಕ್ಷೇಮಕ್ಕೆ ನಮ್ಮ ಮೊದಲ ಆದ್ಯತೆಯಾಗಿದೆ. ನಾವು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ ಮತ್ತು ಸತ್ಯಾಸತ್ಯತೆಯನ್ನು ಹೊರತರಲು ನೆರವಾಗುತ್ತಿದ್ದೇವೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನ ಕ್ಯಾಂಪಸ್‌ನಲ್ಲಿರುವ ಡೇಹಕೇರ್ ಸೌಲಭ್ಯವನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದೆ ಎಂದು ತಿಳಿಸಿದೆ.