ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru News: ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

6ನೇ ಮಹಡಿಯ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ಸಂದರ್ಭದಲ್ಲಿ ಅನಂತ್ ಕುಮಾರ್ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಡಿ.30ರ ಮಧ್ಯಾಹ್ನ ಈ ಘಟನೆ ನಡೆದಿದೆ. ಬಾಲ್ಕನಿ ಬಳಿ ತನ್ನ ಸ್ನೇಹಿತೆಯೊಂದಿಗೆ ಮಾತನಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆತ್ಮಹತ್ಯೆಯ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.

ಬಯೋಕಾನ್‌ ಉದ್ಯೋಗಿ 6ನೇ ಮಹಡಿಯಿಂದ ಬಿದ್ದು ಸಾವು

ಬಯೋಕಾನ್‌ ಸಿಬ್ಬಂದಿ ಸಾವು -

ಹರೀಶ್‌ ಕೇರ
ಹರೀಶ್‌ ಕೇರ Dec 31, 2025 10:11 AM

ಬೆಂಗಳೂರು, ಡಿ.31 : ಬೆಂಗಳೂರಲ್ಲಿ (Bengaluru News) 6ನೇ ಮಹಡಿಯಿಂದ ಬಿದ್ದು ಪ್ರತಿಷ್ಠಿತ ಬಯೋಕಾನ್ (Biocon) ಕಂಪನಿಯ ಉದ್ಯೋಗಿಯೊಬ್ಬರು ಸಾವಿಗೆ ಈಡಾಗಿದ್ದಾರೆ. ಅನಂತ್ ಕುಮಾರ್‌ (35) ಮೃತಪಟ್ಟ ಉದ್ಯೋಗಿ ಎಂದು ತಿಳಿದುಬಂದಿದೆ. ಎಲೆಕ್ಟ್ರಾನಿಕ್ ಸಿಟಿ (Eletronic city) 2ನೇ ಹಂತದ ಬಯೋಕಾನ್ ಕಂಪನಿಯಲ್ಲಿ ಘಟನೆ ನಡೆದಿದೆ. ಇದು ಆಕಸ್ಮಿಕವಾಗಿ ಸಂಭವಿಸಿರುವ ದುರ್ಘಟನೆಯೇ ಅಥವಾ ಆತ್ಮಹತ್ಯೆಯೇ (Self harming) ಎಂಬ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ.

ಅನಂತ್ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 6ನೇ ಮಹಡಿಯ ಬಾಲ್ಕನಿಯಲ್ಲಿ ಗೆಳತಿಯೊಂದಿಗೆ ಮಾತನಾಡುತ್ತಾ ಕುಳಿತಿದ್ದ ಸಂದರ್ಭದಲ್ಲಿ ಅನಂತ್ ಕುಮಾರ್ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಡಿ.30ರ ಮಧ್ಯಾಹ್ನ ಈ ಘಟನೆ ನಡೆದಿದೆ. ಬಾಲ್ಕನಿ ಬಳಿ ತನ್ನ ಸ್ನೇಹಿತೆಯೊಂದಿಗೆ ಮಾತನಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಓದುವಂತೆ ಹೇಳಿದ್ದಕ್ಕೆ ಆತ್ಮಹತ್ಯೆ

ಓದುವಂತೆ ಬುದ್ದಿ ಹೇಳಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಎಂಬವರ ಮಗಳು ಸಮನ್ವಿ ಎಂದು ಗುರುತಿಸಲಾಗಿದೆ. ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿಧ್ಯಾಬ್ಯಾಸ ಮಾಡುತ್ತಿದ್ದ ಸಮನ್ವಿಗೆ ಡಿ.26ರಂದು ಸಂಜೆ ವೇಳೆ ತಾಯಿ ಮುಂಬರುವ ಪರೀಕ್ಷೆಯ ಬಗ್ಗೆ ಓದಲು ಹೇಳಿದ್ದರು. ಇದೇ ವಿಷಯಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿತ್ತು. ಇದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.