ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru News: ಗೇಟ್ ಸಮೇತ ಕಾಂಪೌಂಡ್ ಗೋಡೆ ಕುಸಿದುಬಿದ್ದು 5 ವರ್ಷದ ಮಗು ಸಾವು

ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಮೈಮೇಲೆ ಬಿದ್ದು ಆಟವಾಡುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತ ಬಾಲಕನನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ.

ಗೇಟ್ ಸಮೇತ ಕಾಂಪೌಂಡ್ ಗೋಡೆ ಕುಸಿದುಬಿದ್ದು 5 ವರ್ಷದ ಮಗು ಸಾವು

ಚಾಟ್‌ಜಿಪಿಟಿ ರಚಿತ ಚಿತ್ರ -

Ramesh Ballamoole
Ramesh Ballamoole Jun 18, 2026 3:05 PM

ಬೆಂಗಳೂರು, ಜೂ. 18: ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಮೈಮೇಲೆ ಬಿದ್ದು ಆಟವಾಡುತ್ತಿದ್ದ ಬಾಲಕ ಮೃತಪಟ್ಟಿದ್ದಾನೆ (Bengaluru News). ಘಟನೆಯಲ್ಲಿ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಮೃತ ಬಾಲಕನನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ. ಕ್ಯಾಬ್ ಚಾಲಕ ದಾವಲ್ ಸಾಬ್ ಇತ್ತೀಚೆಗಷ್ಟೆ ಬೆಂಗಳೂರಿಗೆ ಬಂದು ಹೊಸ ಕೆಲಸದ ಹುಡುಕಾಟದಲ್ಲಿದ್ದರು. ಅವರ ಪತ್ನಿ ಹಾಗೂ ಮಗ ಅಫೀನ್ ಕೆಲವು ದಿನಗಳ ಹಿಂದೆ ಬಾಗಲೂರು ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು.

ಬುಧವಾರ (ಜೂನ್‌ 17) ಸಂಜೆ ಅಫೀನ್ ಎಂದಿನಂತೆ ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದ ಎಂದು ಮೂಲಗಳು ತಿಳಿಸಿವೆ.

ಮಂಡ್ಯದಲ್ಲಿ ಘೋರ ಘಟನೆ; ನೀರಿನ ಸಂಪ್‌ಗೆ ಬಿದ್ದು 2 ವರ್ಷದ ಮಗು ಸಾವು

ಘಟನೆ ವಿವರ

ಮಕ್ಕಳು ಆಟವಾಡುತ್ತ ಬಿ.ಸಿ. ನರಸಪ್ಪ ಎಂಬುವರ ಮನೆಯ ಕಾಂಪೌಂಡ್ ಬಳಿ ಬಂದಿದ್ದರು. ಮಕ್ಕಳು ಆಡುವ ಭರದಲ್ಲಿ ಕಬ್ಬಿಣದ ಗೇಟ್ ಹಿಡಿದು ಜೀಕಾಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಕಾಂಪೌಂಡ್ ಗೋಡೆಯು ಗೇಟ್ ಸಮೇತ ಮಕ್ಕಳ ಮೇಲೆ ಕುಸಿದು ಬಿತ್ತು. ಪರಿಣಾಮ ಅಫೀನ್ ಮೃತಪಟ್ಟರೆ. ಮತ್ತೊಂದು ಮಗು ಸಮನ್ವಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ʼʼಮಕ್ಕಳು ಕಿರುಚಾಡುತ್ತಿರುವುದನ್ನು ಕೇಳಿ ಸ್ಥಳೀಯರು ಕೂಡಲೇ ಧಾವಿಸಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಅವರನ್ನು ಹೊರತೆಗೆದು ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಗಂಭೀರ ಗಾಯಗೊಂಡಿದ್ದ ಅಫೀನ್ ಆಸ್ಪತ್ರೆಗೆ ತಲುಪುವ ಮೊದಲೇ ಕೊನೆಯುಸಿರೆಳಿದ್ದಾನೆʼʼ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಾಗಲೂರು ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಘೋರ ಘಟನೆ; ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ಬಾಲಕ ಸಾವು

ಗ್ರೈಂಡರ್‌ನಿಂದ ವಿದ್ಯುತ್‌ ಹರಿದು 4 ವರ್ಷದ ಮಗು ಸಾವು

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕಲೀಗೌಡನಹಳ್ಳಿ ಗ್ರಾಮದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಮನೆಯಲ್ಲಿ ಗ್ರೈಂಡರ್‌ನಿಂದ ವಿದ್ಯುತ್ ಹರಿದು 4 ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಪುಟ್ಟಮ್ಮ ಮತ್ತು ಆನಂದ್ ದಂಪತಿಯ ಪುತ್ರಿ ಅದ್ವಿತಾ (4) ಮೃತ ಬಾಲಕಿ. ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದ ಆಕೆ ಆನ್ ಆಗಿದ್ದ ಗ್ರೈಂಡರ್ ಮುಟ್ಟಿದ್ದರಿಂದ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಳು. ತಕ್ಷಣ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಲಿಲ್ಲ.

ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಓಡಾಡಿಕೊಂಡಿದ್ದ ಪುಟ್ಟ ಕಂದಮ್ಮನ ಅಕಾಲಿಕ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.