Fire Accident: ವಿಕ್ಟೋರಿಯಾ ಆಸ್ಪತ್ರೆಯ ವಾರ್ಡ್‌ನಲ್ಲಿ ಬೆಂಕಿ ಆಕಸ್ಮಿಕ, ರೋಗಿಗಳು ಪಾರು
Fire Accident: ವಿಕ್ಟೋರಿಯಾ ಆಸ್ಪತ್ರೆಯ ಸ್ವಿಚ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಬರ್ನ್ ವಾರ್ಡ್ನ ಸೆಮಿನಾರ್ ಕೋಣೆಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಮತ್ತು ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ವೈದ್ಯರು ಕೂಡಲೇ ಎಲ್ಲಾ ರೋಗಿಗಳನ್ನು ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಿದ್ದಾರೆ.


ಬೆಂಗಳೂರು: ರಾಜಧಾನಿಯ (Bengaluru) ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಅಗ್ನಿ ಅವಘಡ (Fire accident) ಸಂಭವಿಸಿದ್ದು, ಒಟ್ಟು 26 ರೋಗಿಗಳು ಇದ್ದ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹಾಗೂ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ವೈದ್ಯರು ಹಾಗೂ ಸಿಬ್ಬಂದಿ ದಿಢೀರ್ ಕಾರ್ಯಾಚರಣೆ ನಡೆಸಿ ಎಲ್ಲಾ ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಿದ್ದಾರೆ. ಅಗ್ನಿ ಅವಘಡದಿಂದ ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿ ಆಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಸ್ವಿಚ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಬರ್ನ್ ವಾರ್ಡ್ನ ಸೆಮಿನಾರ್ ಕೋಣೆಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಈ ವಾರ್ಡ್‌ನಲ್ಲಿ ಒಟ್ಟು 26 ರೋಗಿಗಳಿದ್ದರು. 14 ಪುರುಷರು, 5 ಮಹಿಳೆಯರು, 7 ಮಕ್ಕಳಿಗೆ ಪಕ್ಕದ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬರ್ನ್ಸ್ ವಾರ್ಡ್ ಮೊದಲ ಮಹಡಿಯಲ್ಲಿದ್ದ ಸೆಮಿನಾರ್ ಹಾಲ್ನಲ್ಲಿ ಬೆಂಕಿ ಹೊತ್ತಿಕೊಂಡ ವೇಳೆ ಪಕ್ಕದಲ್ಲೇ ಐದು ಮಂದಿ ಐಸಿಯುನಲ್ಲಿದ್ದರು. ಬೆಂಕಿ ಮತ್ತು ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ವೈದ್ಯರು ಕೂಡಲೇ ಎಲ್ಲಾ ರೋಗಿಗಳನ್ನು ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಿದ್ದಾರೆ. ಕೋಡ್ ರೆಡ್ ಹೆಸರಲ್ಲಿ ದಿಢೀರ್ ರಕ್ಷಣಾ ಕಾರ್ಯ ನಡೆಸಲಾಗಿದೆ.
ಬರ್ನ್ಸ್ ವಾರ್ಡ್ ಅಧೀಕ್ಷಕರು, ವೈದ್ಯರು, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡಿದ್ದ ಬೆಂಕಿ ನಂದಿಸುವ ಕಾರ್ಯ ಕೂಡ ನಡೆದಿದೆ. ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.