Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ
Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ನೇಮಕ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಿತು. ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ವೇತಾ ಶ್ರೀವತ್ಸ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ಅಶಾಕುಮಾರಿ ಎ.ಜಿ. ಅವರನ್ನು ನೇಮಕ ಮಾಡಲಾಯಿತು.

-

ಬೆಂಗಳೂರು: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಸಂಘಟನಾ ಶಕ್ತಿಯನ್ನು ವಿಸ್ತರಿಸುವುದರೊಂದಿಗೆ ಸಮಾಜಮುಖಿ ಚಟುವಟಿಕೆಗಳನ್ನು ಬಲಪಡಿಸಲು ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ನಗರದ (Bengaluru News) ಸಂಘದ ಕಚೇರಿಯಲ್ಲಿ ಪದಾಧಿಕಾರಿಗಳ ನೇಮಕ ಹಾಗೂ ಸನ್ಮಾನ ಕಾರ್ಯಕ್ರಮ ನಡೆದಿದೆ.
ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ವೇತಾ ಶ್ರೀವತ್ಸ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ಅಶಾಕುಮಾರಿ ಎ.ಜಿ. ಅವರನ್ನು ನೇಮಕ ಮಾಡಲಾಗಿದೆ. ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಪ್ರದೀಪ್ ಜಿ. ಆರ್. ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಜೋಶಿ ಅವರು ನೇಮಕಾತಿ ಪತ್ರಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡಿದ್ದ ರಾಜ್ಯ ಮಾಧ್ಯಮ ಪ್ರಭಾರಿ ಶಶಿ ದೇಶಪಾಂಡೆ ಅವರು ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ, ಮಾತನಾಡಿದರು.
ಈ ಸುದ್ದಿಯನ್ನೂ ಓದಿ | Karnataka Grameena Bank Recruitment 2025: ಪದವೀಧರರಿಗೆ ಗುಡ್‌ನ್ಯೂಸ್; ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿದೆ 1,425 ಹುದ್ದೆ